ಜಿಯೋಗೆ ಟಾಂಗ್ ನೀಡಲು ಏರ್‌ಟೆಲ್‌ನಿಂದ ಅಗ್ಗದ ಪೋಸ್ಟ್‌ಪೇಯ್ಡ್ ಪ್ಲ್ಯಾನ್!
ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ಭಾರ್ತಿ ಏರ್‌ಟೆಲ್ ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಲಾಂಚ್ ಮಾಡಿದೆ. ಏರ್‌ಟೆಲ್ ಪ್ರೀಪೇಯ್ಡ್ ಯೋಜನೆಗಳಂತೆ ಬಜೆಟ್ ದರದಲ್ಲಿ ಪೋಸ್ಟ್‌ಪೇಯ್ಡ್ ಯೋಜನೆಗಳನ್ನು ಗ್ರಾಹಕರಿಗೆ ಪರಿಚಯಿಸಿ ಸೈ ಅನಿಸಿಕೊಂಡಿದೆ. ಇತ್ತೀಚಿಗೆ ಜಿಯೋ ಅಗ್ಗದ ಪ್ರೈಸ್‌ನಲ್ಲಿ ಪೋಸ್ಟ್‌ಪೇಯ್ಡ್ ಯೋಜನೆಗಳನ್ನು ತಿಳಿಸಿದೆ ಅದರ ಬೆನ್ನಲ್ಲೇ ಏರ್‌ಟೆಲ್ ಈಗ ಜಿಯೋಗೆ ಟಾಂಗ್ ನೀಡುವಂತಹ ಯೋಜನೆ ಪರಿಚಯಿಸಿದೆ.

ಹೌದು, ಏರ್‌ಟೆಲ್ ಟೆಲಿಕಾಂ ಹೊಸದಾಗಿ 399ರೂ. ಪೋಸ್ಟ್‌ಪೇಯ್ಡ್ ಯೋಜನೆಯನ್ನು ಘೋಷಿಸಿದೆ. ಏರ್‌ಟೆಲ್ ತನ್ನ ಪ್ರತಿಸ್ಪರ್ಧಿ ಜಿಯೋ ‘ಜಿಯೋ ಪೋಸ್ಟ್‌ಪೇಯ್ಡ್ ಪ್ಲಸ್' ಯೋಜನೆಯೊಂದಿಗೆ ಸ್ಪರ್ಧಿಸಲು ತನ್ನ 399 ರೂ. ಪೋಸ್ಟ್‌ಪೇಯ್ಡ್ ಯೋಜನೆಯನ್ನು ತಂದಿದೆ. ಹಾಗಾದರೇ ಏರ್‌ಟೆಲ್‌ನ ಈ ಹೊಸ ಪೋಸ್ಟ್‌ಪೇಯ್ಡ್ ಯೋಜನೆಯ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಏರ್‌ಟೆಲ್ 399ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್
ಏರ್‌ಟೆಲ್ 399 ರೂ ಯೋಜನೆಯಲ್ಲಿ ಬಳಕೆದಾರರು 4G/3G ಬೆಂಬಲಿತ 40GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್ ಮತ್ತು ಶಾ ಅಕಾಡೆಮಿಯ ಚಂದಾದಾರಿಕೆಗಳ ಜೊತೆಗೆ ಒಂದು ವರ್ಷದವರೆಗೆ ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ. ಫಾಸ್ಟ್ಯಾಗ್ ವಹಿವಾಟಿನಲ್ಲಿ ಬಳಕೆದಾರರು ಉಚಿತ ಹೆಲೋಟೂನ್ಸ್ ಮತ್ತು 150 ರೂ.

ಪ್ಲ್ಯಾನ್ ಲಭ್ಯತೆ
ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಸೇರಿದಂತೆ ಭಾರತದಾದ್ಯಂತ ಏರ್‌ಟೆಲ್ ಬಳಕೆದಾರರು ಈ ಯೋಜನೆ ಪಡೆಯಬಹುದಾಗಿದೆ. ತಮ್ಮ ಏರ್‌ಟೆಲ್ ಥ್ಯಾಂಕ್ಸ್ ಆಪ್‌ನಲ್ಲಿ 399 ರೂ.ಗಳ ಪೋಸ್ಟ್‌ಪೇಯ್ಡ್ ಯೋಜನೆಯನ್ನು ಕಾಣಬಹುದಾಗಿದೆ.

ಜಿಯೋ 399ರೂ. ಪೋಸ್ಟ್‌ಪೇಯ್ಡ್ ಪ್ಲಾನ್
ಜಿಯೋದ ಈ ಪೋಸ್ಟ್‌ಪೇಯ್ಡ್ ಪ್ಲಾನ್ನಲ್ಲಿ ಗ್ರಾಹಕರಿಗೆ 75 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ.


Click it and Unblock the Notifications








