Home
ಸುದ್ದಿಜಾಲ

ಏರ್‌ಟೆಲ್‌ನಿಂದ ಮತ್ತೆ ಹೊಸ ಪ್ಲ್ಯಾನ್‌; ಭರ್ಜರಿ ಡೇಟಾ ಪ್ರಯೋಜನ!

ದೇಶದ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಏರ್‌ಟೆಲ್‌ ಗುರುತಿಸಿಕೊಂಡಿದೆ. ಚಂದಾದಾರರನ್ನು ತನ್ನತ್ತ ಆಕರ್ಷಿಸುವುದಕ್ಕೆ ಹಲವು ಅತ್ಯುತ್ತಮ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿದ್ದು, ಹಾಗೆಯೇ ಕೆಲವೊಂದು ಬೊಂಬಾಟ್‌ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳನ್ನು ಹೊಂದಿದೆ. ಇದೀಗ ಹೊಸದಾಗಿ ಪೋಸ್ಟ್‌ಪೇಯ್ಡ್‌ ಯೋಜನೆ ಅನ್ನು ಪರಿಚಯಿಸಿದ್ದು, ಈ ಯೋಜನೆಯು ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿವೆ.

ಹೌದು, ಏರ್‌ಟೆಲ್‌ ಟೆಲಿಕಾಂ ನೂತನವಾಗಿ 599ರೂ. ಗಳ ಪೋಸ್ಟ್‌ಪೇಯ್ಡ್ (postpaid plans) ಪ್ಲಾನ್‌ ಅನ್ನು ಪರಿಚಯಿಸಿದೆ. ಈ ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಪಡೆದಿದ್ದು, ಇದರೊಂದಿಗೆ ಡಿಸ್ನಿ+ ಹಾಟ್‌ಸ್ಟಾರ್‌, ಅಮೆಜಾನ್‌ ಪ್ರೈಮ್‌ ಸೇರಿದಂತೆ ಕೆಲವು ಜನಪ್ರಿಯ ಓಟಿಟಿ ಚಂದಾದಾರಿಕೆಯ ಪ್ರಯೋಜನ ಗಳನ್ನು ಸಹ ಒಳಗೊಂಡಿದೆ. ಹಾಗಾದರೆ ಏರ್‌ಟೆಲ್‌ ಟೆಲಿಕಾಂನ 599ರೂ. ಗಳ ಪೋಸ್ಟ್‌ಪೇಯ್ಡ್ ಯೋಜನೆಯ ಇತರೆ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನಿಂದ ಮತ್ತೆ ಹೊಸ ಪ್ಲ್ಯಾನ್‌; ಭರ್ಜರಿ ಡೇಟಾ ಪ್ರಯೋಜನ!

ಏರ್‌ಟೆಲ್‌ 599ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ ಸೌಲಭ್ಯದ ಬಗ್ಗೆ ಮಾಹಿತಿ : ಏರ್‌ಟೆಲ್ 599ರೂ. ಯೋಜನೆಯು ಒಂದು ಫ್ಯಾಮಿಲಿ ಪೋಸ್ಟ್‌ಪೇಯ್ಡ್‌ ಯೋಜನೆ ಆಗಿದ್ದು, ಇದ್ರಲ್ಲಿ ಬಳಕೆದಾರರು 75GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿ ಯಾಗಿ ಅಮೆಜಾನ್‌ ಪ್ರೈಮ್‌ ಆಕ್ಸಸ್‌, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್ ಮತ್ತು ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ.

ಏರ್‌ಟೆಲ್‌ 499ರೂ. ಪೋಸ್ಟ್‌ಪೇಯ್ಡ್‌ ಸೌಲಭ್ಯದ ಬಗ್ಗೆ ಮಾಹಿತಿ : ಏರ್‌ಟೆಲ್ 499ರೂ. ಫೋಸ್ಟ್‌ಪೇಯ್ಡ್‌ ಯೋಜನೆಯಲ್ಲಿ ಬಳಕೆದಾರರು 75GB ಡೇಟಾವನ್ನು ಪಡೆಯುತ್ತಾರೆ. ಗ್ರಾಹಕರು ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿ ಯಾಗಿ ಅಮೆಜಾನ್‌ ಪ್ರೈಮ್‌ ಆಕ್ಸಸ್‌, ವಿಂಕ್ ಮ್ಯೂಸಿಕ್ ಮತ್ತು ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ.

ಏರ್‌ಟೆಲ್‌ನಿಂದ ಮತ್ತೆ ಹೊಸ ಪ್ಲ್ಯಾನ್‌; ಭರ್ಜರಿ ಡೇಟಾ ಪ್ರಯೋಜನ!

ಏರ್‌ಟೆಲ್‌ 1199ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಸೌಲಭ್ಯದ ಬಗ್ಗೆ ಮಾಹಿತಿ : ಏರ್‌ಟೆಲ್‌ ಟೆಲಿಕಾಂನ 1199 ರೂ. ಪೋಸ್ಟ್‌ಪೇಯ್ಡ್‌ ಯೋಜನೆ ಒಟ್ಟು 150 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿ ಯಾಗಿ ನೆಟ್‌ಫ್ಲಿಕ್ಸ್‌ ಬೇಸಿಕ್ ಅನ್ಲಿಮಿಟೆಡ್, ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಸೌಲಭ್ಯಗಳು ಸೇರಿದಂತೆ ಇತರೆ ಹಲವು ಪ್ರಯೋಜನಗಳು ಲಭ್ಯ.

ಏರ್‌ಟೆಲ್‌ 999ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು : ಏರ್‌ಟೆಲ್‌ ಟೆಲಿಕಾಂನ 999 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಒಟ್ಟು 100 GB ಡೇಟಾ ಪ್ರಯೋಜನ ದೊರೆಯುತ್ತದೆ. ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಬಳಕೆದಾರರು ಹೆಚ್ಚುವರಿಯಾಗಿ ಅಮೆಜಾನ್‌ ಪ್ರೈಮ್‌, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಸೇರಿದಂತೆ ಇತರೆ ಹಲವು ಪ್ರಯೋಜನಗಳು ಲಭ್ಯ

ಏರ್‌ಟೆಲ್‌ನಿಂದ ಮತ್ತೆ ಹೊಸ ಪ್ಲ್ಯಾನ್‌; ಭರ್ಜರಿ ಡೇಟಾ ಪ್ರಯೋಜನ!

ಭಾರ್ತಿ ಏರ್‌ಟೆಲ್‌ 1499ರೂ. ಪೋಸ್ಟ್‌ಪೇಯ್ಡ್‌ ಯೋಜನೆ ಪ್ರಯೋಜನಗಳು : ಏರ್‌ಟೆಲ್‌ ಟೆಲಿಕಾಂನ 1499 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಒಟ್ಟು 200 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದ್ದು, ಗ್ರಾಹಕರಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರಿಗೆ ನೆಟ್‌ಫ್ಲಿಕ್ಸ್‌, ಅಮೆಜಾನ್‌ ಪ್ರೈಮ್‌, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್ ಸೌಲಭ್ಯಗಳ ಪ್ರಯೋಜನಗಳು ಲಭ್ಯ.

Best Mobiles in India

English summary
Airtel’s Rs 599 postpaid plan offers extra SIM, unlimited calling, and content access. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+