Home
ಸುದ್ದಿಜಾಲ

ಏರ್‌ಟೆಲ್‌ನ ಈ ಪ್ಲ್ಯಾನ್‌ನಲ್ಲಿ ಪ್ರತಿದಿನ ಭರ್ಜರಿ ಡೇಟಾ ಜೊತೆ ಉಚಿತ ನೆಟ್‌ಫ್ಲಿಕ್ಸ್‌!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಮುಂಚೂಣಿಯ ಸರದಾರ ರಿಲಯನ್ಸ್‌ ಜಿಯೋಗೆ ನೇರ ಪೈಪೋಟಿ ನೀಡುತ್ತಿರುವ ಟೆಲಿಕಾಂ ಅಂದರೇ ಅದು ಭಾರ್ತಿ ಏರ್‌ಟೆಲ್‌ ಆಗಿದೆ. ಏರ್‌ಟೆಲ್‌ ಸಂಸ್ಥೆಯು ತನ್ನ ಚಂದಾದಾರರಿಗೆ ಈಗಾಗಲೆ ಅಧಿಕ ಡೇಟಾ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳನ್ನು ಪರಿಚಯಿಸಿದೆ. ಹಾಗೆಯೇ ಕೆಲವೊಂದು ಪ್ರೀಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿ ಮನರಂಜನೆಯ ಸೌಲಭ್ಯ ಒದಗಿಸಿದೆ. ಅದೆನಂತೀರಾ?

ಯೋಜನೆಗಳಲ್ಲಿ

ಹೌದು, ಏರ್‌ಟೆಲ್ ಟೆಲಿಕಾಂ ತನ್ನ ಏರ್‌ಟೆಲ್‌ 1199ರೂ. ಪೋಸ್ಟ್‌ಪೇಯ್ಡ್‌ ಹಾಗೂ ಏರ್‌ಟೆಲ್‌ 1599ರೂ. ಪೋಸ್ಟ್‌ಪೇಯ್ಡ್‌ ಯೋಜನೆಗಳಲ್ಲಿ ಉಚಿತ ನೆಟ್‌ಫ್ಲಿಕ್ಸ್‌ ಓಟಿಟಿ ಚಂದಾದಾರಿಕೆಯನ್ನು ನೀಡುತ್ತಿದೆ. ಹಾಗೆಯೇ ಈ ಪೋಸ್ಟ್‌ಪೇಯ್ಡ್ ಯೋಜನೆಗಳು ಅನಿಯಮಿತ ಕರೆ ಮತ್ತು ಹೆಚ್ಚುವರಿ ಪ್ರಯೋಜನಗಳನ್ನು ಪಡೆದಿವೆ. ಹಾಗೆಯೇ ಡೇಟಾ ರೋಲ್‌ಓವರ್ ನಂತಹ ಕೆಲವು ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೆ ಏರ್‌ಟೆಲ್‌ 1199ರೂ. ಹಾಗೂ ಏರ್‌ಟೆಲ್‌ 1599ರೂ. ಪೋಸ್ಟ್‌ಪೇಯ್ಡ್‌ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ.

ಏರ್‌ಟೆಲ್‌ 1199 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 1199 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 1199 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಒಟ್ಟು 250 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಬೇಸಿಕ್ ಅನ್ಲಿಮಿಟೆಡ್ ಪ್ರವೇಶ, ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಸೌಲಭ್ಯಗಳು ಸೇರಿದಂತೆ ಇತರೆ ಹಲವು ಪ್ರಯೋಜನಗಳು ಲಭ್ಯವಾಗಲಿವೆ. ಇನ್ನು ಈ ಪೋಸ್ಟ್‌ಪೇಯ್ಡ್ ಯೋಜನೆಗಳು ಇದೀಗ ಏರ್‌ಟೆಲ್ ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ರೀಚಾರ್ಜ್ ಮಾಡಲು ಲಭ್ಯವಿದೆ.

ಏರ್‌ಟೆಲ್‌ 1599 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 1599 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 1599 ರೂ. ಯೋಜನೆಯು ಅನಿಯಮಿತ ಕರೆಗಳು ಮತ್ತು ದಿನಕ್ಕೆ 100 ಎಸ್‌ಎಮ್‌ಎಸ್‌ ಜೊತೆಗೆ 250 GB ಡೇಟಾವನ್ನು ನೀಡುತ್ತದೆ. ಇದು ಹೊಸದಾಗಿ ಪರಿಚಯಿಸಲಾದ 1199 ರೂ ರಂತೆ ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಬೇಸಿಕ್ ಅನ್ಲಿಮಿಟೆಡ್ ಪ್ರವೇಶ, ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಸೌಲಭ್ಯಗಳು ಸೇರಿದಂತೆ ಇತರೆ ಹಲವು ಪ್ರಯೋಜನಗಳು ಲಭ್ಯವಾಗಲಿವೆ. ಇನ್ನು ಈ ಪೋಸ್ಟ್‌ಪೇಯ್ಡ್ ಯೋಜನೆಗಳು ಇದೀಗ ಏರ್‌ಟೆಲ್ ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ರೀಚಾರ್ಜ್ ಮಾಡಲು ಲಭ್ಯವಿದೆ.

ಏರ್‌ಟೆಲ್‌ 999 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 999 ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 999 ರೂ. ಯೋಜನೆಯು ತಿಂಗಳಿಗೆ 100 GB ಡೇಟಾ, ಅನಿಯಮಿತ ಕರೆಗಳು ಮತ್ತು ದಿನಕ್ಕೆ 100 SMS ನೀಡುತ್ತದೆ. ಎರಡು ಕುಟುಂಬದ ಸದಸ್ಯರನ್ನು ಆಡ್-ಆನ್‌ಗಳಾಗಿ ಸೇರಿಸುವ ಆಯ್ಕೆಯನ್ನು ಸಿಗಲಿವೆ. ಇದಲ್ಲದೆ ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್, ಮೊಬೈಲ್, ಏರ್‌ಟೆಲ್ ಸೆಕ್ಯೂರ್, ವೈಂಕ್ ಮ್ಯೂಸಿಕ್, ಶಾ ಅಕಾಡೆಮಿ, ಫಾಸ್ಟ್‌ಟ್ಯಾಗ್, ಏರ್‌ಟೆಲ್ ವಿಐಪಿ ಸೇವೆ ಮತ್ತು ಅನಿಯಮಿತ ಬದಲಾವಣೆಗಳೊಂದಿಗೆ ಉಚಿತ ಹೆಲೋಟ್ಯೂನ್‌ಗಳನ್ನು ಸಹ ಲಭ್ಯ.

ಏರ್‌ಟೆಲ್ 499ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್ 499ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್ 499ರೂ. ಪೋಸ್ಟ್‌ಪೇಯ್ಡ್‌ ಯೋಜನೆಯಲ್ಲಿ ಬಳಕೆದಾರರು 4G/3G ಬೆಂಬಲಿತ 75 GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ ಹಾಟ್‌ಸ್ಟಾರ್‌ ಚಂದಾದಾರಿಕೆ, ವಿಂಕ್ ಮ್ಯೂಸಿಕ್ ಮತ್ತು ಶಾ ಅಕಾಡೆಮಿಯ ಚಂದಾದಾರಿಕೆಗಳ ಜೊತೆಗೆ ಒಂದು ವರ್ಷದವರೆಗೆ ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ. ಫಾಸ್ಟ್ಯಾಗ್ ವಹಿವಾಟಿನಲ್ಲಿ ರಿಯಾಯಿತಿ ಹಾಗೂ ಉಚಿತ ಹೆಲೋಟೂನ್ಸ್ ಲಭ್ಯ.

ಏರ್‌ಟೆಲ್ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್ 399ರೂ. ಪೋಸ್ಟ್‌ಪೇಯ್ಡ್‌ ಯೋಜನೆಯಲ್ಲಿ ಬಳಕೆದಾರರು 4G/3G ಬೆಂಬಲಿತ 40GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್ ಮತ್ತು ಶಾ ಅಕಾಡೆಮಿಯ ಚಂದಾದಾರಿಕೆಗಳ ಜೊತೆಗೆ ಒಂದು ವರ್ಷದವರೆಗೆ ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ. ಫಾಸ್ಟ್ಯಾಗ್ ವಹಿವಾಟಿನಲ್ಲಿ ರಿಯಾಯಿತಿ ಹಾಗೂ ಉಚಿತ ಹೆಲೋಟೂನ್ಸ್ ಲಭ್ಯ.

Best Mobiles in India

English summary
Airtel offering free Netflix membership with these recharge plans: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+