Home
ಸುದ್ದಿಜಾಲ

ಏರ್‌ಟೆಲ್‌ ಈ ಮೂರು ಪ್ಲ್ಯಾನ್‌ಗಳಿಗೆ ಈಗ ಭರ್ಜರಿ ಕೊಡುಗೆ ಲಭ್ಯ!

ಪ್ರಸ್ತುತ ಟೆಲಿಕಾಂ ಸಂಸ್ಥೆಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಪ್ರಯೋಜನಗಳ ಹಲವು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಏರ್‌ಟೆಲ್ ಟೆಲಿಕಾಂ ಸಹ ಉಪಯುಕ್ತ ಯೋಜನೆಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಇನ್ನು ಏರ್‌ಟೆಲ್‌ಮ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಡೇಟಾ, ವ್ಯಾಲಿಡಿಟಿ ಜೊತೆಗೆ ಹೆಚ್ಚುವರಿ ಸೌಲಭ್ಯಗಳನ್ನು ಪಡೆದಿವೆ. ಇದೀಗ ಏರ್‌ಟೆಲ್ ತನ್ನ ಮೂರು ಪ್ಲ್ಯಾನ್‌ಗಳ ಸೌಲಭ್ಯ ವಿಸ್ತರಸಿದೆ.

ಏರ್‌ಟೆಲ್‌

ಹೌದು, ಏರ್‌ಟೆಲ್‌ ಟೆಲಿಕಾಂ ಈಗ ತನ್ನ 289ರೂ, 449ರೂ ಹಾಗೂ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳಲ್ಲಿ ಈಗ ಹೆಚ್ಚುವರಿಯಾಗಿ ಡೇಟಾ ಕೂಪನ್ ಪ್ರಯೋಜನ ಸೇರ್ಪಡೆ ಮಾಡಿದೆ. ಈಗಾಗಲೇ ಈ ಮೂರು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಡೇಟಾ, ವ್ಯಾಲಿಡಿಟಿ ಸೌಲಭ್ಯ ಹೊಂದಿವೆ. ಇದರೊಂದಿಗೆ ಈಗ ಹೆಚ್ಚುವರಿಯಾಗಿ ಮತ್ತೆ ಡೇಟಾ ಸೌಲಭ್ಯ ಸಹ ದೊರೆಯಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಮುಂದೆ ನೋಡೋಣ ಬನ್ನಿರಿ.

ಡೇಟಾ ಕೂಪನ್

ಡೇಟಾ ಕೂಪನ್

ಏರ್‌ಟೆಲ್‌ನ 289ರೂ, 449ರೂ ಹಾಗೂ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳಲ್ಲಿ ಇದೀಗ ಹೆಚ್ಚುವರಿಯಾಗಿ ಡೇಟಾ ಕೂಪನ್ ನೀಡಲಿದೆ. ಈ ಯೋಜನೆಗಳಲ್ಲಿ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚುವರಿ ಡೇಟಾ ಸಹ ದೊರೆಯಲಿದೆ. ಅದಲ್ಲದೇ 289ರೂ. ಪ್ಲ್ಯಾನ್ ZEE ಪ್ರೀಮಿಯಂ ಸದಸ್ಯತ್ವ ಹೊಂದಿದೆ. ಹಾಗೂ 449ರೂ ಹಾಗೂ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ಪಡೆದುಕೊಂಡಿವೆ.

ಏರ್‌ಟೆಲ್‌ 289ರೂ. ಪ್ಲ್ಯಾನ್

ಏರ್‌ಟೆಲ್‌ 289ರೂ. ಪ್ಲ್ಯಾನ್

ಏರ್‌ಟೆಲ್‌ನ ಇತ್ತೀಚಿನ 289ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಪ್ರತಿದಿನ 1.5GB ಡೇಟಾ ಪ್ರಯೋಜನ ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ, ನ್ಯಾಶನಲ್, ಲೋಕಲ್ ಕರೆಗಳ ಸೌಲಭ್ಯ ಲಭ್ಯ. ಹಾಗೂ ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್‌ ಪ್ರಯೋಜನ ಲಭ್ಯವಾಗುವುದು. ಇದರೊಂದಿಗೆ zee 5 ಚಂದಾದಾರಿಕೆ ಸೌಲಭ್ಯವು ಸಹ ದೊರೆಯುವುದು.

ಏರ್‌ಟೆಲ್‌ 449ರೂ.ಪ್ಲ್ಯಾನ್

ಏರ್‌ಟೆಲ್‌ 449ರೂ.ಪ್ಲ್ಯಾನ್

ಏರ್‌ಟೆಲ್‌ 449ರೂ.ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹೊಂದಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾವನ್ನು ಪಡೆದಿದೆ. ಇದರೊಂದಿಗೆ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.

ಏರ್‌ಟೆಲ್-599ರೂ.ಪ್ಲ್ಯಾನ್‌

ಏರ್‌ಟೆಲ್-599ರೂ.ಪ್ಲ್ಯಾನ್‌

ಏರ್‌ಟೆಲ್‌ನ 599ರೂ. ಪ್ರೀಪೇಡ್‌ ಪ್ಲ್ಯಾನ್‌ ದೀರ್ಘಾವಧಿಯ ಎಂಟ್ರಿ ಲೆವೆಲ್ ಪ್ಲ್ಯಾನ್‌ ಇದ್ದಂತೆ. ಈ ಪ್ಲ್ಯಾನಿನಲ್ಲಿ ಒಟ್ಟು 84 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.

Best Mobiles in India

English summary
Airtel Rs 289, Rs 448, and Rs 599. These three plans will get free data coupons.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+