ಏರ್‌ಟೆಲ್ ಮತ್ತು ವಿ ಟೆಲಿಕಾಂನ ಈ ಎರಡು ಪ್ಲ್ಯಾನ್‌ಗಳು ಒಂದೇ; ಆದರೆ ಭಿನ್ನತೆ ಇದೆ!
ದೇಶದ ಟೆಲಿಕಾಂ ವಲಯದಲ್ಲಿ ಭಾರ್ತಿ ಏರ್‌ಟೆಲ್ ಹಾಗೂ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಆಕರ್ಷಕ ಪ್ರಯೋಜನಗಳ ಹಲವು ಯೋಜನೆಗಳನ್ನು ಪರಿಚಯಿಸಿವೆ. ಭರ್ಜರಿ ಯೋಜನೆಗಳ ಮೂಲಕ ಜಿಯೋ ಟೆಲಿಕಾಂ ಅನ್ನು ಹಿಂದಿಕ್ಕುವ ಪ್ರಯತ್ನ ನಡೆಸಿವೆ. ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಅತ್ಯುತ್ತಮ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಹಾಗೂ ಪ್ರತಿದಿನ ಡೇಟಾ ಸೌಲಭ್ಯದ ಯೋಜನೆಗಳ ಆಯ್ಕೆಯನ್ನು ಒಳಗೊಂಡಿವೆ. ಅದಾಗ್ಯೂ ಈ ಎರಡು ಟೆಲಿಕಾಂಗಳ ಕೆಲವು ಯೋಜನೆಗಳು ಸಾಮ್ಯತೆ ಹೊಂದಿವೆ.

ಹೌದು, ಏರ್‌ಟೆಲ್ ಹಾಗೂ ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಯೋಜನೆಗಳು ಬಹುತೇಕ ಒಂದೇ ರೀತಿಯ (ಸೇಮ್ ಟು ಸೇಮ್) ಪ್ರಯೋಜನಗಳನ್ನು ಹೊಂದಿವೆ. ಅದು ಅಗ್ಗದ ಯೋಜನೆಗಳಲ್ಲಿ ಸಾಮ್ಯತೆ ಹೆಚ್ಚಾಗಿದೆ. ಏರ್‌ಟೆಲ್ ಟೆಲಿಕಾಂನ 249ರೂ. ಮತ್ತು 219ರೂ. ಹಾಗೂ ಅದೇ ರೀತಿ ವಿ ಟೆಲಿಕಾಂನ 249ರೂ ಮತ್ತು 219ರೂ.ಪ್ರೀಪೇಯ್ಡ್ ಯೋಜನೆಗಳ ಪ್ರಯೋಜನಗಳು ಒಂದಕ್ಕೊಂದು ಸಾಮ್ಯತೆಯಾಗಿವೆ. ಹಾಗಾದರೇ ಏರ್‌ಟೆಲ್ ಹಾಗೂ ವಿ ಟೆಲಿಕಾಂನ 249ರೂ ಮತ್ತು 219ರೂ. ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 249ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 249ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ. ಹೆಚ್ಚುವರಿಯಾಗಿ ಹೆಲ್ಲೊ ಟ್ಯೂನ್, ವೆಂಕ್ ಮ್ಯೂಸಿಕ್ ಸೌಲಭ್ಯಗಳನ್ನು ಪಡೆದಿದೆ.

ವಿ ಟೆಲಿಕಾಂ (ವೊಡಾಫೋನ್-ಐಡಿಯಾ) 249ರೂ. ಪ್ಲ್ಯಾನ್
ವೊಡಾಫೋನಿನ 249ರೂ. ಪ್ಲ್ಯಾನ್ ಅಲ್ಪಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವೀಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಪಡೆದಿದೆ.

ಏರ್‌ಟೆಲ್ 219ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 219ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ. ಇದರೊಂದಿಗೆ ವೆಂಕ್ ಮ್ಯೂಸಿಕ್ ಹಾಗೂ ಹೆಲೊ ಟ್ಯೂನ್ ಸೇವೆ ಲಭ್ಯ.

ವಿ ಟೆಲಿಕಾಂ (ವೊಡಾಫೋನ್-ಐಡಿಯಾ) 219ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂ 219ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ. ಇದರೊಂದಿಗೆ ವಿ ಆಪ್ಸ್, ಮ್ಯೂವಿಸ್ ಸಹ ಲಭ್ಯವಾಗಲಿವೆ.


Click it and Unblock the Notifications








