ಜಿಯೋಗೆ ಟಾಂಗ್‌ ನೀಡಲು ಏರ್‌ಟೆಲ್‌ನಿಂದ ಹೊಸ ಪ್ಲ್ಯಾನ್; ಭರ್ಜರಿ ಡೇಟಾ!

|

ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ಭಾರ್ತಿ ಏರ್‌ಟೆಲ್‌ ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಲಾಂಚ್ ಮಾಡಿದೆ. ಏರ್‌ಟೆಲ್‌ ಟೆಲಿಕಾಂ ಪ್ರೀಪೇಯ್ಡ್‌ ಯೋಜನೆಗಳಂತೆ ಬಜೆಟ್‌ ದರದಲ್ಲಿ ಪೋಸ್ಟ್‌ಪೇಯ್ಡ್‌ ಯೋಜನೆಗಳನ್ನು ಗ್ರಾಹಕರಿಗೆ ಪರಿಚಯಿಸಿ ಸೈ ಅನಿಸಿಕೊಂಡಿದೆ. ಇದೀಗ ಏರ್‌ಟೆಲ್‌ ನೂತನವಾಗಿ ಪ್ರೀಪೇಯ್ಡ್‌ ಪ್ಲ್ಯಾನ್ ಪರಿಚಯಿಸಿದ್ದು, ಈ ಯೋಜನೆಯು ನೇರವಾಗಿ ಜಿಯೋದ ಇತ್ತೀಚಿಗಿನ 447ರೂ. ಯೋಜನೆಗೆ ಟಾಂಗ್ ಕೊಡುವಂತಿದೆ.

ಟೆಲಿಕಾಂ

ಹೌದು, ಏರ್‌ಟೆಲ್‌ ಟೆಲಿಕಾಂ ಹೊಸದಾಗಿ 456ರೂ. ಪ್ರೀಪೇಯ್ಡ್‌ ಯೋಜನೆಯನ್ನು ಪರಿಚಯಿಸಿದೆ. ಈ ಹೊಸ ಯೋಜನೆಯು ಏರ್‌ಟೆಲ್‌ ತನ್ನ ಪ್ರತಿಸ್ಪರ್ಧಿ ಜಿಯೋ ಇತ್ತೀಚಿಗಷ್ಟೆ ಬಿಡುಗಡೆ ಮಾಡಿದ 447ರೂ. ಯೋಜನೆಗೆ ನೇರ ಪೈಪೋಟಿ ನೀಡವಂತಿದೆ. ಏರ್‌ಟೆಲ್‌ನ ನೂತನ ಪ್ಲ್ಯಾನ್ ಅನಿಯಮಿತ ಕರೆ ಸೌಲಭ್ಯ, ಅಧಿಕ ಡೇಟಾ, ಎಸ್‌ಎಮ್‌ಎಸ್‌ ಪ್ರಯೋಜನಗಳನ್ನು ಒಳಗೊಂಡಿದ್ದು, ದೀರ್ಘಾವಧಿ ವ್ಯಾಲಿಡಿಟಿ ಗ್ರಾಹಕರನ್ನು ಸೆಳೆಯುವಂತಿದೆ. ಹಾಗಾದರೇ ಏರ್‌ಟೆಲ್‌ನ 456ರೂ. ಪ್ರೀಪೇಯ್ಡ್‌ ಯೋಜನೆಉ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಏರ್‌ಟೆಲ್ 456ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್ 456ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್ 456ರೂ. ಪ್ರೀಪೇಯ್ಡ್‌ ಯೋಜನೆ ಒಟ್ಟು 50GB ಡೇಟಾ ಪ್ರಯೋಜನವನ್ನು ಒಳಗೊಂಡಿದ್ದು, ಡೇಟಾ ಬಳಕೆಗೆ ಯಾವುದೇ ದೈನಂದಿನ ಮಿತಿ ನೀಡಿಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹೊಂದಿದ್ದು, ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ.

ಹೆಚ್ಚುವರಿ ಪ್ರಯೋಜನಗಳು

ಹೆಚ್ಚುವರಿ ಪ್ರಯೋಜನಗಳು

ಏರ್‌ಟೆಲ್ 456ರೂ. ಪ್ರೀಪೇಯ್ಡ್‌ ಯೋಜನೆ ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಯ 30 ದಿನಗಳ ಉಚಿತ ಟ್ರಾಯಲ್ ಹೊಂದಿದೆ. ಏರ್‌ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂ ಮತ್ತು ವಿಂಕ್ ಮ್ಯೂಸಿಕ್‌ಗೆ ಆಕ್ಸ್ ಹೊಂದಿದೆ. ಹಾಗೆಯೇ ಈ ಯೋಜನೆಯ ರೀಚಾರ್ಜ್‌ನೊಂದಿಗೆ ಗ್ರಾಹಕರಿಗೆ ಫಾಸ್ಟ್ಯಾಗ್‌ನಲ್ಲಿ 100 ಕ್ಯಾಶ್‌ಬ್ಯಾಕ್ ಸಿಗಲಿದೆ. ಇದಲ್ಲದೆ, ಶಾ ಅಕಾಡೆಮಿ ನೀಡುವ ಆನ್‌ಲೈನ್ ಕೋರ್ಸ್‌ಗಳಿಗೆ ಒಂದು ವರ್ಷದ ಉಚಿತ ಆಕ್ಸಸ್ ಇದೆ.

ಏರ್‌ಟೆಲ್‌ 379ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 379ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ನ ಈ 379ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 6GB ಡೇಟಾ ಸೌಲಭ್ಯವನ್ನು ಒಳದಗಿಸಲಿದ್ದು, ಇದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಸಹ ಪಡೆದಿದೆ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರತಿದಿನ 100ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ.

ಏರ್‌ಟೆಲ್‌ 598ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 598ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ 598ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ. Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್, ಪ್ರೀ ಹೆಲೋ ಟ್ಯೂನ್‌ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ.

ಜಿಯೋದ 447ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋದ 447ರೂ. ಪ್ರೀಪೇಯ್ಡ್‌ ಯೋಜನೆ

ಜಿಯೋ ಟೆಲಿಕಾಂ ಹೊಸದಾಗಿ ಲಾಂಚ್ ಮಾಡಿರುವ ಫ್ರೀಡಂ ಪ್ಯಾಕ್‌ ಪ್ಲ್ಯಾನ್‌ಗಳಲ್ಲಿ 447ರೂ. ಪ್ರೀಪೇಯ್ಡ್‌ ಯೋಜನೆ ಸಹ ಒಂದಾಗಿದೆ. ಈ ಯೋಜನೆಯಲ್ಲಿ ಒಟ್ಟು 60 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 50GB ಡೇಟಾ ಲಭ್ಯ ಇದ್ದು, ಡೇಟಾ ಬಳಕೆಗೆ ಯಾವುದೇ ದೈನಂದಿನ ಮಿತಿ ನೀಡಿಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹೊಂದಿದ್ದು, ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ.

Best Mobiles in India

English summary
Airtel has listed the Rs. 456 prepaid recharge plan on its website as well as on the Airtel Thanks app.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X