ಏರ್‌ಟೆಲ್ ಟೆಲಿಕಾಂನಿಂದ ಮೂರು ಅಗ್ಗದ ಪ್ರೀಪೇಯ್ಡ್ ಪ್ಲ್ಯಾನ್!
ದೇಶದ ಟೆಲಿಕಾಂ ವಲಯದಲ್ಲಿ ಜಿಯೋಗೆ ನೇರ ಸ್ಪರ್ಧೆ ನೀಡುತ್ತಾ ಸಾಗಿರುವ ಭಾರ್ತಿ ಏರ್‌ಟೆಲ್ ಆಕರ್ಷಕ ಪ್ಲ್ಯಾನ್‌ಗಳನ್ನು ಲಾಂಚ್ ಮಾಡಿದೆ. ಲಾಕ್‌ಡೌನ್ ಸಂದರ್ಭದಲ್ಲಿಯೂ ತನ್ನ ಗ್ರಾಹಕರಿಗೆ ಅನುಕೂಲಕರ ಯೋಜನೆಗಳನ್ನು ಘೋಷಿಸಿತ್ತು. ಹಾಗೆಯೇ ಇದೀಗ ಸಂಸ್ಥೆಯು ಕೆಲವು ಆಯ್ದ ಟೆಲಿಕಾಂ ಸರ್ಕಲ್‌ಗಳಲ್ಲಿ 200ರೂ.ಒಳಗಿನ ಮೂರು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸಿದೆ.

ಹೌದು, ಜನಪ್ರಿಯ ಏರ್‌ಟೆಲ್ ಟೆಲಿಕಾಂ ಹೊಸದಾಗಿ 99ರೂ, 129ರೂ ಮತ್ತು 199ರೂ. ಬೆಲೆಯ ಮೂರು ಯೋಜನೆಗಳನ್ನು ಬಿಡುಗಡೆ ಮಾಡಿದೆ. ಈ ಯೋಜನೆಗಳಲ್ಲಿ ಅನಿಯಮಿತ ಕರೆಗಳ ಜೊತೆಗೆ ಜೀ 5 ಚಂದಾದಾರಿಕೆ, ವಿಂಕ್ ಮ್ಯೂಸಿಕ್ ಮತ್ತು ಏರ್ಟೆಲ್ ಎಕ್ಸ್‌ಸ್ಟ್ರೀಮ್‌ಗೆ ಆಕ್ಸಸ್ ಸೇರಿದಂತೆ ಹೆಚ್ಚುವರಿ ಪ್ರಯೋಜನಗಳು ಲಭ್ಯವಾಗುತ್ತವೆ. ಏರ್‌ಟೆಲ್‌ನ ಈ ಮೂರು ನೂತನ ಪ್ಲ್ಯಾನ್‌ಗಳ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಏರ್‌ಟೆಲ್ 99ರೂ. ಪ್ಲ್ಯಾನ್
ಏರ್‌ಟೆಲ್‌ನ 99ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 18 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ 1GB ಡೇಟಾ, 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಇನ್ನು ಈ ಪ್ಲ್ಯಾನ್ ಬಿಹಾರ ಮತ್ತು ಜಾರ್ಖಂಡ್, ಕೋಲ್ಕತಾ, ಮಧ್ಯಪ್ರದೇಶ, ಛತ್ತೀಸಗಡ್ ವಲಯಗಳು ಸೇರಿದಂತೆ ಹೆಚ್ಚುವರಿಯಾಗಿ ಒರಿಸ್ಸಾ, ರಾಜಸ್ಥಾನ, ಯುಪಿ ಪೂರ್ವ ಮತ್ತು ಪಶ್ಚಿಮ ಬಂಗಾಳ ವಲಯಗಳಲ್ಲಿಯೂ ಈ ಯೋಜನೆ ಲಭ್ಯ.

ಏರ್‌ಟೆಲ್ 129ರೂ. ಪ್ಲ್ಯಾನ್
ಏರ್‌ಟೆಲ್‌ನ 129ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ 1GB ಡೇಟಾ, 300 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಇನ್ನು ಈ ಪ್ಲ್ಯಾನ್ ಅಸ್ಸಾಂ, ಬಿಹಾರ ಮತ್ತು ಜಾರ್ಖಂಡ್, ಗುಜರಾತ್, ಹರಿಯಾಣ, ಕೇರಳ, ಕೋಲ್ಕತಾ, ಮಧ್ಯಪ್ರದೇಶ, ಛತ್ತೀಸಗಡ್, ಮಹಾರಾಷ್ಟ್ರ, ಗೋವಾ, ಈಶಾನ್ಯ, ಒರಿಸ್ಸಾ, ರಾಜಸ್ಥಾನ, ಯುಪಿ ಪೂರ್ವ, ಯುಪಿ ಪಶ್ಚಿಮ ಮತ್ತು ಉತ್ತರಾಖಂಡ್ ಜೊತೆಗೆ ಪಶ್ಚಿಮ ಬಂಗಾಳದಲ್ಲಿಯೂ ಈ ಯೋಜನೆ ಲಭ್ಯ.

ಏರ್‌ಟೆಲ್ 199ರೂ. ಪ್ಲ್ಯಾನ್
ಏರ್‌ಟೆಲ್‌ನ 199ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 1GB ಡೇಟಾ, 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಇನ್ನು ಈ ಪ್ಲ್ಯಾನ್ ಅಸ್ಸಾಂ, ಬಿಹಾರ ಮತ್ತು ಜಾರ್ಖಂಡ್, ಗುಜರಾತ್, ಹರಿಯಾಣ, ಕೇರಳ, ಕೋಲ್ಕತಾ, ಮಧ್ಯಪ್ರದೇಶ, ಛತ್ತೀಸಗಡ್, ಮಹಾರಾಷ್ಟ್ರ, ಗೋವಾ, ಈಶಾನ್ಯ, ಒರಿಸ್ಸಾ, ರಾಜಸ್ಥಾನ, ಯುಪಿ ಪೂರ್ವ, ಯುಪಿ ಪಶ್ಚಿಮ ಮತ್ತು ಉತ್ತರಾಖಂಡ್ ಜೊತೆಗೆ ಪಶ್ಚಿಮ ಬಂಗಾಳದಲ್ಲಿಯೂ ಈ ಯೋಜನೆ ಲಭ್ಯ. ಹಾಗೆಯೇ ಏರ್‌ಟೆಲ್ ಪ್ರತಿದಿನ 2GB ಡೇಟಾ ಒದಗಿಸುವ ಪ್ಲ್ಯಾನ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್ 298ರೂ. ಪ್ಲ್ಯಾನ್
ಏರ್‌ಟೆಲ್‌ನ 298ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್‌ನ 349ರೂ. ಪ್ಲ್ಯಾನ್
ಏರ್‌ಟೆಲ್‌ನ 349ರೂ. ಪ್ರೀಪೇಡ್ ಪ್ಲ್ಯಾನ್ ಸಹ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್ 449ರೂ. ಪ್ಲ್ಯಾನ್
ಏರ್‌ಟೆಲ್‌ನ 449ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.


Click it and Unblock the Notifications








