Home
ಸುದ್ದಿಜಾಲ

ಏರ್‌ಟೆಲ್‌ ಸಿಮ್ ರೀಚಾರ್ಜ್‌ ಮಾಡಬೇಕೆ?..ಇವುಗಳಲ್ಲಿ ಒಂದನ್ನು ಆಯ್ಕೆ ಮಾಡಿ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಜನಪ್ರಿಯ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್‌, ಚಂದಾದಾರರನ್ನು ಆಕರ್ಷಿಸಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಸದ್ಯ ಅದೇ ಮಾರ್ಗದಲ್ಲಿ ಮುಂದೆ ಸಾಗಿರುವ ಏರ್‌ಟೆಲ್‌ ಟೆಲಿಕಾಂ, ಜಿಯೋ ಟೆಲಿಕಾಂಗೆ ಪೈಪೋಟಿ ನೀಡುವಂತಹ ಪ್ಲ್ಯಾನ್‌ಗಳ ಆಯ್ಕೆ ಹೊಂದಿದೆ. ಅವುಗಳ ಪೈಕಿ ಈ ಪ್ಲ್ಯಾನ್‌ಗಳು ಸೂಪರ್‌ ಆಗಿವೆ.

ಹೌದು, ಏರ್‌ಟೆಲ್‌ ಟೆಲಿಕಾಂನ ಕೆಲವು ಯೋಜನೆಗಳು ಅತ್ಯುತ್ತಮ ಎನಿಸಿವೆ. ಅಂತಹ ಪ್‌ಯಾನ್‌ಗಳು ಡೇಟಾ, ಕರೆ, ಎಸ್‌ಎಮ್‌ಎಸ್‌, ವ್ಯಾಲಿಡಿಟಿ ಪ್ರಯೋಜನಗಳೊಂದಿಗೆ ಕೆಲವು ಹೆಚ್ಚುವರಿ ಸೌಲಭ್ಯಗಳನ್ನು ಸಹ ಒಳಗೊಂಡಿವೆ. ಹಾಗಾದರೇ ಗ್ರಾಹಕಸ್ನೇಹಿ ಬೆಲೆಗೆ ಲಭ್ಯ ಇರುವ ಅತ್ಯುತ್ತಮ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನದ ಏರ್‌ಟೆಲ್‌ ಯೋಜನೆಗಳ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ ಸಿಮ್ ರೀಚಾರ್ಜ್‌ ಮಾಡಬೇಕೆ?..ಇವುಗಳಲ್ಲಿ ಒಂದನ್ನು ಆಯ್ಕೆ ಮಾಡಿ!

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು : ಏರ್‌ಟೆಲ್‌ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು : ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು : ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್‌ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್‌ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ಏರ್‌ಟೆಲ್‌ 839ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್‌ 999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ಸಿಗಲಿದೆ.

ಏರ್‌ಟೆಲ್‌ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

Best Mobiles in India

English summary
Airtel Popular plans: Data Benefits and Validity details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+