Home
ಸುದ್ದಿಜಾಲ

ಜಿಯೋ, ಏರ್‌ಟೆಲ್‌, ವಿ ಟೆಲಿಕಾಂ ಗ್ರಾಹಕರೇ, ದೀರ್ಘಾವಧಿ ವ್ಯಾಲಿಡಿಟಿಗೆ ಇವೇ ಬೆಸ್ಟ್‌ ಪ್ಲ್ಯಾನ್‌!

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್ ಹಾಗೂ ವೊಡಾಫೋನ್-ಐಡಿಯಾ (ವಿ ಟೆಲಿಕಾಂ) ಸಂಸ್ಥೆಗಳು ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿವೆ. ಅವುಗಳಲ್ಲಿ ಅಧಿಕ ಡೇಟಾ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳು ಮತ್ತು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿರುವ ಪ್ಲ್ಯಾನ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಮೂರು ಟೆಲಿಕಾಂಗಳ ನಡುವೆ ಸ್ಪರ್ಧಾತ್ಮಕ ನಡೆ ಇದೆ.

ಟೆಲಿಕಾಂಗಳು

ಹೌದು, ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂ ಟೆಲಿಕಾಂಗಳು ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಯೋಜನೆಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಿಗೆ ಡಿಮ್ಯಾಂಡ್ ಹೆಚ್ಚು ಅಧಿಕ. ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳ 84 ದಿನಗಳ ವ್ಯಾಲಿಡಿಟಿಯೊಂದಿಗೆ ಡೈಲಿ 2GB ಡೇಟಾ ಸೌಲಭ್ಯದ ಪ್ಲ್ಯಾನ್‌ಗಳ ಪ್ರಯೋಜನೆಗಳೆನು ಎನ್ನುವುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್‌ನ 698ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ನ 698ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್‌ನ 698ರೂ ಪ್ರೀಪೇಯ್ಡ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್ ಸೌಲಭ್ಯಗಳು ಸಿಗುತ್ತವೆ.

ವೊಡಾಫೋನ್-ಐಡಿಯಾ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನ್-ಐಡಿಯಾ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನಿನ 699ರೂ. ಯೋಜನೆಯು ಹೆಚ್ಚು ಆಕರ್ಷಕ ಆಗಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ಇದೆ. ಹಾಗೆಯೇ ಸದ್ಯ ಡಬಲ್‌ ಡೇಟಾ ಕೊಡುಗೆ ಇದ್ದು, ಹೆಚ್ಚುವರಿ 2GB ಡೇಟಾ ಲಭ್ಯವಾಗಲಿದೆ. ಹೀಗಾಗಿ ಪ್ರತಿದಿನ 4GB ಡೇಟಾ ಸಿಗಲಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೂ ಅನಿಯಮಿಯ ಉಚಿತ ಕರೆ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ಜಿಯೋ ಆಪ್ಸ್ ಸಹ ಲಭ್ಯ.

Best Mobiles in India

English summary
Airtel, Jio And Vi 2GB Daily Data Prepaid Plans With 84 Days Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+