Airtel,Jio,VI,Bsnl:ಅಲ್ಪಾವಧಿ ಮಾನ್ಯತೆ ಬಯಸೋರಿಗೆ ಈ ಪ್ಲಾನ್‌ಗಳು ಸೂಕ್ತ!
ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳು ಅಗ್ರಸ್ಥಾನದಲ್ಲಿ ಮುಂದುವರೆದಿವೆ. ಇದರ ನಡುವೆಯೂ ಸರ್ಕಾರಿ ಸ್ವಾಮ್ಯದ BSNL ಟೆಲಿಕಾಂ ತನ್ನದೇ ಆದ ಪ್ರಾಬಲ್ಯವನ್ನು ಪಡೆದುಕೊಂಡಿದೆ. ಏರ್‌ಟೆಲ್, ಜಿಯೋ, ವಿ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುವ ಅನೇಕ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿ ಜನಪ್ರಿಯತೆ ಪಡೆದುಕೊಂಡಿದೆ. ಇನ್ನು ಬಿಎಸ್‌ಎನ್‌ಎಲ್ ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ ಪ್ಲಾನ್‌ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರ ಗಮನ ಸೆಳೆದಿದೆ.

ಹೌದು, ಬಿಎಸ್‌ಎನ್‌ಎಲ್ ಖಾಸಗಿ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಅನೇಕ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ 200ರೂ.ಗಳ ಅಡಿಯಲ್ಲಿ ಅನೇಕ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಹೊಂದಿದೆ. ಈ ಯೋಜನೆಗಳು ಅಲ್ಪಾವಧಿಯ ಮಾನ್ಯತೆ ಬಯಸುವ ಬಳಕೆದಾರರಿಗೆ ಸೂಕ್ತವಾಗಿವೆ. ಈ ಪ್ಲಾನ್‌ಗಳು ಅನಿಯಮಿತ ಕರೆಗಳು, 2GB ದೈನಂದಿನ ಡೇಟಾ ಮತ್ತು ದಿನಿತ್ಯ 100 SMS ಪ್ರಯೋಜನ ನೀಡಲಿವೆ. ಹಾಗಾದ್ರೆ ಬಿಎಸ್‌ಎನ್‌ಎಲ್ ಮಾದರಿಯಲ್ಲಿಯೇ 200ರೂ.ಒಳಗೆ ಏರ್‌ಟೆಲ್ ಮತ್ತು ಜಿಯೋ ಟೆಲಿಕಾಂನ ಅಲ್ಪಾವಧಿ ಪ್ರಿಪೇಯ್ಡ್ ಪ್ಲಾನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಎಸ್‌ಎನ್‌ಎಲ್ 187ರೂ. ಪ್ರಿಪೇಯ್ಡ್ ಪ್ಲಾನ್
ಬಿಎಸ್‌ಎನ್‌ಎಲ್ 187 STV ಯೋಜನೆ ಪ್ರಸ್ತುತ 139ರೂ. ರಲ್ಲಿ ಲಭ್ಯವಿದೆ. ಅಂದರೆ ಗ್ರಾಹಕರು ಈ ಯೋಜನೆಯಲ್ಲಿ ನೇರವಾಗಿ 48ರೂ. ರಿಯಾಯಿತಿ ಪಡೆಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ಗ್ರಾಹಕರು 2GB ದೈನಂದಿನ ಹೈಸ್ಪೀಡ್ ಡೇಟಾ, 100 ದೈನಂದಿನ ಪೂರಕ ಎಸ್‌ಎಮ್‌ಎಸ್‌ಗಳನ್ನು ಮತ್ತು ಅನಿಯಮಿತ ಕರೆ ಪ್ರಯೋಜನಗಳನ್ನು ಪಡೆಯುತ್ತಾರೆ. ಈ ಪ್ಲಾನ್ 28 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ.

ಇದಲ್ಲದೆ BSNL 100 ರೂ.ಗಿಂತ ಕಡಿಮೆ ಬೆಲೆಯ ಕಾಂಬೊ ಪ್ರಯೋಜನ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಸಹ ಹೊಂದಿದೆ. ಇದರಲ್ಲಿ 97ರೂ ಬೆಲೆಯ ಪ್ರಿಪೇಯ್ಡ್ ಪ್ಲಾನ್ ಮತ್ತು 99ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್ ಕೂಡ ಸೇರಿದೆ. ಈ ಪೈಕಿ 97ರೂ ಬೆಲೆಯ ಪ್ರಿಪೇಯ್ಡ್ ಪ್ಲಾನ್ ಅನಿಯಮಿತ ವಾಯ್ಸ್ ಕಾಲ್ ಮತ್ತು ದೈನಂದಿನ 2GB ಡೇಟಾ ಪ್ರಯೋಜನ ನೀಡಲಿದ್ದು, 18 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಆದರೆ 99ರೂ. ಪ್ರಿಪೇಯ್ಡ್ ಪ್ಲಾನ್ 22 ದಿನಗಳ ಮಾನ್ಯತೆಯನ್ನು ಹೊಂದಿದ್ದು, ಅನಿಯಮಿತ ವಾಯ್ಸ್ ಕಾಲ್‌ಗಳಿಗೆ ಪ್ರವೇಶವನ್ನು ನೀಡುತ್ತದೆ. ಇದಲ್ಲದೆ 200ರೂ, ಒಳಗೆ ಏರ್‌ಟೆಲ್, ಜಿಯೋ, ವೊಡಾಫೋನ್ ಐಡಿಯಾ ಟೆಲಿಕಾಂಗಳು ಕೂಡ ಅನೇಕ ಪ್ಲಾನ್‌ಗಳನ್ನು ಪರಿಚಯಿಸಿವೆ.

ಏರ್‌ಟೆಲ್ 199ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್‌ನ 199ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ಇದೆ. ಇದರೊಂದಿಗೆ 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಇನ್ನು ಈ ಯೋಜನೆಯ ಹೆಚ್ಚುವರಿ ಪ್ರಯೋಜನಗಳಲ್ಲಿ ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಗೆ ಪ್ರವೇಶ, ಉಚಿತ ಹಲೋ ಟ್ಯೂನ್, ವಿಂಕ್ ಮ್ಯೂಸಿಕ್, ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂ ಸೇವೆಯನ್ನು ಸಹ ಪಡೆದುಕೊಳ್ಳಬಹುದಾಗಿದೆ.

ಜಿಯೋ 199ರೂ. ಪ್ರಿಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.

ವಿ ಟೆಲಿಕಾಂ 199ರೂ. ಪ್ರಿಪೇಯ್ಡ್ ಪ್ಲಾನ್
ವೊಡಾಫೋನ್-ಐಡಿಯಾ ಟೆಲಿಕಾಂನ 199ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಇದೀಗ ಒಟ್ಟು 24 ದಿನಗಳ ವ್ಯಾಲಿಡಿಟಿ ಒದಗಿಸಲಾಗಿದೆ. ಹಾಗೆಯೇ ಈ ಯೋಜನೆಯಲ್ಲಿ ಮೊದಲು ಪ್ರತಿದಿನ 1GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯಲಿವೆ. ಹೆಚ್ಚುವರಿಯಾಗಿ ವಿ ಮ್ಯೂವಿಸ್ ಮತ್ತು ಟಿವಿ ಆಪ್ ಲಭ್ಯ.

ಇನ್ನೂ ಕೆಲವು ಗ್ರಾಹಕರು ಹೆಚ್ಚು ಡೇಟಾ ಬಯಸಲ್ಲ, ಆದರೆ ವಾರ್ಷಿಕ ವ್ಯಾಲಿಡಿಟಿ ಅಗತ್ಯ ಆಗಿರುತ್ತದೆ ಇಂತಹ ಗ್ರಾಹಕರಿಗಾಗಿ ಏರ್‌ಟೆಲ್ ಟೆಲಿಕಾಂನ 1498ರೂ. ಪ್ರೀಪೇಯ್ಡ್ ಯೋಜನೆ ಆಕರ್ಷಕ ಎನಿಸಿದೆ. ಏರ್‌ಟೆಲ್‌ನ 1498ರೂ. ಪ್ರೀಪೇಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಒಟ್ಟು 3600 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್, ಏರ್‌ಟೆಲ್ ಆಪ್ ಸೇವೆ ಲಭ್ಯ.

ಏರ್‌ಟೆಲ್‌ನ 2498ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 2498ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್, ಏರ್‌ಟೆಲ್ ಎಕ್ಸ್‌ಟ್ರಿಮ್ ಆಪ್ ಸೇವೆ ಲಭ್ಯ.

ಏರ್‌ಟೆಲ್ 2698ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ನ 2698ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ವಿಐಪಿ ಸದಸ್ಯತ್ವ, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್, ಹೆಲೊ ಟ್ಯೂನ್, ಏರ್‌ಟೆಲ್ ಎಕ್ಸ್‌ಟ್ರಿಮ್ ಆಪ್ ಸೇವೆ ಲಭ್ಯ.


Click it and Unblock the Notifications








