Home
ಸುದ್ದಿಜಾಲ

ಏರ್‌ಟೆಲ್‌ ಗ್ರಾಹಕರೇ, ಬಜೆಟ್‌ ಬೆಲೆಯಲ್ಲಿ ಲಭ್ಯ ಇರುವ ಬೆಸ್ಟ್‌ ಪ್ಲ್ಯಾನ್‌ಗಳು!

ಭಾರತೀಯ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಭಾರ್ತಿ ಏರ್‌ಟೆಲ್‌ ಟೆಲಿಕಾಂ ಈಗಾಗಲೇ ಭಿನ್ನ ಪ್ರಯೋಜನಗಳ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿ ಚಂದಾದಾರರನ್ನು ಸೆಳೆದಿದೆ. ಅವುಗಳ ಪೈಕಿ ಕೆಲವು ಪ್ಲ್ಯಾನ್‌ ಅತ್ಯುತ್ತಮ ಡೇಟಾ ಸೌಲಭ್ಯ ಹೊಂದಿದ್ದು, ಮತ್ತೆ ಕೆಲವು ಯೋಜನೆಗಳು ಅಧಿಕ ದೈನಂದಿನ ಡೇಟಾ ಹಾಗೂ ಬಿಗ್ ವ್ಯಾಲಿಡಿಟಿಯ ಪ್ರಯೋಜನ ಪಡೆದಿವೆ.

ಹೌದು, ಭಾರ್ತಿ ಏರ್‌ಟೆಲ್ ಟೆಲಿಕಾಂ ದೈನಂದಿನ ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಸಹ ಒಳಗೊಂಡಿದೆ. ಆ ಪೈಕಿ 56 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದ ಕೆಲವು ಯೋಜನೆಗಳು ಹೆಚ್ಚು ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಈ ಪ್ರೀಪೇಯ್ಡ್‌ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಇತರೆ ಪ್ರಯೋಜನಗಳನ್ನು ಸಹ ಪಡೆದಿವೆ.

ಏರ್‌ಟೆಲ್‌ ಗ್ರಾಹಕರೇ, ಬಜೆಟ್‌ ಬೆಲೆಯಲ್ಲಿ ಲಭ್ಯ ಇರುವ ಬೆಸ್ಟ್‌ ಪ್ಲ್ಯಾನ್‌ಗಳು!

ಅಲ್ಲದೇ ಸಂಸ್ಥೆಯು ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ದೀರ್ಘ ಅವಧಿಯ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಸಿಗಲಿದೆ. ಅಲ್ಲದೇ ಕೆಲವು ಪ್ಲ್ಯಾನ್‌ ಹೆಚ್ಚುವರಿ ಸೌಲಭ್ಯ ಸಹ ಪಡೆದಿವೆ. ಹಾಗಾದರೇ 56 ದಿನಗಳ ವ್ಯಾಲಿಡಿಟಿಯ ಏರ್‌ಟೆಲ್‌ ಪ್ರಮುಖ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಭಾರ್ತಿ ಏರ್‌ಟೆಲ್‌ 699ರೂ. ರೀಚಾರ್ಜ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ ಈ 699 ರೂ. ಪ್ರಿಪೇಯ್ಡ್‌ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯಲ್ಲಿ ಗ್ರಾಹಕರಿಗೆ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಕೂಡಾ ದೊರೆಯಲಿದೆ.

ಇನ್ನು ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಲಭ್ಯವಾಗಲಿದ್ದು, ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಸೌಲಭ್ಯ ಕೂಡಾ ದೊರೆಯುತ್ತದೆ. ಇದರೊಂದಿಗೆ ಏರ್‌ಟೆಲ್‌ ಎಕ್ಸ್‌ಟ್ರಿಮ್‌ ಪ್ಲೇ ಸೌಲಭ್ಯ, ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ಸಿಗಲಿವೆ.

ಭಾರ್ತಿ ಏರ್‌ಟೆಲ್‌ 549ರೂ. ರೀಚಾರ್ಜ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ ಈ 549 ರೂ. ಪ್ರಿಪೇಯ್ಡ್‌ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ವೇಳೆ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಈ ಯೋಜನೆಯಲ್ಲಿ ಗ್ರಾಹಕರಿಗೆ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಕೂಡಾ ದೊರೆಯಲಿದೆ. ಇನ್ನು ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಲಭ್ಯವಾಗಲಿದ್ದು, ಹೆಚ್ಚುವರಿಯಾಗಿ ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ಸಿಗಲಿವೆ.

ಭಾರ್ತಿ ಏರ್‌ಟೆಲ್‌ 479ರೂ. ರೀಚಾರ್ಜ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂನ ಈ 479 ರೂ. ಪ್ರಿಪೇಯ್ಡ್‌ ಪ್ಲ್ಯಾನ್‌ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಸಮಯದಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಈ ಯೋಜನೆಯಲ್ಲಿ ಗ್ರಾಹಕರಿಗೆ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಕೂಡಾ ದೊರೆಯಲಿದೆ. ಇನ್ನು ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ಲಭ್ಯವಾಗಲಿದ್ದು, ಅಲ್ಲದೇ ಅನಿಯಮಿತ 5G ಡೇಟಾ, ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ಲಭ್ಯವಾಗಲಿದೆ.

Best Mobiles in India

English summary
Airtel Prepaid Recharge Plans with 56 Days Validity. check plans data benefits, validity and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+