Home
ಸುದ್ದಿಜಾಲ

ಏರ್‌ಟೆಲ್‌ ಟೆಲಿಕಾಂನ ಈ ಪ್ಲಾನ್‌ ರೀಚಾರ್ಜ್‌ ಮಾಡಿಸಿದ್ರೆ ಸಿಗುತ್ತೆ ಬಿಗ್‌ ಡಿಸ್ಕೌಂಟ್‌!

ದೇಶದ ಪ್ರಮುಖ ಟೆಲಿಕಾಂ ಕಂಪೆನಿಗಳು ಈಗಾಗಲೇ ತಮ್ಮ ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳ ಮಾಡಿವೆ. ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳದ ನಂತರ ಬಳಕೆದಾರರು ತಮ್ಮ ಪ್ಲಾನ್‌ಗಳ ಆಯ್ಕೆಯನ್ನು ಬದಲಾಯಿಸಿಕೊಂಡಿದ್ದಾರೆ. ಇದರ ನಡುವೆ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌ ತಟ್ಟದಂತೆ ಮಾಡಲು ಟೆಲಿಕಾಂ ಕಂಪೆನಿಗಳು ಅನೇಕ ರಿಯಾಯಿತಿ ಕೂಪನ್‌ಗಳನ್ನು ನೀಡುತ್ತಿವೆ. ಸದ್ಯ ಇದೀಗ ಪ್ರಮುಖ ಟೆಲಿಕಾಂ ಆಪರೇಟರ್‌ ಏರ್‌ಟೆಲ್‌ ಕಂಪೆನಿ ತನ್ನ ಗ್ರಾಹಕರಿಗೆ ಕೆಲವು ಪ್ರಿಪೇಯ್ಡ್‌ ಪ್ಲಾನ್‌ಗಳಲ್ಲಿ 50ರೂ.ಗಳ ರಿಯಾಯಿತಿಯನ್ನು ಘೋಷಿಸಿದೆ.

ಏರ್‌ಟೆಲ್‌

ಹೌದು, ಏರ್‌ಟೆಲ್‌ ಟೆಲಿಕಾಂ ತನ್ನ ಕೆಲವು ಪ್ರಿಪೇಯ್ಡ್ ಪ್ಲಾನ್‌ಗಳಲ್ಲಿ 50ರೂ. ರಿಯಾಯಿತಿಯನ್ನು ನೀಡುತ್ತಿದೆ. ಆದರೆ ಈ ರಿಯಾಯಿತಿಯು ಏರ್‌ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ ಎಂದು ಹೇಳಲಾಗಿದೆ. ಅಲ್ಲದೆ ಏರ್‌ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಮೂಲಕ ಯೋಜನೆಗಳಿಗೆ ಚಂದಾದಾರರಾದಾಗ ಏರ್‌ಟೆಲ್ ಹೆಚ್ಚುವರಿ ಡೇಟಾ ಕೂಪನ್‌ಗಳನ್ನು ಸಹ ನೀಡುತ್ತದೆ ಎನ್ನಲಾಗಿದೆ. ಹಾಗಾದ್ರೆ ಏರ್‌ಟೆಲ್‌ ಯಾವ್ಯಾವ ಪ್ಲಾನ್‌ಗಳಲ್ಲಿ ನಿಮಗೆ 50ರೂ ರಿಯಾಯಿತಿ ಸಿಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏರ್‌ಟೆಲ್‌ 359ರೂ.ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್‌ ಟೆಲಿಕಾಂ 359ರೂ.ಗಳ ಪ್ರಿಪೇಯ್ಡ್‌ ಪ್ಲಾನ್‌ ಅನ್ನು ಏರ್‌ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಮೂಲಕ ರೀಚಾರ್ಜ್ ಮಾಡಿದಾಗ ನಿಮಗೆ 50ರೂ.ರಿಯಾಯಿತಿ ಸಿಗಲಿದೆ. ಅಂದರೆ ಈ ಪ್ಲಾನ್‌ ಕೇವಲ 309ರೂ.ಗಳಿಗೆ ನಿಮಗೆ ಲಭ್ಯವಾಗಲಿದೆ. ಜೊತೆಗೆ ಇದು ಹೆಚ್ಚುವರಿ 2GB ಡೇಟಾದೊಂದಿಗೆ ಬರುತ್ತದೆ. ಇನ್ನು ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ.

ಏರ್‌ಟೆಲ್‌ 599ರೂ. ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್‌ 599ರೂ. ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್‌ 599ರೂ. ಪ್ರಿಪೇಯ್ಡ್ ಪ್ಲಾನ್‌ ಕೂಡ 50ರೂ.ಗಳ ಡಿಸ್ಕೌಂಟ್‌ ಆಫರ್‌ ಪಡೆದುಕೊಂಡಿದೆ. ಇದರಿಂದ ಈ ಪ್ಲಾನ್‌ ಅನ್ನು ಏರ್‌ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಮೂಲಕ ಕೇವಲ 549ರೂ.ಗಳಿಗೆ ಪಡೆದುಕೊಳ್ಳಬಹುದಾಗಿದೆ. ಈ ಪ್ಲಾನ್‌ Disney+ Hotstar ಮೊಬೈಲ್‌ಗೆ ಪ್ರವೇಶ ಪ್ರಯೋಜನವನ್ನು ನೀಡಲಿದೆ. ಇದರಲ್ಲಿ ಅನಿಯಮಿತ ಕರೆ, ದೈನಂದಿನ 3GB ಡೇಟಾ ಪ್ರಯೋಜನ ನೀಡುತ್ತದೆ. ಇದು 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಇದಲ್ಲದೆ ಏರ್‌ಟೆಲ್ ಪ್ರತ್ಯೇಕವಾಗಿ 549ರೂ.ಗಳ ಪ್ರಿಪೇಯ್ಡ್ ಪ್ಲಾನ್‌ ಅನ್ನು ಸಹ ಹೊಂದಿದೆ. ಇದು ದೈನಂದಿನ 2GB ಡೇಟಾ, ಅನಿಮಿತ ಕರೆ, ದಿನಕ್ಕೆ 100 SMS ಪ್ರಯೋಜನವನ್ನು ನೀಡುತ್ತದೆ. ಈ ಪ್ಲಾನ್‌ ಒಟ್ಟು 56 ದಿನಗಳ ಮಾನ್ಯತೆಯನ್ನು ಹೊಂದಿದೆ. ಜೊತೆಗೆ ಇದು 4GB ಡೇಟಾ ಕೂಪನ್‌ಗಳಿಗೆ ಪ್ರವೇಶವನ್ನು ನೀಡುತ್ತದೆ.

ಏರ್‌ಟೆಲ್ ಟೆಲಿಕಾಂ

ಇನ್ನು ಏರ್‌ಟೆಲ್ ಟೆಲಿಕಾಂ ಹೊಸದಾಗಿ 666ರೂ. ಪ್ರಿಪೇಯ್ಡ್‌ ಯೋಜನೆಯನ್ನು ಪರಿಚಯಿಸಿದೆ. ಏರ್‌ಟೆಲ್‌ ಟೆಲಿಕಾಂನ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನ ನೀಡಲಿದೆ. ಅಲ್ಲದೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ 839ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 839ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಪ್ಲಾನ್‌ ನಿಮಗೆ ಪ್ರತಿನಿತ್ಯ 2 GB ಡೇಟಾ, ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ನೀಡಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 719ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 719ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಪ್ಲಾನ್‌ ದೈನಂದಿನ 1.5 GB ಡೇಟಾ, ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ನೀಡಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ದೊರೆಯಲಿದ್ದು, ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 479ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 479ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿನಿತ್ಯ 1.5 GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಸಿಗಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ದೊರೆಯಲಿದೆ.

ಏರ್‌ಟೆಲ್‌ 299ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 299ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಈ ಅವಧಿಯಲ್ಲಿ ದೈನಂದಿನ 1.5 GB ಡೇಟಾ, ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಈ ಯೋಜನೆಯಲ್ಲಿಯೂ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

Best Mobiles in India

English summary
Airtel is giving a Rs 50 discount with some of its prepaid plans.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+