ನಿಮಗೆ ಡೈಲಿ 2GB ಡೇಟಾ ಬೇಕಿದ್ದರೆ ಇಲ್ಲಿವೆ ಬೆಸ್ಟ್‌ ಪ್ರಿಪೇಯ್ಡ್‌ ಪ್ಲಾನ್‌ಗಳು!

|

ಪ್ರಸ್ತುತ ದಿನಗಳಲ್ಲಿ ದೈನಂದಿನ 2GB ಡೇಟಾ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ. ಇದೇ ಕಾರಣಕ್ಕೆ ಟೆಲಿಕಾಂ ಕಂಪೆನಿಗಳು ಕೂಡ ಪ್ರತಿನಿತ್ಯ 2GB ಡೇಟಾ ಪ್ರಯೋಜನ ನೀಡುವ ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿವೆ. ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳು 2GB ದೈನಂದಿನ ಡೇಟಾ ಪ್ರಯೋಜನದ ಜೊತೆಗೆ ಅನೇಕ ಪ್ರಯೋಜನಗಳನ್ನು ಒಳಗೊಂಡಿರುವ ಪ್ಲಾನ್‌ಗಳನ್ನು ಹೊಂದಿವೆ. ಗ್ರಾಹಕರು ತಮ್ಮ ಅಧಿಕೃತ ಅಪ್ಲಿಕೇಶನ್ ಮೂಲಕ ರೀಚಾರ್ಜ್ ಮಾಡಿದಾಗ ಹೆಚ್ಚಿನ ರಿಯಾಯಿತಿಗಳನ್ನು ಸಹ ಪಡೆದುಕೊಳ್ಳಬಹುದಾಗಿದೆ.

ಏರ್‌ಟೆಲ್‌

ಹೌದು, ಏರ್‌ಟೆಲ್‌, ಜಿಯೋ, ವಿ ಟೆಲಿಕಾಂ ಕಂಪೆನಿಗಳು ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿವೆ. ಇವುಗಳಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ನೀಡುವ ಪ್ಲಾನ್‌ಗಳು ಜನಪ್ರಿಯತೆ ಪಡೆದಿವೆ. ಪ್ರತಿನಿತ್ಯ 2GBಡೇಟಾ ಬಯಸುವ ಗ್ರಾಹಕರಿಗೆ ಸೂಕ್ತವಾಗಿವೆ. ಪ್ರಸ್ತುತ ಕೊರೊನಾ ಸಂಕಷ್ಟ ಇನ್ನು ಮುಂದುವರೆದಿರುವುದರಿಂದ ಮನೆಯಿಂದಲೇ ಕಾರ್ಯನಿರ್ವಹಿಸುವವರಿಗೆ ಈ ಪ್ಲಾನ್‌ಗಳು ಸೂಕ್ತ ಎನಿಸಲಿವೆ. ಹಾಗಾದ್ರೆ ಪ್ರತಿನಿತ್ಯ 2GB ಡೇಟಾ ಪ್ರಯೋಜನ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಜಿಯೋ ಟೆಲಿಕಾಂ 249ರೂ ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ 249ರೂ ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ 249ರೂ ಪ್ರಿಪೇಯ್ಡ್‌ ಪ್ಲಾನ್‌ 23 ದಿನಗಳ ಮಾನ್ಯತೆಯನ್ನು ನೀಡಲಿದೆ. ಈ ಸಮಯದಲ್ಲಿ ಪ್ರತಿನಿತ್ಯ 2GBಡೇಟಾ ಪ್ರಯೋಜನವನ್ನು ನೀಡಲಿದೆ. ಜೊತೆಗೆ ಜಿಯೋ ಟು ಜಿಯೋ ಹಾಗೂ ಇತರೆ ನೆಟ್‌ವರ್ಕ್‌ಗಳಿಗೆ ಅನಿಯಮಿತ ವಾಯ್ಸ್‌ ಕಾಲ್‌ ಪ್ರಯೋಜನವನ್ನು ಸಹ ನೀಡಲಿದೆ. ಹಾಗೆಯೇ ಪ್ರತಿದಿನ 100ಎಸ್‌ಎಮ್‌ಎಸ್‌ ಸೇವೆ ಕೂಡ ಲಭ್ಯವಿದೆ.

ಜಿಯೋ 299ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 299ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಸಂದರ್ಭದಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ಗಳಾದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್‌ನಂತಹ ಸೇವೆಗಳು ಸಹ ಲಭ್ಯ.

ಜಿಯೋ 499ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 499ರೂ.ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 499ರೂ. ಪ್ರಿಪೇಯ್ಡ್ ಪ್ಲಾನ್‌ ದೈನದಿನ 2GB ಡೇಟಾ ಮತ್ತು ಡೈಲಿ 100 SMS ಪ್ರಯೋಜನ ನೀಡಲಿದೆ. ಇದು 28 ದಿನಗಳ ಮಾನ್ಯತೆಯನ್ನು ಹೊಂದಿದ್ದು, Jio ಪ್ರೈಮ್ ಸದಸ್ಯತ್ವದೊಂದಿಗೆ ಅನಿಯಮಿತ ಕರೆ ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಈ ಪ್ಲಾನ್‌ ನಿಮಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆಯನ್ನು ನೀಡಲಿದೆ. ಇದು ನಿಮಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಡಿಸ್ನಿ + ಹಾಟ್‌ಸ್ಟಾರ್ ಪ್ಲಾಟ್‌ಫಾರ್ಮ್‌ಗೆ ಒಂದು ವರ್ಷದ ಪ್ರವೇಶವನ್ನು ನೀಡುತ್ತದೆ. ಹಾಗೆಯೇ ಜಿಯೋ ಸಿನಿಮಾ ಮತ್ತು ಜಿಯೋಟಿವಿ ಅಂತಹ ಜಿಯೋ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡಲಿದೆ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋ 719ರೂ. ಪ್ರೀಪೇಯ್ಡ್‌ ಪ್ಲಾನ್‌

ಜಿಯೋ 719ರೂ. ಪ್ರೀಪೇಯ್ಡ್‌ ಪ್ಲಾನ್‌

ರಿಲಾಯನ್ಸ್‌ ಜಿಯೋ 719ರೂ. ಪ್ರೀಪೇಯ್ಡ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಏರ್‌ಟೆಲ್‌ 359ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ 359ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ ಟೆಲಿಕಾಂನ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ವಿ ಟೆಲಿಕಾಂ 359ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 359ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 359ರೂ ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಪ್ರತಿನಿತ್ಯ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಕರೆ ಪ್ರಯೋಜನ ಹಾಗೂ ಡೈಲಿ 100 ಎಸ್‌ಎಂಎಸ್‌ ಪ್ರಯೋಜನ ಕೂಡ ಲಭ್ಯವಿದೆ. ಇದಲ್ಲದೆ ವಿ ಮೂವಿಸ್‌, ಲೈವ್‌ಟಿವಿ ಯಂತಹ ಪ್ರಯೋಜನಗಳನ್ನು ನೀಡಲಿದೆ.

ವಿ ಟೆಲಿಕಾಂ 539ರೂ. ಪ್ರೀಪೇಯ್ಡ್‌ಪ್ಲಾನ್‌

ವಿ ಟೆಲಿಕಾಂ 539ರೂ. ಪ್ರೀಪೇಯ್ಡ್‌ಪ್ಲಾನ್‌

ವಿ ಟೆಲಿಕಾಂ 539ರೂ. ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನ್‌ನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ.

ವಿ ಟೆಲಿಕಾಂ 839ರೂ.ಪ್ರಿಪೇಯ್ಡ್‌ ಪ್ಲ್ಯಾನ್‌

ವಿ ಟೆಲಿಕಾಂ 839ರೂ.ಪ್ರಿಪೇಯ್ಡ್‌ ಪ್ಲ್ಯಾನ್‌

ವಿ ಟೆಲಿಕಾಂನ ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಇನ್ನು ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಜೊತೆಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ.

Best Mobiles in India

Read more about:
English summary
Telecom operators Airtel, Jio, and Vi have recently increased the tariffs of their prepaid plans. Some of these prepaid plans offer additional data benefits.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X