ಏರ್‌ಟೆಲ್ ಗ್ರಾಹಕರೇ, ನಿಮ್ಮ ಸಿಮ್ ಚಾಲ್ತಿ ಇಡಲು ಈ ಪ್ಲ್ಯಾನ್ ಅಗತ್ಯ!
ಸದ್ಯ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ಸಿಮ್ ಸೌಲಭ್ಯ ಹೊಂದಿರುವುದು ಸಾಮಾನ್ಯವಾಗಿದೆ. ಹಾಗೆಯೇ ಬಹುತೇಕ ಬಳಕೆದಾರರು ಎರಡು ಸಿಮ್ ಕಾರ್ಡ್ ಬಳಕೆ ಮಾಡುತ್ತಾರೆ. ಆ ಪೈಕಿ ಒಂದು ಸಿಮ್ ಅನ್ನು ಹೆಚ್ಚಾಗಿ ಬಳಕೆ ಮಾಡುವುದಿಲ್ಲ, ಬದಲಿಗೆ ಇನ್‌ಕಮಿಂಗ್ ಕರೆ ಹಾಗೂ ಎಸ್‌ಎಮ್‌ಎಸ್ ಬರುವಿಕೆಗಾಗಿ ಅದನ್ನು ಚಾಲ್ತಿ ಇರಿಸಿರುತ್ತಾರೆ. ಆದ್ರೆ, ಸಿಮ್ ಚಾಲ್ತಿ ಇಡಲು ಕನಿಷ್ಠ ಮೊತ್ತದ ರೀಚಾರ್ಜ್ ಮಾಡಬೇಕಿರುತ್ತದೆ.
ಜನಪ್ರಿಯ ಏರ್‌ಟೆಲ್ ಕಂಪನಿಯು ಸಹ ಕೆಲವು ಕನಿಷ್ಠ ರೀಚಾರ್ಜ್ ಯೋಜನೆಗಳ ಆಯ್ಕೆಯನ್ನು ಗ್ರಾಹಕರಿಗೆ ನೀಡಿದೆ. ಅವುಗಳಲ್ಲಿ ಏರ್‌ಟೆಲ್ 155ರೂ. ಪ್ಲ್ಯಾನ್ ಆರಂಭಿಕ ಕನಿಷ್ಠ ರೀಚಾರ್ಜ್ ಯೋಜನೆ ಆಗಿದೆ. ಸಿಮ್ ಚಾಲ್ತಿ ಇಡಲು ಬಯಸುವ ಗ್ರಾಹಕರು ಈ ಯೋಜನೆಯನ್ನು ಆಯ್ಕೆ ಮಾಡಬಹುದು. ಹಾಗಾದರೆ ಏರ್‌ಟೆಲ್‌ನ ಕನಿಷ್ಠ ರೀಚಾರ್ಜ್ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 155ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು : ಏರ್‌ಟೆಲ್ ಟೆಲಿಕಾಂನ 155ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಒಟ್ಟು 1 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಒಟ್ಟು 300 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಜೊತೆಗೆ ಏರ್‌ಟೆಲ್ ಆಪ್ಸ್‌ಗಳು ಸಹ ದೊರೆಯುತ್ತವೆ.
ಏರ್‌ಟೆಲ್ 666ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು : ಏರ್‌ಟೆಲ್ ಟೆಲಿಕಾಂನ 666 ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ.

ಏರ್‌ಟೆಲ್ ಟೆಲಿಕಾಂನ 699ರೂ, ಪ್ರಿಪೇಯ್ಡ್ ಪ್ಲ್ಯಾನ್ ಸೌಲಭ್ಯಗಳು : ಏರ್‌ಟೆಲ್ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ.
ಏರ್‌ಟೆಲ್ 719ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು : ಏರ್‌ಟೆಲ್ ಟೆಲಿಕಾಂನ 719ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ.
ಏರ್‌ಟೆಲ್‌ನ 779ರೂ. ಪ್ರೀಪೇಯ್ಡ್ ಪ್ಲಾನ್ ಸೌಲಭ್ಯಗಳು : ಏರ್‌ಟೆಲ್ ಟೆಲಿಕಾಂನ ನೂತನ 779ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 90 GB ಡೇಟಾ ಲಭ್ಯ ಆಗುತ್ತದೆ.


Click it and Unblock the Notifications








