ಈ ಹೈ ಎಂಡ್ ದರದ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಸಿಗುತ್ತೆ ಭರ್ಜರಿ ಸೌಲಭ್ಯ!
ಜಿಯೋ, ಭಾರ್ತಿ ಏರ್‌ಟೆಲ್ ಮತ್ತು ವಿ ಟೆಲಿಕಾಂ ಕಂಪನಿಗಳು ಗ್ರಾಹಕರಿಗೆ ಭಿನ್ನ ಬೆಲೆಯಲ್ಲಿ ಪ್ರಿಪೇಯ್ಡ್ ಯೋಜನೆಗಳ ಆಯ್ಕೆ ನೀಡಿವೆ. ಕೆಲವೊಂದು ಪ್ರಿಪೇಯ್ಡ್ ಹೆಚ್ಚಿನ ಪ್ರಯೋಜನಗಳನ್ನು ಪಡೆದಿದ್ದು, ಚಂದಾದಾರರನ್ನು ಸೆಳೆದಿವೆ. ಆ ಪೈಕಿ ಅಧಿಕ ವ್ಯಾಲಿಡಿಟಿ ಸೌಲಭ್ಯದ ಜೊತೆಗೆ ದೈನಂದಿನ ಡೇಟಾ ಪ್ರಯೋಜನ ಪಡೆದ ಪ್ರಿಪೇಯ್ಡ್ ಯೋಜನೆಗಳು ಹೆಚ್ಚು ಡಿಮ್ಯಾಂಡ್ ಪಡೆದಿವೆ. ಈ ಯೋಜನೆಗಳನ್ನು ಒಮ್ಮೆ ರೀಚಾರ್ಜ್ ಮಾಡಿದರೇ ಮತ್ತೆ ರೀಚಾರ್ಜ್ ಮಾಡುವ ಕಿರ ಕಿರಿ ಇರಲ್ಲ.

ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ವಾರ್ಷಿಕ ಅವಧಿಯ ಯೋಜನೆಗಳ ಆಯ್ಕೆ ಹೊಂದಿವೆ. ಈ ಯೋಜನೆಗಳು ಡೈಲಿ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, 365 ದಿನಗಳ ವ್ಯಾಲಿಡಿಟಿ ಸಹ ಒಳಗೊಂಡಿವೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯ ಹಾಗೂ ಇತರೆ ಆಪ್ಸ್‌ಗಳ ಪ್ರಯೋಜನಗಳು ಸಹ ಹೊಂದಿವೆ. ಹಾಗಾದರೇ ಅಧಿಕ ಡೇಟಾ ಮತ್ತು ಅಧಿಕ ವ್ಯಾಲಿಡಿಟಿಗೆ ಯಾವ ಪ್ಲ್ಯಾನ್ ಯೋಗ್ಯ? ಜಿಯೋ, ವಿ ಹಾಗೂ ಏರ್‌ಟೆಲ್ ಟೆಲಿಕಾಂಗಳ ಅಧಿಕ ವ್ಯಾಲಿಡಿಟಿ ಅವಧಿಯ ಯೋಜನೆಗಳ ಒಟ್ಟಾರೇ ಪ್ರಯೋಜನಗಳೇನು?..ತಿಳಿಯಲು ಮುಂದೆ ಓದಿರಿ.
ಜಿಯೋ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು
ರಿಲಾಯನ್ಸ್ ಜಿಯೋ ಟೆಲಿಕಾಂನ 4,199ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 1095 GB ಡೇಟಾ ಸೌಲಭ್ಯ ಸಿಗಲಿದೆ. ಹಾಗೆಯೇ ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ.
ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ X stream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.
ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








