ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಸುಪ್ರೀಂ: SIM - ಬ್ಯಾಂಕ್‌ಗೆ ಆಧಾರ್ ಕಡ್ಡಾಯವಲ್ಲ..!

|

ದೇಶದಲ್ಲಿ ಬಹು ಚರ್ಚಿತ ವಿಷಯವಾಗಿದ್ದ ಆಧಾರ್ ಕಡ್ಡಾಯಕ್ಕೆ ಸುಪ್ರೀಂ ಕೋರ್ಡ್ ತಡೆ ನೀಡಿದೆ. ವಿಶಿಷ್ಟ ಗುರುತಿನ ಸಂಖ್ಯೆ(ಆಧಾರ್)ಯ ಸಾಂವಿಧಾನಿಕ ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದ್ದು, ಬ್ಯಾಂಕ್ ಆಕೌಂಟ್, ಸಿಮ್ ಕಾರ್ಡ್‌, ಪ್ಯಾನ್‌ ಕಾರ್ಡ್‌ಗಳಿಗೆ ಆಧಾರ್ ಕಡ್ಡಾಯ ಮಾಡುವಂತೆ ಇಲ್ಲ ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ಇನ್ನು ಮುಂದೆ ಯಾವುದೇ ಸೇವೆಗಳಿಗೆ ಆಧಾರ್ ಅನ್ನು ಕಡ್ಡಾಯ ಮಾಡುವಂತೆ ಇಲ್ಲ ಎನ್ನಲಾಗಿದೆ.

ಮೋದಿ ಸರ್ಕಾರಕ್ಕೆ ಶಾಕ್ ಕೊಟ್ಟ ಸುಪ್ರೀಂ: SIM - ಬ್ಯಾಂಕ್‌ಗೆ ಆಧಾರ್ ಕಡ್ಡಾಯವಲ್ಲ.

ಬಹು ನಿರೀಕ್ಷಿತ ಆಧಾರ್ ಸಿಂಧುತ್ವದ ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದ್ದು, ಸರ್ಕಾರಿ ಯೋಜನೆಗಳಿಗೆ ಮಾತ್ರವೇ ಆಧಾರ್ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಮೂಲಕ ಕೇಂದ್ರ ಸರಕಾರದ ಮಹತ್ವದ ಆಧಾರ್ ಕಡ್ಡಾಯ ಯೋಜನೆಗೆ ಹೊಡೆತ ಬಿದ್ದಂತೆ ಆಗಿದೆ. ಈ ಮೂಲಕ ದೇಶದಲ್ಲಿ ಆಧಾರ್ ನಿಂದ ಉಂಟಾಗುತ್ತಿದ್ದ ತೊಂದರೆಗಳಿಗೆ ಬ್ರೇಕ್ ಸಿಗಲಿದೆ.

ಆಧಾರ್ ಕಡ್ಡಾಯವಲ್ಲ:

ಆಧಾರ್ ಕಡ್ಡಾಯವಲ್ಲ:

ಶಾಲೆಗಳಲ್ಲಿ ಅಂದರೆ CBSE, NEET, UGC ಎಲ್ಲಿಯೂ ಪ್ರವೇಶಕ್ಕೆ ಮತ್ತು ಪರೀಕ್ಷೆ ಸಂದರ್ಭದಲ್ಲಿ ಆಧಾರ್ ಕಡ್ಡಾಯ ಮಾಡುವಂತೆ ಇಲ್ಲ, ಇದಲ್ಲದೇ ಬ್ಯಾಂಕ್‍ ಆಕೌಂಟ್‌ಗಳಿಗೆ ಆಧಾರ್ ಅನ್ನು ಕಡ್ಡಾಯವಾಗಿ ಲಿಂಕ್ ಮಾಡುವಂತೆ ಮನವಿ ಮಾಡುವಂತೆ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ.

ಯಾವುದಕ್ಕೆ ಕಡ್ಡಾಯ:

ಯಾವುದಕ್ಕೆ ಕಡ್ಡಾಯ:

ಇದಲ್ಲದೇ ಇನ್‌ಕಾಮ್ ಟ್ಯಾಕ್ಸ್ ರಿಟನ್ (ITR) ಮತ್ತು ಪ್ಯಾನ್ ಕಾರ್ಡಿಗೆ (PAN) ಆಧಾರ್ ಕಡ್ಡಾಯವಾಗಿ ಲೀಂಕ್ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ. ಪ್ಯಾನ್ ಕಾರ್ಡ್ ಆಧಾರ್ ಜೋಡಣೆಯನ್ನು ಕಡ್ಡಾಯಗೊಳಿಸುವುದರಿಂದ ಭ್ರಷ್ಟಚಾರವನ್ನು ಕಡಿತ ಮಾಡಬಹುದು ಎಂದು ಅಭಿಪ್ರಾಯಪಟ್ಟಿದೆ.

ಬಯೋಮೆಟ್ರಿಕ್ ಮಾಹಿತಿಯನ್ನು ನೀಡುವಂತಿಲ್ಲ:

ಬಯೋಮೆಟ್ರಿಕ್ ಮಾಹಿತಿಯನ್ನು ನೀಡುವಂತಿಲ್ಲ:

ಯಾವುದೇ ಖಾಸಗಿ ಸಂಸ್ಥೆಗಳಿಗೆ ಅಥವಾ ಕಾರ್ಪೊರೇಟ್ ಸಂಸ್ಥೆಗಳಿಗೆ ಬಯೋಮೆಟ್ರಿಕ್ ಮಾಹಿತಿಯನ್ನು ನೀಡುವಂತಿಲ್ಲ ಎಂದಿರುವ ಕೋರ್ಟ್, ಇದಕ್ಕಾಗಿಯೇ ಆಧಾರ್ ಕಾಯ್ದೆಯ ಸೆಕ್ಷನ್ 57ನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಖಾಸಗಿ ಕಂಪನಿಗಳು ಆಧಾರ್ ಬಳಸುವಂತಿಲ್ಲ. ಇದಲ್ಲದೇ ಸರ್ಕಾರಿ ಆಸ್ಪತ್ರೆಗಳೂ ಸೇರಿದಂತೆ ಎಲ್ಲ ಆಸ್ಪತ್ರೆಗಳಲ್ಲಿ ಆಧಾರ್ ಕಾರ್ಡ್ ಇಲ್ಲ ಎಂದು ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದೂ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಸರ್ಕಾರದ ಯೋಜನೆಗಳಿಗೆ ಮಾತ್ರ:

ಸರ್ಕಾರದ ಯೋಜನೆಗಳಿಗೆ ಮಾತ್ರ:

ಎಲ್ಲಿಯೂ ಆಧಾರ್ ಕಾರ್ಡ್‌ ಅನ್ನು ಕಡ್ಡಾಯ ಮಾಡುವಂತೆ ಇಲ್ಲ ಎಂದಿರುವ ಸುಪ್ರೀಂ ಕೋರ್ಟ್, ಕೇವಲ ಸರ್ಕಾರದ ಯೋಜನೆಗಳಿಗೆ ಮಾತ್ರ ಆಧಾರ್ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ. ಖಾಸಗೀತನದ ಹಕ್ಕು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕನ್ನು ನೀಡಿದೆ ಈ ಹಿನ್ನಲೆಯಲ್ಲಿ ಆಧಾರ್ ಕಡ್ಡಾಯ ಮಾಡಿ ಅದನ್ನು ನಿರ್ಭಂದಿಸುವಂತೆ ಇಲ್ಲ ಎಂದಿದೆ.

ಮೊಬೈಲ್ ಸೇವೆಗಳಿಗೆ ಆಧಾರ್ ಕಡ್ಡಾಯವಲ್ಲ:

ಮೊಬೈಲ್ ಸೇವೆಗಳಿಗೆ ಆಧಾರ್ ಕಡ್ಡಾಯವಲ್ಲ:

ಇದಲ್ಲದೇ ಬ್ಯಾಂಕಿಂಗ್ ಸೇವೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ್ದು, ಮೊಬೈಲ್ ಸೇವೆಗಳಿಗೆ ಸಹ ಆಧಾರ್ ಕಡ್ಡಾಯವಲ್ಲ ಎಂದು ಕೋರ್ಟ್ ಹೇಳಿದ್ದು, ಎಲ್ಲಿಯೂ ಆಧಾರ್ ಕಡ್ಡಾಯಗೊಳಿಸಬಾರದು ಮಾತ್ರವಲ್ಲ ಹೊಸ ಬ್ಯಾಂಕ್ ಖಾತೆ ತೆರಯಲೂ ಕೂಡ ಆಧಾರ್ ಕಡ್ಡಾಯ ಎನ್ನುವಂತಿಲ್ಲ ಎನ್ನಲಾಗಿದೆ.

ಲೋಪದೋಷಗಳನ್ನು ಸರಿಪಡಿಸಿ:

ಲೋಪದೋಷಗಳನ್ನು ಸರಿಪಡಿಸಿ:

ಇದಲ್ಲದೇ ಆಧಾರ್ ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಎಂದು ವಿಶಿಷ್ಟ ಗುರುತಿನ ಪ್ರಾಧಿಕಾರಕ್ಕೆ ಕೋರ್ಟ್ ಆದೇಶಿಸಿದೆ ಎನ್ನಲಾಗಿದೆ. ಇದೇ ಮಾದರಿಯಲ್ಲಿ ಆಧಾರ್ ಕಾರ್ಡ್ ನಕಲಿ ಮಾಡಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಡ್, ಇದೇ ಸಂದರ್ಭದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಠಿ ಮಾಡಲು ಅವಕಾಶ ಇದ್ದರೆ ಅದನ್ನು ತಡೆಗಟ್ಟಲು ಎಲ್ಲಾ ಮಾದರಿಯಲ್ಲೂ ಪ್ರಯತ್ನಿಸಬೇಕು ಎಂದು ಸೂಚನೆಯನ್ನು ನೀಡಿದೆ.

Best Mobiles in India

English summary
Aadhaar not mandatory for bank account, mobile number but must for ITR filing. To know more this visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X