ಏರ್‌ಟೆಲ್‌ನ ಈ ಅಗ್ಗದ ಪ್ಲ್ಯಾನ್ ರೀಚಾರ್ಜ್ ಮಾಡಿಸಿದ್ರೆ, 50ರೂ. ಡಿಸ್ಕೌಂಟ್ ಲಭ್ಯ!
ಜನಪ್ರಿಯ ಏರ್‌ಟೆಲ್ ಟೆಲಿಕಾಂ ಹಲವು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಮೂಲಕ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಟೆಲಿಕಾಂನ ಬಹುತೇಕ ಪ್ರೀಪೇಯ್ಡ್ ಯೋಜನೆಗಳು ದೈನಂದಿನ ಡೇಟಾ ಪ್ರಯೋಜನವನ್ನು ಪಡೆದಿರುವ ಜೊತೆಗೆ ಅಧಿಕ ವ್ಯಾಲಿಡಿಟಿಯ ಸೌಲಭ್ಯವನ್ನು ಹೊಂದಿವೆ. ಆ ಪೈಕಿ ಅಗ್ಗದ ಬೆಲೆಯಲ್ಲಿರುವ ಏರ್‌ಟೆಲ್ 249ರೂ ಮತ್ತು 298ರೂ. ಯೋಜನೆಗಳು ಒಂದು ತಿಂಗಳ ಅವಧಿಯ ರೀಚಾರ್ಜ್ ಆಯ್ಕೆಯಲ್ಲಿ ಗಮನ ಸೆಳೆದಿವೆ. ಇದೀಗ ಈ ಯೋಜನೆಗಳು ಡಿಸ್ಕೌಂಟ್‌ನಿಂದಲೂ ಆಕರ್ಷಿಸಿವೆ.

ಹೌದು, ಏರ್‌ಟೆಲ್ ಟೆಲಿಕಾಂನ ಏರ್‌ಟೆಲ್ 249ರೂ. ಮತ್ತು 298ರೂ. ಪ್ರೀಪೇಯ್ಡ್ ಯೋಜನೆಗಳ ರೀಚಾರ್ಜ್ ಮೇಲೆ 50ರೂ. ಡಿಸ್ಕೌಂಟ್ ಸಿಗಲಿದೆ. ಗ್ರಾಹಕರು ಏರ್‌ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್ ಮೂಲಕ ಈ ಯೋಜನೆಗಳನ್ನು ರೀಚಾರ್ಜ್ ಮಾಡಿಕೊಂಡರೇ 50ರೂ. ಡಿಸ್ಕೌಂಟ್ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಎರಡು ಯೋಜನೆಗಳು ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಪಡೆದಿವೆ. ಇನ್ನುಳಿದಂತೆ ಏರ್‌ಟೆಲ್‌ನ ಈ ಎರಡು ಯೋಜನೆಗಳ ಪ್ರಯೋಜನಗಳನ್ನು ತಿಳಿಯಲು ಮುಂದೆ ಓದಿರಿ.

ಏರ್‌ಟೆಲ್ 298ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಈ ಯೋಜನೆಯು ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಪಡೆದಿದೆ. ಹಾಗೆಯೇ ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಜೊತೆಗೆ ಅನಿಯಮಿತ ಕರೆ ಮಾಡುವ ಪ್ರಯೋಜನವಿದೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ಸೇರಿಸಲಾಗಿದೆ. ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಏರ್‌ಟೆಲ್ ಎಕ್ಸ್‌ಸ್ಟ್ರೀಮ್ ಚಂದಾದಾರಿಕೆ ಮತ್ತು ಉಚಿತ ಆನ್‌ಲೈನ್ ಕೋರ್ಸ್‌ಗಳಿಗೆ ಪ್ರವೇಶ ಹೊಂದಿರುವ ವಿಂಕ್ ಸಂಗೀತ ಮತ್ತು ಫಾಸ್ಟ್ಯಾಗ್‌ನಲ್ಲಿ ರಿಯಾಯಿತಿ ಸಹ ಲಭ್ಯ.

ಏರ್‌ಟೆಲ್ 249ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 249ರೂ. ಪ್ರೀಪೇಯ್ಡ್ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ. ಹಾಗೆಯೇ ಏರ್‌ಟೆಲ್‌ನ ಡೈಲಿ 3GB ಪ್ಲ್ಯಾನ್‌ಗಳನ್ನು ತಿಳಿಯಲು ಮುಂದಿನ ಸ್ಲೈಡರ್ ಓದಿರಿ.

ಏರ್‌ಟೆಲ್ 558ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಉಚಿತ ಡೇಟಾ, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ.

ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್ 398ರೂ. ಪ್ರೀಪೇಯ್ಡ್ ಪ್ಲ್ಯಾನ್‌ನಿನಲ್ಲಿ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಉಚಿತ ಡೇಟಾ, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ.


Click it and Unblock the Notifications








