ಈ ಬಜೆಟ್ ಬೆಲೆಯ ಪ್ಲ್ಯಾನಿನಲ್ಲಿ ವಾರ್ಷಿಕ ವ್ಯಾಲಿಡಿಟಿ ಹಾಗೂ ಆಕರ್ಷಕ ಡೇಟಾ!
ಟೆಲಿಕಾಂ ಸಂಸ್ಥೆಗಳು ಕೆಲವು ಆಕರ್ಷಕ ವಾರ್ಷಿಕ ವ್ಯಾಲಿಡಿಟಿ ಯೋಜನೆಗಳನ್ನು ಒಳಗೊಂಡಿವೆ. ಆ ಪೈಕಿ ಏರ್‌ಟೆಲ್ ಟೆಲಿಕಾಂ ಸಹ ಮೂರು ವಾರ್ಷಿಕ ವ್ಯಾಲಿಡಿಟಿಯ ಪ್ರಿಪೇಯ್ಡ್ ಯೋಜನೆಗಳ ಆಯ್ಕೆ ಅನ್ನು ಒಳಗೊಂಡಿದೆ. ದೀರ್ಘಾವಧಿ ವ್ಯಾಲಿಡಿಟಿ ಬಯಸೋ ಗ್ರಾಹಕರಿಗೆ ಈ ಯೋಜನೆಗಳು ಆಕರ್ಷಕ ಎನಿಸುತ್ತವೆ. ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಪ್ರಯೋಜನ ಸಹ ದೊರೆಯುತ್ತವೆ.

ಹೌದು, ಏರ್‌ಟೆಲ್ ಟೆಲಿಕಾಂ 365 ದಿನಗಳ ವ್ಯಾಲಿಡಿಟಿ ಯೋಜನೆಗಳನ್ನು ಹೊಂದಿದ್ದು, ಆ ಪೈಕಿ ಏರ್‌ಟೆಲ್ 1799ರೂ. ಪ್ರೀಪೇಯ್ಡ್ ಯೋಜನೆಯು ಗಮನ ಸೆಳೆದಿದೆ. ಈ ಯೋಜನೆ ವಾರ್ಷಿಕ ವ್ಯಾಲಿಡಿಟಿ ಜೊತೆಗೆ ಡೇಟಾ, ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನ ಒಳಗೊಂಡಿದೆ. ಹಾಗಾದರೇ ಏರ್‌ಟೆಲ್ 1799ರೂ. ಪ್ರೀಪೇಯ್ಡ್ ಯೋಜನೆಯ ಪ್ರಯೋಜನಗಳು ಏನು ಹಾಗೂ ಇತರೆ ಅತ್ಯುತ್ತಮ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬ್ನನಿರಿ.
ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್‌ನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ X stream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಏರ್‌ಟೆಲ್ 549ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 549ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.
ಏರ್‌ಟೆಲ್ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.


Click it and Unblock the Notifications








