ಗ್ರಾಹಕ ಸ್ನೇಹಿ ಬೆಲೆಯಲ್ಲಿ ಎರಡು ಹೊಸ ಪ್ಲ್ಯಾನ್ ಪರಿಚಯಿಸಿದ ಏರ್‌ಟೆಲ್!
ಭಾರತೀಯ ಟೆಲಿಕಾಂ ವಲಯದಲ್ಲಿ ಏರ್‌ಟೆಲ್, ಮುಂಚೂಣಿಯಲ್ಲಿರುವ ಜಿಯೋ ಟೆಲಿಕಾಂಗೆ ನೇರ ಸ್ಪರ್ಧೆ ನೀಡುತ್ತಾ ಮುನ್ನಡೆದಿದೆ. ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಇತ್ತೀಚಿಗೆ ಜಿಯೋ ಬಿಡುಗಡೆ ಮಾಡಿರುವ 30 ದಿನಗಳ ವ್ಯಾಲಿಡಿಟಿ ಯೋಜನೆಗೆ ಪೈಪೋಟಿ ನೀಡುವುದಕ್ಕಾಗಿ, ಏರ್‌ಟೆಲ್ ಇದೀಗ ಎರಡು ನೂತನ ಪ್ರಿಪೇಯ್ಡ್ ಯೋಜನೆಗಳನ್ನು ಬಿಡುಗಡೆ ಮಾಡಿದೆ.

ಹೌದು, ಏರ್‌ಟೆಲ್ ಟೆಲಿಕಾಂ ಹೊಸದಾಗಿ 296ರೂ, ಮತ್ತು 319ರೂ. ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಗಳು ತಿಂಗಳ ವ್ಯಾಲಿಡಿಟಿ ಅವಧಿಯ ಪ್ರಿಪೇಯ್ಡ್ ಯೋಜನೆಗಳಾಗಿವೆ. ಈ ಯೋಜನೆಗಳು ದೈನಂದಿನ ಡೇಟಾ ಪ್ರಯೋಜನ ಪಡೆದಿವೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯ ಹಾಗೂ ದೈನಂದಿನ ಎಸ್‌ಎಮ್‌ಎಸ್ ಪ್ರಯೋಜನವನ್ನು ಒಳಗೊಂಡಿದೆ. ಜೊತೆಗೆ ಆಕರ್ಷಕ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ 296ರೂ, ಮತ್ತು 319ರೂ. ಪ್ರಿಪೇಯ್ಡ್ ಯೋಜನೆಯ ಪ್ರಯೋಜನಗಳೆನು?..ಇತರೆ ಅತ್ಯುತ್ತಮ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 296ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 296ರೂ. ಪ್ರಿಪೇಯ್ಡ್ ಯೋಜನೆಯು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಯೋಜನೆಯು 25GB ಡೇಟಾವನ್ನು ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದೆ. ಒಮ್ಮೆ ಈ ಡೇಟಾ ಮಿತಿ ಮುಗಿದ ನಂತರ, ಚಂದಾದಾರರಿಗೆ ಪ್ರತಿ ಎಂಬಿ ಡೇಟಾಗೆ 50 ಪೈಸೆ ಶುಲ್ಕ ವಿಧಿಸಲಾಗುತ್ತದೆ. ಹಾಗೆಯೇ ಈ ಯೋಜನೆಯು ಪ್ರತಿದಿನ 100 SMS ಗಳನ್ನು ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ, ಚಂದಾದಾರರು ಅಮೆಜಾನ್ ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಯ 30 ದಿನದ ಪ್ರಯೋಗವನ್ನು ಪಡೆಯುತ್ತಾರೆ, ಅಪೊಲೊ 24|7 ಸರ್ಕಲ್‌ನ ಮೂರು ತಿಂಗಳ ಚಂದಾದಾರಿಕೆ, ಶಾ ಅಕಾಡೆಮಿಯಲ್ಲಿ ಆನ್‌ಲೈನ್ ಕೋರ್ಸ್‌ಗಳು, ಹಲೋ ಟ್ಯೂನ್ಸ್ ಮತ್ತು ವಿಂಕ್ ಮ್ಯೂಸಿಕ್ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯುತ್ತಾರೆ. ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗಳಲ್ಲಿ ಚಂದಾದಾರರು ರೂ 100 ಕ್ಯಾಶ್‌ಬ್ಯಾಕ್ ಪಡೆಯುತ್ತಾರೆ.

ಏರ್‌ಟೆಲ್ 319ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 319ರೂ. ಪ್ರಿಪೇಯ್ಡ್ ಯೋಜನೆಯು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ದೊರೆಯಲಿದ್ದು, ತಿಂಗಳಿಗೆ ಒಟ್ಟು 60GB ಡೇಟಾ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದೆ. ಒಮ್ಮೆ ಈ ಡೇಟಾ ಮಿತಿ ಮುಗಿದ ನಂತರ, ಚಂದಾದಾರರಿಗೆ ಪ್ರತಿ ಎಂಬಿ ಡೇಟಾಗೆ 50 ಪೈಸೆ ವಿಧಿಸಲಾಗುತ್ತದೆ. ಹಾಗೆಯೇ ಈ ಯೋಜನೆಯು ಪ್ರತಿದಿನ 100 SMS ಗಳನ್ನು ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ, ಚಂದಾದಾರರು ಅಮೆಜಾನ್ ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಯ 30 ದಿನದ ಪ್ರಯೋಗವನ್ನು ಪಡೆಯುತ್ತಾರೆ, ಅಪೊಲೊ 24|7 ಸರ್ಕಲ್‌ನ ಮೂರು ತಿಂಗಳ ಚಂದಾದಾರಿಕೆ, ಶಾ ಅಕಾಡೆಮಿಯಲ್ಲಿ ಆನ್‌ಲೈನ್ ಕೋರ್ಸ್‌ಗಳು, ಹಲೋ ಟ್ಯೂನ್ಸ್ ಮತ್ತು ವಿಂಕ್ ಮ್ಯೂಸಿಕ್ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯುತ್ತಾರೆ. ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗಳಲ್ಲಿ ಚಂದಾದಾರರು ರೂ 100 ಕ್ಯಾಶ್‌ಬ್ಯಾಕ್ ಪಡೆಯುತ್ತಾರೆ.
ಏರ್‌ಟೆಲ್ 1199ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಹೊಸದಾಗಿ 1199 ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಪರಿಚಯಿಸಿದೆ. ಈ ಯೋಜನೆಯು ಒಟ್ಟು 250 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್ ಬೇಸಿಕ್ ಅನ್ಲಿಮಿಟೆಡ್ ಪ್ರವೇಶ, ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಸೌಲಭ್ಯಗಳು ಸೇರಿದಂತೆ ಇತರೆ ಹಲವು ಪ್ರಯೋಜನಗಳು ಲಭ್ಯವಾಗಲಿವೆ. ಇನ್ನು ಈ ಪೋಸ್ಟ್‌ಪೇಯ್ಡ್ ಯೋಜನೆಗಳು ಇದೀಗ ಏರ್‌ಟೆಲ್ ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ರೀಚಾರ್ಜ್ ಮಾಡಲು ಲಭ್ಯವಿದೆ.


Click it and Unblock the Notifications








