Home
ಸುದ್ದಿಜಾಲ

1,000ರೂ. ಒಳಗೆ ಲಭ್ಯವಿರುವ ಜನಪ್ರಿಯ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಲಿಸ್ಟ್‌ ಇಲ್ಲಿದೆ!

ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳು ಇತ್ತೀಚಿಗೆ ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆ ಹೆಚ್ಚಳ ಮಾಡಿವೆ. ಅದಾಗ್ಯೂ ಗ್ರಾಹಕರನ್ನು ಸೆಳೆಯಲು ಈ ಟೆಲಿಕಾಂಗಳು ಸರ್ಕಸ್ ಮಾಡುತ್ತಿವೆ. ಈ ಮೂರು ಟೆಲಿಕಾಂಗಳು ಭಿನ್ನ ಶ್ರೇಣಿಯ ಪ್ರಯೋಜನಗಳನ್ನು ಒಳಗೊಂಡ ಯೋಜನೆಗಳ ಆಯ್ಕೆಯನ್ನು ನೀಡಿವೆ. ಅವುಗಳಲ್ಲಿ ಕೆಲವೊಂದು ಯೋಜನೆಗಳು ಅಧಿಕ ದೈನಂದಿನ ಡೇಟಾ ಪ್ರಯೋಜನಗಳನ್ನು ಪಡೆದಿವೆ.

ಅನಿಯಮಿತ

ಹೌದು, ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳ ಕೆಲವು ಯೋಜನೆಗಳು ಆಕರ್ಷಕ ಡೇಟಾ, ಅನಿಯಮಿತ ವಾಯಿಸ್ ಕರೆ ಹಾಗೂ ಬಿಗ್ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ. ಕೆಲವು ಗ್ರಾಹಕರು ಅಧಿಕ ಡೇಟಾ ಸೌಲಭ್ಯ ಗಮನಿಸಿದರೇ, ಮತ್ತೆ ಕೆಲವರು ಅಧಿಕ ವ್ಯಾಲಿಡಿಟಿ ಸೌಲಭ್ಯವನ್ನು ಗಮನಿಸುತ್ತಾರೆ. ಇನ್ನು ಕೆಲವರು ಡೇಟಾ ಜೊತೆಗೆ ಬಿಗ್ ವ್ಯಾಲಿಡಿಟಿ ಇರುವ ಯೋಜನಗಳತ್ತ ಮನಸ್ಸು ಮಾಡುತ್ತಾರೆ. ಹಾಗಾದರೇ ಈ ಮೂರು ಟೆಲಿಕಾಂಗಲ 1,000ರೂ. ಒಳಗೆ ಲಭ್ಯವಿರುವ ಜನಪ್ರಿಯ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 533ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 533ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112GB). ಹಾಗೆಯೇ ಜಿಯೋದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಏರ್‌ಟೆಲ್‌ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್‌ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್‌ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

Best Mobiles in India

English summary
Airtel, Jio and Vi: Best Prepaid Plans Under Rs 1000: Check Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+