ಭಾರತದಲ್ಲಿ ಲಭ್ಯವಿರುವ ಐದು 108ಎಂಪಿ ಸೆನ್ಸಾರ್ ಕ್ಯಾಮೆರಾ ಫೋನ್‌ಗಳ ಲಿಸ್ಟ್ ಇಲ್ಲಿದೆ!
ಪ್ರಸ್ತುತ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ಯಾಮೆರಾ ಫೀಚರ್ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಮೊಬೈಲ್ ತಯಾರಿಕಾ ಕಂಪನಿಗಳು ಅಧಿಕ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾಗಳನ್ನು ಪರಿಚಯಿಸುತ್ತಿದ್ದಾರೆ. ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಈಗ ಮರೆಯಾಗುತ್ತಿದ್ದು, ಸದ್ಯ ಸ್ಮಾರ್ಟ್‌ಫೋನ್‌ಗಳಲ್ಲಿ ತ್ರಿವಳಿ ಮತ್ತು ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಸಾಮಾನ್ಯ ಎನ್ನುವಂತಾಗಿದೆ. ಅದರೊಂದಿಗೆ ಮುಖ್ಯ ರಿಯರ್ ಕ್ಯಾಮೆರಾ ಸೆನ್ಸಾರ್ ಈಗ 64ಎಂಪಿ ಗಡಿ ದಾಟಿದ್ದು, 108 ಮೆಗಾ ಪಿಕ್ಸಲ್ ಸೆನ್ಸಾರ್‌ಗೆ ಬಂದು ನಿಂತಿದೆ.

ಹೌದು, ಪ್ರತಿಷ್ಠಿತ ಮೊಬೈಲ್ ಕಂಪನಿಗಳು ಸೇರಿದಂತೆ ಇತರೆ ಕಂಪನಿಗಳ ಇಂದಿನ ಬಹುತೇಕ ಹೊಸ ಸ್ಮಾರ್ಟ್‌ಫೋನ್‌ಗಳು ಹೈ ಎಂಡ್ ಸೆನ್ಸಾರ್ ಪಡೆದಿರುತ್ತವೆ. ಮುಖ್ಯವಾಗಿ 64ಎಂಪಿ ಮತ್ತು 108ಎಂಪಿ ಸೆನ್ಸಾರ್ ಕ್ಯಾಮೆರಾಗಳು ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಠಿಸಿವೆ. ಬಜೆಟ್ ಬೆಲೆಯಲ್ಲಿಯೇ ಅತ್ಯುತ್ತಮ ಕ್ಯಾಮೆರಾ ಲಭ್ಯವಾಗುತ್ತಿರುವ ಕಾರಣದಿಂದಾಗಿ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರು 108ಎಂಪಿ ಕ್ಯಾಮೆರಾ ಸೆನ್ಸಾರ್ ಸ್ಮಾರ್ಟ್‌ಫೋನ್‌ಗಳತ್ತ ಚಿತ್ತ ಹರಿಸುವಂತಾಗಿದೆ. ಹಾಗಾದರೇ ಪ್ರಸ್ತುತ ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಲಭ್ಯವಿರುವ 108ಎಂಪಿ ಸೆನ್ಸಾರ್ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ತಿಳಿಯಲು ಮುಂದೆ ಓದಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಅಲ್ಟ್ರಾ
ಗ್ಯಾಲಕ್ಸಿ S21 ಅಲ್ಟ್ರಾ ಸ್ಮಾರ್ಟ್‌ಫೋನ್ 1,440x3,200 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.8 ಇಂಚಿನ ಫುಲ್ ಎಡ್ಜ್ QHD+ ಪ್ಲಸ್ ಜೊತೆಗೆ ಡೈನಾಮಿಕ್ AMOLED ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ Exynos 2100 SoC (ಸ್ನ್ಯಾಪ್‌ಡ್ರಾಗನ್ 888) ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ 12GB ಮತ್ತು 16GB RAM ಜೊತೆಗೆ ಅಧಿಕ ಆಂತರಿಕ ಸಂಗ್ರಹದ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ OIS ಸಪೋರ್ಟ್ ಜೊತೆಗೆ 108ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಸೆಲ್ಫಿಗಾಗಿ 40ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಮುಖ್ಯ ಕ್ಯಾಮೆರಾ ಟ್ರೆಂಡಿ ಆಗಿ ಕಾಣಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಹಾಗೆಯೇ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5020mAh ಬ್ಯಾಟರಿ ಪವರ್ ಪಡೆದಿದೆ.
ಶಿಯೋಮಿ ಮಿ 10i
ಶಿಯೋಮಿ ಮಿ 10i ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೇ ಹೊಂದಿದೆ. ಫೋನಿನ ಡಿಸ್‌ಪ್ಲೇ 125Hz ರಿಫ್ರೆಶ್ ರೇಟ್ ಜೊತೆಗೆ 450 ನಿಟ್ಸ್ ಬ್ರೈಟ್‌ನೆಶ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 750G ಪ್ರೊಸೆಸರ್ ಹೊಂದಿದೆ.ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM+128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.

ಶಿಯೋಮಿ 10T ಪ್ರೊ
ಶಿಯೋಮಿ 10T ಪ್ರೊ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.47 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದ್ದು, 144Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 865 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ
ಮಿ 10ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಇದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು 5,000mAh ಬ್ಯಾಟರಿ ಸಾಮರ್ಥ್ಯದವನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮೊಟೊರೊಲಾ ಎಡ್ಜ್ ಪ್ಲಸ್
ಮೊಟೊರೊಲಾ ಎಡ್ಜ್ + ಸ್ಮಾರ್ಟ್‌ಫೋನ್ 90 Hz ರಿಫ್ರೆಶ್ ರೇಟ್ ಅನ್ನು ಹೊಂದಿರುವ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ HDR10 + ಬೆಂಬಲ ಹೊಂದಿರುವ 6.7-ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 865 SoC ಪ್ರೊಸೆಸರ್ ವೇಗವನ್ನು ಹೊಂದಿದೆ, ಅಲ್ಲದೆ ಆಂಡ್ರಾಯ್ಡ್10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಅಡ್ರಿನೊ 650 GPU ಅನ್ನು ಹೊಂದಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/ 1.8 ಲೆನ್ಸ್ ಮತ್ತು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಒಳಗೊಂಡಿದೆ. ಇದಲ್ಲದೆ 25 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications