ಪ್ರತಿದಿನ 2GB 5G ಡೇಟಾ ಬೇಕಿದ್ರೆ, ಈ ಪ್ಲ್ಯಾನ್ ರೀಚಾರ್ಜ್ ಮಾಡುವುದು ಬೆಸ್ಟ್!
ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಏರ್‌ಟೆಲ್ ಮತ್ತು ಜಿಯೋ ಪ್ರಬಲ ಸಂಸ್ಥೆಗಳಾಗಿ ಗುರುತಿಸಿಕೊಂಡಿವೆ. ಈ ಎರಡು ಟೆಲಿಕಾಂಗಳು ಹಲವು ಅತ್ಯುತ್ತಮ ಡೇಟಾ ಪ್ರಯೋಜನಗಳ ಯೋಜನೆಗಳನ್ನು ಒಳಗೊಂಡಿವೆ. ಹಾಗೆಯೇ ಈ ಎರಡು ಟೆಲಿಕಾಂಗಳು 5G ಸೇವೆಯನ್ನು ದೇಶದ ಹಲವು ಪ್ರದೇಶಗಳಿಗೆ ವಿಸ್ತರಿಸಿವೆ. ಪ್ರತಿದಿನ 2GB 5G ಡೇಟಾ ಸೌಲಭ್ಯ ನೀಡುವ ಕೆಲವು ಯೋಜನೆಗಳ ಆಯ್ಕೆ ಸಹ ಪಡೆದಿವೆ.

ಹೌದು, ಏರ್‌ಟೆಲ್, ಜಿಯೋ ಟೆಲಿಕಾಂ ಈಗಾಗಲೇ ಹಲವು ಗ್ರಾಹಕ ಸ್ನೇಹಿ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಲಾಂಚ್ ಮಾಡಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಅಧಿಕ ವ್ಯಾಲಿಡಿಟಿ ಜೊತೆಗೆ ಹೆಚ್ಚಿನ ಡೇಟಾ ಪ್ರಯೋಜನದ ಸೌಲಭ್ಯಗಳನ್ನು ಒಳಗೊಂಡಿವೆ. ಸದ್ಯ ಪ್ರತಿದಿನ 2GB 5G ಡೇಟಾ ಒದಗಿಸುವ ಜಿಯೋ ಪ್ಲ್ಯಾನ್‌ಗಳಿಗೆ ಹೆಚ್ಚಿನ ಡಿಮ್ಯಾಂಡ್ ಇದ್ದು, ಗ್ರಾಹಕರು ಅಂತಹ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳುವುದೇ ಅಧಿಕ. ಹಾಗಾದರೆ ಪ್ರತಿದಿನ ಕನಿಷ್ಠ 2GB 5G ಡೇಟಾ ಒದಗಿಸುವ ಏರ್‌ಟೆಲ್ ಹಾಗೂ ಜಿಯೋದ ಬೆಸ್ಟ್ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್ 299ರೂ. ಪ್ರೀಪೇಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 299ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಒಟ್ಟು ಪ್ರತಿದಿನ 2GB ಡೇಟಾ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ ಹೆಲೊ ಟ್ಯೂನ್ ಸೇವೆಯನ್ನು ಒದಗಿಸುತ್ತದೆ.
ಏರ್‌ಟೆಲ್ 319ರೂ. ಪ್ರಿಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 319ರೂ. ಪ್ರಿಪೇಯ್ಡ್ ಯೋಜನೆಯು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ದೊರೆಯಲಿದ್ದು, ತಿಂಗಳಿಗೆ ಒಟ್ಟು 60GB ಡೇಟಾ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದೆ. ಒಮ್ಮೆ ಈ ಡೇಟಾ ಮಿತಿ ಮುಗಿದ ನಂತರ, ಚಂದಾದಾರರಿಗೆ ಪ್ರತಿ ಎಂಬಿ ಡೇಟಾಗೆ 50 ಪೈಸೆ ವಿಧಿಸಲಾಗುತ್ತದೆ. ಹಾಗೆಯೇ ಈ ಯೋಜನೆಯು ಪ್ರತಿದಿನ 100 ಎಸ್‌ಎಮ್‌ಎಸ್ ಗಳನ್ನು ಸಹ ಪಡೆದಿದೆ.

ಏರ್‌ಟೆಲ್ 359ರೂ. ಪ್ರಿಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 359ರೂ. ಪ್ರಿಪೇಯ್ಡ್ ಯೋಜನೆಯು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ದೊರೆಯಲಿದ್ದು, ತಿಂಗಳಿಗೆ ಒಟ್ಟು 60GB ಡೇಟಾ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದೆ.
ಏರ್‌ಟೆಲ್ 399ರೂ. ಪ್ರಿಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 399ರೂ. ಪ್ರಿಪೇಯ್ಡ್ ಯೋಜನೆಯು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2.5 GB ಡೇಟಾ ದೊರೆಯಲಿದ್ದು, ತಿಂಗಳಿಗೆ ಒಟ್ಟು 60GB ಡೇಟಾ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದ್ದು, ಜೊತೆಗೆ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಸೌಲಭ್ಯ ಪಡೆದಿದೆ.

ಏರ್‌ಟೆಲ್ 499ರೂ. ಪ್ರಿಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ 499ರೂ. ಪ್ರಿಪೇಯ್ಡ್ ಯೋಜನೆಯು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ದೊರೆಯಲಿದ್ದು, ತಿಂಗಳಿಗೆ ಒಟ್ಟು 60GB ಡೇಟಾ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದೆ.
ಜಿಯೋ 249ರೂ. ಪ್ರಿಪೇಯ್ಡ್ ಪ್ಲ್ಯಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ ಉಚಿತ 1,000 ನಿಮಿಷಗಳ FUP ಮಿತಿ ಇದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ.
ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.
ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ.


Click it and Unblock the Notifications








