Home
ಸುದ್ದಿಜಾಲ

ನಿತ್ಯ ಅಧಿಕ ಡೇಟಾ ಬಳಕೆ ಮಾಡುವ ಗ್ರಾಹಕರಿಗೆ ಇಲ್ಲಿವೆ ನೋಡಿ ಬೆಸ್ಟ್‌ ಪ್ಲ್ಯಾನ್‌ಗಳು!

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ ಸೇರಿದಂತೆ ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳ ನಡುವೆ ಪೈಪೋಟಿ ಇದೆ. ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟೆಲಿಕಾಂ ಕಂಪನಿ ಗಳು ಬೊಂಬಾಟ್ ರೀಚಾರ್ಜ್ ಯೋಜನೆ ಗಳನ್ನು ಪರಿಚಯಿಸುತ್ತ ಸಾಗಿವೆ. ಆ ಪೈಕಿ ವಿ ಟೆಲಿಕಾಂ, ಏರ್‌ಟೆಕ್‌ ಮತ್ತು ಜಿಯೋ ನಡುವೆ ಸ್ಪರ್ಧೆ ಇದೆ. ಈ ಮೂರು ಟೆಲಿಕಾಂಗಳು ಭರ್ಜರಿ ಡೇಟಾ ಪ್ರಿಪೇಯ್ಡ್‌ ಪ್ಲ್ಯಾನ್ ಹೊಂದಿವೆ. ಅವುಗಳಲ್ಲಿ ಕೆಲವು ಪ್ಲ್ಯಾನ್‌ ಗ್ರಾಹಕರಿಗೆ ಬೆಸ್ಟ್‌ ಎನಿಸಿವೆ. ಆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋ 419ರೂ ಪ್ರೀಪೇಯ್ಡ್‌ ಪ್ಲಾನ್

ಜಿಯೋ 419ರೂ ಪ್ರೀಪೇಯ್ಡ್‌ ಪ್ಲಾನ್

ಜಿಯೋ ಟೆಲಿಕಾಂನ 419ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಯನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನವನ್ನು ನೀಡಲಿದೆ. ಇನ್ನು ಈ ಪ್ಲಾನಿನಲ್ಲಿ ಅನಿಯಮಿತ ಕರೆ ಪ್ರಯೋಜನವನ್ನು ನೀಡಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ.

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ 601ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ನಿಮಗೆ 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ನೀಡಲಿದೆ. ಈ ಅವಧಿಯಲ್ಲಿ ನಿಮಗೆ ಪ್ರತಿದಿನ 3GB ಡೇಟಾ ಪ್ರಯೋಜನವನ್ನು ನೀಡಲಿದೆ. ಜೊತೆಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆ ಪ್ರಯೋಜನ ನೀಡಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ 6 GB ಡೇಟಾ ಸಿಗಲಿದ್ದು, ಹಾಗೆಯೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂ 699ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 699ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್‌ ಸಹ ಲಭ್ಯವಾಗಲಿದೆ.

Best Mobiles in India

English summary
Airtel, Jio and Vi: Best 3GB/Day Daily Data Plans Available in 2022.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+