ಏರ್‌ಟೆಲ್‌ನ ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಿದ್ರೇ, ವರ್ಷಪೂರ್ತಿ ಟೆನ್ಷನ್ ಇರಲ್ಲ!
ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಏರ್‌ಟೆಲ್ ಇತ್ತೀಚಿಗೆ ಹಲವು ಹೊಸ ಪ್ರೀಪೇಯ್ಡ್ ಪ್ಲ್ಯಾನ್ ಬಿಡುಗಡೆ ಮಾಡಿದೆ. ಆ ಪೈಕಿ ಏರ್‌ಟೆಲ್ 2498ರೂ. ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್ ಗಮನ ಸೆಳೆದಿದೆ. ಈ ಯೋಜನೆಯಲ್ಲಿ ಡೇಟಾ, ವಾಯಿಸ್ ಕರೆ ಹಾಗೂ ವ್ಯಾಲಿಡಿಟಿ ಸೌಲಭ್ಯಗಳಿವೆ.

ಹೌದು, ಏರ್‌ಟೆಲ್ ಟೆಲಿಕಾಂನ 2498ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಇತರೆ ಸೇವೆಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ ಈ ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಪ್ರಯೋಝನೆಗಳೆನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ 2498ರೂ. ವಾರ್ಷಿಕ ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್ ಸಂಸ್ಥೆಯ 2498ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಹೆಲೊ ಟ್ಯೂನ್, ಏರ್‌ಟೆಲ್ ಎಕ್ಸ್‌ಟ್ರೀಮ್ ಸೇವೆಗಳು ದೊರೆಯುತ್ತವೆ.

ಏರ್‌ಟೆಲ್ 2698ರೂ. ವಾರ್ಷಿಕ ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್ ಸಂಸ್ಥೆಯ 2698ರೂ ಪ್ರೀಪೇಯ್ಡ್ ಪ್ಲ್ಯಾನ್ ಸಹ ವಾರ್ಷಿಕ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಹಾಟ್ ಸ್ಟಾರ್ ವಿಐಪಿ ಜೊತೆಗೆ ಹೆಲೊ ಟ್ಯೂನ್, ಏರ್‌ಟೆಲ್ ಎಕ್ಸ್‌ಟ್ರೀಮ್ ಸೇವೆಗಳು ದೊರೆಯುತ್ತವೆ. ಏರ್‌ಟೆಲ್‌ನ ಇತರೆ ಆಕರ್ಷಕ ಯೋಜನೆಗಳನ್ನು ಮುಂದೆ ನೋಡೋಣ.

ಏರ್‌ಟೆಲ್ 401ರೂ. ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಿರುವುದಿಲ್ಲ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಯೋಜನೆ
ಏರ್‌ಟೆಲ್ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.


Click it and Unblock the Notifications








