Home
ಸುದ್ದಿಜಾಲ

6GB ಡೇಟಾ ಪ್ರಯೋಜನದ ಜನಪ್ರಿಯ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಲಿಸ್ಟ್‌ ಇಲ್ಲಿದೆ!

ದೇಶದಲ್ಲಿ ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳು ತಮ್ಮ ಪ್ರಿಪೇಯ್ಡ್ ಚಂದಾದಾರರಿಗೆ ಭಿನ್ನ ರೀಚಾರ್ಜ್ ಆಯ್ಕೆಗಳನ್ನು ನೀಡಿವೆ. ಅವುಗಳಲ್ಲಿ, ಬಹುತೇಕ ಯೋಜನೆಗಳು ಅಧಿಕ ಡೇಟಾ ಸೌಲಭ್ಯವನ್ನು ಪಡೆದಿವೆ. ಹಾಗೆಯೇ ಕೆಲವು ಯೋಜನೆಗಳು ಆಕರ್ಷಕ ವ್ಯಾಲಿಡಿಟಿ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಒಳಗೊಂಡಿವೆ. ಇನ್ನು ಮತ್ತೆ ಕೆಲವು ಪ್ರಿಪೇಯ್ಡ್‌ ಯೋಜನೆಗಳು ಪೂರ್ಣ ವ್ಯಾಲಿಡಿಟಿ ಅವಧಿಗೆ ಆಕರ್ಷಕ ಡೇಟಾ ಹೊಂದಿವೆ.

ಟೆಲಿಕಾಂ

ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಯೋಜನೆಗಳು ಡೇಟಾ ಬಯಸುವ ಹಾಗೂ ಅಧಿಕ ಡೇಟಾ ಬಯಸದ ಚಂದಾದಾರರಿಗೂ ಸರಿ ಹೊಂದುವಂತಹ ಪ್ರೀಪೇಯ್ಡ್ ಯೋಜನೆಗಳ ಆಯ್ಕೆ ಪಡೆದಿವೆ. ಕೆಲವರು ಹೆಚ್ಚಾಗಿ ವೈ ಫೈ ಡೇಟಾ ಬಳಕೆ ಮಾಡುತ್ತೀರುತ್ತಾರೆ, ಅಂತಹ ಗ್ರಾಹಕರಿಗೆ ಮೊಬೈಲ್‌ ಡೇಟಾ ಹೆಚ್ಚಾಗಿ ಬಳಕೆ ಆಗುವುದಿಲ್ಲ. ಈ ಗ್ರಾಹಕರಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಆಕರ್ಷಕ ಡೇಟಾ ಪ್ರಯೋಜನ ಯೋಜನೆಗಳು ಸೂಕ್ತ ಎನಿಸುತ್ತವೆ.

6GB

ಈ ನಿಟ್ಟಿನಲ್ಲಿ ಮೂರು ಟೆಲಿಕಾಂ ಸಂಸ್ಥೆಗಳಲ್ಲಿ 6GB ಡೇಟಾ ಸೌಲಭ್ಯದ ರೀಚಾರ್ಜ್ ಯೋಜನೆಗಳು ಗಮನ ಸೆಳೆಯುತ್ತವೆ. ಈ ಯೋಜನೆಗಳು ದೇಶಾದ್ಯಂತ ಎಲ್ಲಾ ನೆಟ್‌ವರ್ಕ್‌ಗಳಿಗೆ ಅನಿಯಮಿತ ವಾಯಿಸ್‌ ಕರೆಗಳು, ದಿನಕ್ಕೆ ಉಚಿತ ಹೊರಹೋಗುವ ಎಸ್‌ಎಮ್‌ಎಸ್‌ ಮತ್ತು ಇತರ ಪೂರಕ ಚಂದಾದಾರಿಕೆಗಳೊಂದಿಗೆ ಬರುತ್ತವೆ. ಆದರೆ ದೈನಂದಿನ ಅಧಿಕ ಡೇಟಾ ಬಯಸೋ ಗ್ರಾಹಕರಿಗೆ ಈ ಯೋಜನೆಗಳು ಸೂಕ್ತ ಎನಿಸುವುದಿಲ್ಲ. ಹಾಗಾದರೆ, ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 6GB ಡೇಟಾ ಸೌಲಭ್ಯ ಹೊಂದಿರುವ ಪ್ರಮುಖ ಯೋಜನಗಳ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋ 395ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನ

ಜಿಯೋ 395ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನ

ಜಿಯೋ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಒಟ್ಟು 6 GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್‌ ಸಹ ಲಭ್ಯ.

ಏರ್‌ಟೆಲ್‌ 455ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನ

ಏರ್‌ಟೆಲ್‌ 455ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನ

ಏರ್‌ಟೆಲ್‌ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಒಟ್ಟು 6 GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಏರ್‌ಟೆಲ್‌ ವೆಂಕ್ ಮ್ಯೂಸಿಕ್ ಹಾಗೂ ಇತರೆ ಆಪ್ಸ್‌ ಸಹ ಲಭ್ಯ.

ವಿ ಟೆಲಿಕಾಂ 459ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನ

ವಿ ಟೆಲಿಕಾಂ 459ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನ

ವಿ ಟೆಲಿಕಾಂ 459ರೂ. ಪ್ರಿಪೇಯ್ಡ್ ಪ್ಲ್ಯಾನಿನಲ್ಲಿ ಒಟ್ಟು 6 GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 1000 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ವಿ ಟೆಲಿಕಾಂನ ಆಪ್ಸ್‌ ಸಹ ಲಭ್ಯ.

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ 479ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋ ದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್‌ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 601 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 3GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90GB ಡೇಟಾ ಪ್ರಯೋಜನ ದೊರೆಯಲಿದೆ.

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599 ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

Best Mobiles in India

English summary
Airtel, Jio and Vi 2022: Best 6GB Data Prepaid Plans.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+