ಜಿಯೋ VS ಏರ್‌ಟೆಲ್ 296ರೂ. ಪ್ಲ್ಯಾನ್: ರೀಚಾರ್ಜ್‌ಗೆ ಯಾವುದು ಉತ್ತಮ?
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂ ಸಂಸ್ಥೆಗಳು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿವೆ.ಅದಾಗ್ಯೂ, ಗ್ರಾಹಕರನ್ನು ಉಳಿಸಿಕೊಳ್ಳಲು ಹಾಗೂ ಹೆಚ್ಚಿಸಿಕೊಳ್ಳಲು ಹೊಸ ಯೋಜನೆಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಆ ಪೈಕಿ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳು ಪೈಪೋಟಿಯಲ್ಲಿ ಕಾಣಿಸಿಕೊಂಡಿದ್ದು, ಬಹುತೇಕ ಹೋಲಿಕೆಯ ಪ್ರೀಪೇಯ್ಡ್ ಯೋಜನೆಗಳ ಆಯ್ಕೆ ಹೊಂದಿವೆ. ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳ 296ರೂ. ಪ್ಲ್ಯಾನ್‌ಗಳಲ್ಲಿ ರೀಚಾರ್ಜ್‌ಗೆ ಯಾವುದು ಬೆಸ್ಟ್?

ಹೌದು, ಜಿಯೋ ಮತ್ತು ಏರ್‌ಟೆಲ್ ಎರಡು ಟೆಲಿಕಾಂಗಳು 296ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ರೀಚಾರ್ಜ್ ಯೋಜನೆ ಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಆಪ್ಸ್‌ಗಳ ಸೌಲಭ್ಯಗಳು ಸಿಗಲಿವೆ. ಆದರೂ ಈ ಎರಡು ಟೆಲಿಕಾಂಗಳ ಈ ಪ್ರಿಪೇಯ್ಡ್ ಯೋಜನೆಯಲ್ಲಿ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳ 296ರೂ. ಪ್ಲ್ಯಾನ್‌ಗಳಲ್ಲಿ ರೀಚಾರ್ಜ್‌ಗೆ ಯಾವುದು ಬೆಸ್ಟ್?..ಯೋಜನೆಗಳ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಜಿಯೋ 296ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 296ರೂ ಪ್ರಿಪೇಯ್ಡ್ ಪ್ಲ್ಯಾನ್ ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿಯ ಹೊಂದಿದೆ. ಇದು ಪ್ರತಿ ತಿಂಗಳು ಕೇವಲ ಒಂದು ರೀಚಾರ್ಜ್ ದಿನಾಂಕವನ್ನು ನೆನಪಿಟ್ಟುಕೊಳ್ಳಲು ಬಳಕೆದಾರರಿಗೆ ಸಹಾಯ ಮಾಡುತ್ತದೆ. ಇನ್ನು ಈ ಪ್ರಿಪೇಯ್ಡ್ ಪ್ಲಾನ್ ನಲ್ಲಿ ಒಟ್ಟು 25GB ಡೇಟಾ ಪ್ರಯೋಜನವನ್ನು ನೀಡಲಿದ್ದು, ನಂತರ 64Kbpsಗೆ ಡೇಟಾ ವೇಗವನ್ನು ಇಳಿಯುತ್ತದೆ. ಇದು ಅನಿಯಮಿತ ಧ್ವನಿ ಕರೆಗಳು, ದೈನಂದಿನ SMS ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಜಿಯೋ ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ. ಇದು ನಿಯಮಿತ ರೀಚಾರ್ಜ್ ಪ್ಲಾನ್‌ಗಿಂತ ಭಿನ್ನವಾಗಿದ್ದು, ನಿಗದಿತ ಮಾನ್ಯತೆಯ ಅವಧಿಯೊಂದಿಗೆ ಬರುತ್ತದೆ.

ಏರ್‌ಟೆಲ್ 296ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 296ರೂ. ಪ್ರಿಪೇಯ್ಡ್ ಯೋಜನೆಯು 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಯೋಜನೆಯು 25GB ಡೇಟಾವನ್ನು ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದೆ. ಒಮ್ಮೆ ಈ ಡೇಟಾ ಮಿತಿ ಮುಗಿದ ನಂತರ, ಚಂದಾದಾರರಿಗೆ ಪ್ರತಿ ಎಂಬಿ ಡೇಟಾಗೆ 50 ಪೈಸೆ ಶುಲ್ಕ ವಿಧಿಸಲಾಗುತ್ತದೆ. ಹಾಗೆಯೇ ಈ ಯೋಜನೆಯು ಪ್ರತಿದಿನ 100 SMS ಗಳನ್ನು ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ, ಚಂದಾದಾರರು ಅಮೆಜಾನ್ ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಯ 30 ದಿನದ ಪ್ರಯೋಗವನ್ನು ಪಡೆಯುತ್ತಾರೆ, ಅಪೊಲೊ 24|7 ಸರ್ಕಲ್‌ನ ಮೂರು ತಿಂಗಳ ಚಂದಾದಾರಿಕೆ, ಶಾ ಅಕಾಡೆಮಿಯಲ್ಲಿ ಆನ್‌ಲೈನ್ ಕೋರ್ಸ್‌ಗಳು, ಹಲೋ ಟ್ಯೂನ್ಸ್ ಮತ್ತು ವಿಂಕ್ ಮ್ಯೂಸಿಕ್ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯುತ್ತಾರೆ. ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗಳಲ್ಲಿ ಚಂದಾದಾರರು ರೂ 100 ಕ್ಯಾಶ್‌ಬ್ಯಾಕ್ ಪಡೆಯುತ್ತಾರೆ.
ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳ 296ರೂ. ಪ್ಲ್ಯಾನ್ ಗಳು ಆಕರ್ಷಕ ಸೌಲಭ್ಯ ಒಳಗೊಂಡಿವೆ. ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳ ಈ ಯೋಜನೆಗಳು ಬೆಲೆಯಲ್ಲಿ ಸಾಮ್ಯತೆ ಎನಿಸಿದರೂ, ಪ್ರಯೋಜನಗಳಲ್ಲಿ ಭಿನ್ನತೆ ಪಡೆದಿವೆ. ಜಿಯೋ ಹಾಗೂ ಏರ್‌ಟೆಲ್ ಎರಡು ಒಂದು ತಿಂಗಳ (30 ದಿನಗಳ) ವ್ಯಾಲಿಡಿಟಿ ನೀಡಿದೆ. ಹಾಗೆಯೇ ಏರ್‌ಟೆಲ್ ಮತ್ತು ಜಿಯೋ ಟೆಲಿಕಾಂಗಳು 25GB ಡೇಟಾ ಪ್ರಯೋಜನ ಪಡೆದಿವೆ. ಅಮೆಜಾನ್ ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಯ ಸೌಲಭ್ಯ ಪಡೆದಿದೆ. ಡೇಟಾ ಮತ್ತು ವ್ಯಾಲಿಡಿಟಿ ಸೌಲಭ್ಯಗಳನ್ನು ಗಮನಿಸುವುದಾದರೇ ಜಿಯೋದ 259ರೂ. ಪ್ಲ್ಯಾನ್ ಆಕರ್ಷಕ ಎನಿಸುತ್ತದೆ.


Click it and Unblock the Notifications








