ಏರ್‌ಟೆಲ್ ರೀಚಾರ್ಜ್ ಮಾಡಿಸೋ ಮೊದಲು ಮರೆಯದೇ ಈ ಪ್ಲ್ಯಾನ್ಸ್ ಚೆಕ್ ಮಾಡಿ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಭಾರ್ತಿ ಏರ್‌ಟೆಲ್ ಈಗಾಗಲೇ ನಂಬರ್ ಒನ್ ಸ್ಥಾನದಲ್ಲಿ ಪೈಪೋಟಿಯಲ್ಲಿ ಕಾಣಿಸಿಕೊಂಡಿದೆ. ಅಧಿಕ ಡೇಟಾ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಏರ್‌ಟೆಲ್ ಟೆಲಿಕಾಂ 2021ರ ಪ್ರಸಕ್ತ ವರ್ಷದಲ್ಲಿ ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳನ್ನು ಒಳಗೊಂಡಿದೆ. ಬಹುತೇಕ ಯೋಜನೆಗಳು ಅಧಿಕ ಡೇಟಾ, ವ್ಯಾಲಿಡಿಟಿ, ಅನಿಯಮಿತ ವಾಯಿಸ್ ಕರೆ ಸೌಲಭ್ಯಗಳನ್ನು ಪಡೆದಿವೆ.

ಹೌದು, ಏರ್‌ಟೆಲ್ ಸಂಸ್ಥೆಯು ಅಗ್ಗದ ಪ್ರೈಸ್‌ಟ್ಯಾಗ್‌ನಿಂದ ದುಬಾರಿ ಬೆಲೆಯಲ್ಲಿ ಹಲವು ಭಿನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿದೆ. ಅವುಗಳಲ್ಲಿ ಕೆಲವು ಅಲ್ಪಾವಧಿಯ ಯೋಜನೆಗಳಾಗಿದ್ದು, ಇನ್ನು ಕೆಲವು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳಾಗಿವೆ. ಇನ್ನೂ ಕೆಲ ಬಜೆಟ್ ದರದ ಏರ್‌ಟೆಲ್ ಯೋಜನೆಗಳು ವಾಯಿಸ್ ಕರೆ ಹಾಗೂ ಡೈಲಿ ಡೇಟಾ ಪ್ರಯೋಜನಗಳ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿವೆ. ಹಾಗಾದರೇ 2021 ಪ್ರಸಕ್ತ ವರ್ಷದ ಏರ್‌ಟೆಲ್ ಟೆಲಿಕಾಂನ ಎಲ್ಲ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್ 149ರೂ. ಪ್ರೀಪೇಡ್ ಯೋಜನೆ
ಏರ್‌ಟೆಲ್‌ನ 149ರೂ. ಪ್ರೀಪೇಡ್ ಪ್ಲ್ಯಾನ್ ಸಹ ದೀರ್ಘಾವಧಿಯ ವ್ಯಾಲಿಡಿಟಿ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದ್ದು, ಈ ಅವಧಿಯಲ್ಲಿ ಒಟ್ಟಾರೇ 2GB ಡೇಟಾ ಹಾಗೂ ಒಟ್ಟಾರೇ 300 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಹಾಗೂ ಹೆಚ್ಚುವರಿಯಾಗಿ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.

ಏರ್‌ಟೆಲ್ 169ರೂ. ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್ 169ರೂ. ಪ್ರಿಪೇಯ್ಡ್ ಯೋಜನೆಯು ಸ್ವಲ್ಪ ಭಿನ್ನವಾಗಿದೆ. ಈ ಯೋಜನೆಯು ದಿನಕ್ಕೆ 1 ಜಿಬಿ ಡೇಟಾವನ್ನು ಚಂದಾದಾರರಿಗೆ ನೀಡುತ್ತದೆ. ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಯೋಜನೆಯು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಅಲ್ಲದೆ, ಚಂದಾದಾರರಿಗೆ ದಿನಕ್ಕೆ 100 ಉಚಿತ ಎಸ್‌ಎಂಎಸ್ ಸೌಲಭ್ಯವನ್ನು ನೀಡುತ್ತದೆ ಜೊತೆಗೆ ಏರ್‌ಟೆಲ್‌ನ ವಿಂಕ್ ಮ್ಯೂಸಿಕ್ ಮತ್ತು ಏರ್‌ಟೆಲ್ ಎಕ್ಸ್‌ಸ್ಟ್ರೀಮ್ ಅಪ್ಲಿಕೇಶನ್‌ಗೆ ಸಹ ದೊರೆಯುತ್ತವೆ.

ಏರ್‌ಟೆಲ್ 199ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 199ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 1GB ಡೇಟಾ, 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಆದರೆ ಈ ಯೋಜನೆಯು ಇದೀಗ ಪರಿಷ್ಕರಣೆ ಆಗಿದ್ದು, ಕೆಲವು ಚಂದಾದಾರರಿಗೆ ಈ ಯೋಜನೆಯಲ್ಲಿ 1.5GB ಡೇಟಾ ಪ್ರಯೋಜನದ ಆಯ್ಕೆ ಇದೆ.

ಏರ್‌ಟೆಲ್ 219ರೂ. ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್‌ನ 219ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ. ಇದರೊಂದಿಗೆ ವೆಂಕ್ ಮ್ಯೂಸಿಕ್ ಹಾಗೂ ಹೆಲೊ ಟ್ಯೂನ್ ಸೇವೆ ಲಭ್ಯ.

ಏರ್‌ಟೆಲ್ 249ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 249ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ.

ಏರ್‌ಟೆಲ್ 289ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 289ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಪ್ರತಿದಿನ 1.5GB ಡೇಟಾ ಪ್ರಯೋಜನ ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ, ನ್ಯಾಶನಲ್, ಲೋಕಲ್ ಕರೆಗಳ ಸೌಲಭ್ಯ ಲಭ್ಯ. ಹಾಗೂ ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯವಾಗುವುದು. ಇದರೊಂದಿಗೆ zee 5 ಚಂದಾದಾರಿಕೆ ಸೌಲಭ್ಯವು ಸಹ ದೊರೆಯುವುದು.

ಏರ್‌ಟೆಲ್ 349ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಸಂಸ್ಥೆಯ 349ರೂ. ಪ್ಲ್ಯಾನ್ ಸಹ ಅಲ್ಪಾವಧಿಯ ಪ್ಲ್ಯಾನ್ ಆಗಿದ್ದು, ಲೈಫ್ ಇನ್ಶೂರೆನ್ಸ್ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB (4G/3G/2G ) ಡೇಟಾ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್‌ಗಳು ಪ್ರಯೋಜನ ಸಿಗುತ್ತವೆ. ಇದರೊಂದಿಗೆ ಯಾವುದೇ FUP ಮಿತಿ ಇಲ್ಲದೇ ಅನಿಯಮಿತ ಕರೆಗಳ ಪ್ರಯೋಜನವು ದೊರೆಯಲಿದೆ.

ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್‌ನಿನಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಉಚಿತ ಡೇಟಾ, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ.

ಏರ್‌ಟೆಲ್ 401ರೂ. ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಿರುವುದಿಲ್ಲ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.


Click it and Unblock the Notifications








