ಡಿಸ್ನಿ+ ಹಾಟ್‌ಸ್ಟಾರ್‌ಗಾಗಿ ಏರ್‌ಟೆಲ್‌ನಿಂದ ಹೊಸ ಪ್ರಿಪೇಯ್ಡ್ ಪ್ಲಾನ್ ಲಾಂಚ್!
ಪ್ರಸ್ತುತ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಹೊಸ ಚಂದಾದಾರಿಕೆ ಯೋಜನೆಗಳನ್ನು ಜಾರಿಗೊಳಸಿದೆ. ಇನ್ನು ತಮ್ಮ ಪ್ರಿಪೇಯ್ಡ್ ಪ್ಲಾನ್‌ಗಳಲ್ಲಿ ಉಚಿತವಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸೇವೆ ನೀಡುತ್ತಿದ್ದ ಟೆಲಿಕಾಂ ಆಪ್‌ರೇಟರ್‌ಗಳು ಕೂಡ ಹೊಸ ಪ್ರಿಪೇಯ್ಡ್ ಪ್ಲಾನ್ ಪರಿಚಯಿಸಿವೆ. ಈ ಫೈಕಿ ಏರ್‌ಟೆಲ್ ಕೂಡ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸೇವೆ ನೀಡುವ ಹೊಸ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ವಾರ್ಷಿಕ ಯೋಜನೆ ಕೂಡ ಸೇರಿದೆ.

ಹೌದು, ಏರ್‌ಟೆಲ್ ಹೊಸ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌ಗಳನ್ನು ಲಾಂಚ್ ಮಾಡಿದೆ. ಈ ಪ್ಲಾನ್‌ಗಳು ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯೊಂದಿಗೆ ಬರುತ್ತದೆ. ಈಗಾಗಲೇ ಜಿಯೋ ಮತ್ತು ವಿ ಟೆಲಿಕಾಂಗಳು ಕೂಡ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್‌ಗೆ 1 ವರ್ಷದ ಚಂದಾದಾರಿಕೆ ನೀಡುವ ಪ್ಲಾನ್‌ಗಳನ್ನು ಪರಿಚಯಿಸಿದೆ. ಇದೀಗ ಏರ್‌ಟೆಲ್ ಸರದಿಯಾಗಿದೆ. ಹಾಗಾದ್ರೆ ಏರ್‌ಟೆಲ್‌ನ ಪ್ರಿಪೇಯ್ಡ್ ಪ್ಲಾನ್‌ಗಳಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಎಷ್ಟು ದಿನಗಳ ಮಾನ್ಯತೆ ಹೊದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏರ್‌ಟೆಲ್ 499ರೂ ಪ್ರಿಪೇಯ್ಡ್ ಪ್ಲಾನ್
ಈ ಪ್ಲಾನ್ ಅನಿಯಮಿತ ಕರೆಗಳು, ದಿನಕ್ಕೆ 100 SMS ಮತ್ತು ಡೈಲಿ 3GB ಡೇಟಾ ಜೊತೆಗೆ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಅಲ್ಲದೆ ಒಂದು ವರ್ಷದ ಡಿಸ್ನಿ+ ಹಾಟ್ ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಉಚಿತವಾಗಿ ನೀಡುತ್ತದೆ. ಇದಲ್ಲದೆ ಏರ್‌ಟೆಲ್ ಚಂದಾದಾರರು ಫ್ರೀ ಹೆಲೋಟ್ಯೂನ್ಸ್, ಅಮೆಜಾನ್ ಪ್ರೈಮ್ ಮೊಬೈಲ್ ಎಡಿಷನ್ ಟ್ರಯಲ್ ಅನ್ನು 30 ದಿನಗಳವರೆಗೆ ಮತ್ತು ಇತರ ಪ್ರಯೋಜನಗಳನ್ನು ಸಹ ಪಡೆಯಬಹುದು.

ಏರ್‌ಟೆಲ್ 699ರೂ ಪ್ರಿಪೇಯ್ಡ್ ಪ್ಲಾನ್
ಈ ಪ್ಲಾನ್ ಡೈಲಿ 2GB ಡೇಟಾ, ಅನ್‌ಲಿಮಿಟೆಡ್ ವಾಯ್ಸ್ ಕಾಲ್ ಮತ್ತು ಪ್ರತಿನಿತ್ಯ ನೂರು ಎಸ್‌ಎಂಎಸ್ ಅನ್ನು ನೀಡಲಿದೆ. ಇದು 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಇನ್ನು ಈ ಪ್ಲಾನ್ ಮೂಲಕ ನೀವು ಒಂದು ವರ್ಷದವರೆಗೆ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆ ಪ್ಲಾನ್ ಅನ್ನು ಪಡೆದುಕೊಳ್ಳಬಹುದು. ಅಲ್ಲದೆ 30 ದಿನಗಳ ಟ್ರಯಲ್ ಪ್ರೈಮ್ ವಿಡಿಯೋ ಚಂದಾದಾರಿಕೆಯ ಮೊಬೈಲ್ ಆವೃತ್ತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ.

ಏರ್‌ಟೆಲ್ 2798ರೂ, ಪ್ರಿಪೇಯ್ಡ್ ಪ್ಲಾನ್
ಈ ಪ್ಲಾನ್ ದಿನಕ್ಕೆ 2GB ಡೇಟಾ, ಅನಿಯಮಿತ ಕರೆಗಳು, ದಿನನಿತ್ಯ ನೂರು ಎಸ್‌ಎಂಎಸ್ ಪ್ರಯೋಜನ ನೀಡಲಿದೆ. ಇದು 365 ದಿನಗಳ ಮಾನ್ಯತೆಯನ್ನು ಪಡೆದುಕೊಂಡಿದೆ. ಇದರ ಜೊತೆಗೆ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ. ಉಳಿದ ಪ್ರಯೋಜನಗಳು 699ರ, ಪ್ರಿಪೇಯ್ಡ್ ಪ್ಲಾನ್ ನಂತೆಯೇ ಇರುತ್ತವೆ.

ವಿ ಟೆಲಿಕಾಂ ಡಿಸ್ನಿ+ ಹಾಟ್ ಸ್ಟಾರ್ ಮೊಬೈಲ್ ಪ್ಲಾನ್‌ಗಳು
ಇನ್ನು ಏರ್‌ಟೆಲ್ ಮಾದರಿಯಲ್ಲಿಯೇ ವಿ ಟೆಲಿಕಾ ಕೂಡ ಪ್ರಿಪೇಯ್ಡ್ ಪ್ಲಾನ್ ಪರಿಚಯಿಸಿದೆ. ವಿ ಟೆಲಿಕಾಂನ ಹೊಸ ಪ್ರಿಪೇಯ್ಡ್ ಯೋಜನೆಗಳಲ್ಲಿ 501 ರೂ. ಪ್ಲಾನ್ ಸೇರಿದೆ. ಇದು ಅನಿಯಮಿತ ಕರೆಗಳು, ದಿನಕ್ಕೆ 100 SMS, ದಿನಕ್ಕೆ 3GB ಡೇಟಾ ಹಾಗೂ 56 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಪ್ಲಾನ್ ಮೂಲಕ ನೀವು ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆ ಯನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ 701ರೂ, ಪ್ಲಾನ್ ಮತ್ತು 901ರೂ, ಪ್ರಿಪೇಯ್ಡ್ ಪ್ಲಾನ್ ಪರಿಚಯಿಸಿದೆ. ಈ ಪ್ಲಾನ್‌ಗಳಲ್ಲಿ ಒಂದು ವರ್ಷದ ವರೆಗೆ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಪ್ಲಾನ್ ಚಂದಾದಾರಿಕೆ ಸಿಗಲಿದೆ.

ಜಿಯೋ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಪ್ಲಾನ್‌ಗಳು
ಜಿಯೋ ಕಂಪೆನಿ ಕೂಡ ಡಿಸ್ನಿ+ ಹಾಟ್ ಸ್ಟಾರ್ ಮೊಬೈಲ್ ಚಂದಾದಾರಿಕೆಗಾಗಿ ಹೊಸ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಲಾಂಚ್ ಮಾಡಿದೆ. ಇದರಲ್ಲಿ ಮೊದಲ ಪ್ಲಾನ್ 499ರೂ ಗಳಿಂದ ಪ್ರಾರಂಭವಾಗುತ್ತದೆ. ಇದು ಅನಿಯಮಿತ ಕರೆಗಳು, ದಿನಕ್ಕೆ 3GB ಡೇಟಾ ಪ್ರಯೋಜನ ನೀಡಲಿದ್ದು 28 ದಿನಗಳ ಮಾನ್ಯತೆ ಹೊಂದಿದೆ. ಇದರ ಜೊತೆಗೆ, ಈ ಪ್ಲಾನ್ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಒಳಗೊಂಡಿದೆ. ಇದಲ್ಲದೆ ಜಿಯೋ 666ರೂ, ಹಾಗೂ 2599 ರೂಗಳ ಪ್ಲಾನ್ ಅನ್ನು ಸಹ ಪರಿಚಯಿಸಿದೆ. ಈ ಯೋಜನೆಗಳಲ್ಲೂ ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಚಂದಾದಾರಿಕೆಯನ್ನು ಪಡೆದುಕೊಳ್ಳಬಹುದಾಗಿದೆ.


Click it and Unblock the Notifications








