ಜಸ್ಟ್ 300ರೂ. ಒಳಗೆ ಲಭ್ಯವಿರುವ ಏರ್‌ಟೆಲ್‌ನ ಬೊಂಬಾಟ್ ಪ್ಲ್ಯಾನ್‌ಗಳು!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಭಾರ್ತಿ ಏರ್‌ಟೆಲ್, ಜಿಯೋ ಟೆಲಿಕಾಂಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಏರ್‌ಟೆಲ್ ಟೆಲಿಕಾಂನ ಹಲವು ಯೋಜನೆಗಳು ಡೇಟಾ, ವಾಯಿಸ್ ಕರೆ ಹಾಗೂ ವ್ಯಾಲಿಡಿಟಿ ಸೌಲಭ್ಯಗಳನ್ನು ಪಡೆದಿದೆ. ಹಾಗೆಯೇ ಏರ್‌ಟೆಲ್ ಟೆಲಿಕಾಂ ತನ್ನ ಗ್ರಾಹಕರಿಗೆ ಅಗ್ಗದ ಬೆಲೆಯಿಂದ ದುಬಾರಿ ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ಒದಗಿಸಿದೆ. ಆ ಪೈಕಿ ಅಗ್ಗದ ಬೆಲೆಯ ಯೋಜನೆಗಳು ಅನೇಕ ಚಂದಾದಾರಿಗೆ ಹೆಚ್ಚು ಆಕರ್ಷಕ ಎನಿಸಿವೆ.

ಹೌದು, ಏರ್‌ಟೆಲ್ ಸಂಸ್ಥೆಯು ಅಗ್ಗದ ಪ್ರೈಸ್‌ಟ್ಯಾಗ್‌ನಿಂದ ದುಬಾರಿ ಬೆಲೆಯಲ್ಲಿ ಹಲವು ಭಿನ್ನ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿದೆ. ಅವುಗಳಲ್ಲಿ ಕೆಲವು ಅಲ್ಪಾವಧಿಯ ಯೋಜನೆಗಳಾಗಿದ್ದು, ಇನ್ನು ಕೆಲವು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನದ ಪ್ಲ್ಯಾನ್‌ಗಳಾಗಿವೆ. ಇನ್ನೂ ಕೆಲ ಬಜೆಟ್ ದರದ ಏರ್‌ಟೆಲ್ ಯೋಜನೆಗಳು ವಾಯಿಸ್ ಕರೆ ಹಾಗೂ ಡೈಲಿ ಡೇಟಾ ಪ್ರಯೋಜನಗಳ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿವೆ. ಹಾಗಾದರೇ 300ರೂ. ಒಳಗೆ ಲಭ್ಯವಿರುವ ಏರ್‌ಟೆಲ್‌ನ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಪ್ರಯೋಜನಗಳ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್ 298ರೂ. ಪ್ಲ್ಯಾನ್
ಏರ್‌ಟೆಲ್‌ನ 298ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಈ ಪ್ಲ್ಯಾನ್ ಏರ್‌ಟೆಲ್ Wynk Music ಸೇವೆಯನ್ನು ಒದಗಿಸುತ್ತದೆ.

ಏರ್‌ಟೆಲ್ 289ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 289ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಪ್ರತಿದಿನ 1.5GB ಡೇಟಾ ಪ್ರಯೋಜನ ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ, ನ್ಯಾಶನಲ್, ಲೋಕಲ್ ಕರೆಗಳ ಸೌಲಭ್ಯ ಲಭ್ಯ. ಹಾಗೂ ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯವಾಗುವುದು. ಇದರೊಂದಿಗೆ zee 5 ಚಂದಾದಾರಿಕೆ ಸೌಲಭ್ಯವು ಸಹ ದೊರೆಯುವುದು.

ಏರ್‌ಟೆಲ್ 249ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 249ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ.

ಏರ್‌ಟೆಲ್ 219ರೂ. ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್‌ನ 219ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ. ಇದರೊಂದಿಗೆ ವೆಂಕ್ ಮ್ಯೂಸಿಕ್ ಹಾಗೂ ಹೆಲೊ ಟ್ಯೂನ್ ಸೇವೆ ಲಭ್ಯ.

ಏರ್‌ಟೆಲ್ 199ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 199ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 1GB ಡೇಟಾ, 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಆದರೆ ಈ ಯೋಜನೆಯು ಇದೀಗ ಪರಿಷ್ಕರಣೆ ಆಗಿದ್ದು, ಕೆಲವು ಚಂದಾದಾರರಿಗೆ ಈ ಯೋಜನೆಯಲ್ಲಿ 1.5GB ಡೇಟಾ ಪ್ರಯೋಜನದ ಆಯ್ಕೆ ಇದೆ.


Click it and Unblock the Notifications








