Home
ಸುದ್ದಿಜಾಲ

ಏರ್‌ಟೆಲ್‌ನ ಈ ಪ್ಲ್ಯಾನ್ ರೀಚಾರ್ಜ್‌ ಮಾಡಿದ್ರೆ, 365 ದಿನ ಡೇಟಾ ಮತ್ತು ಓಟಿಟಿ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್‌, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಏರ್‌ಟೆಲ್‌ ಇದೀಗ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಏರ್‌ಟೆಲ್‌ 2,999ರೂ. ಪ್ರೀಪೇಯ್ಡ್ ಪ್ಲ್ಯಾನ್ ದುಬಾರಿ ಪ್ರೈಸ್‌ ಟ್ಯಾಗ್‌ ಅನಿಸಿದರೂ, ಆಕರ್ಷಕ ಪ್ರಯೋಜನಗಳನ್ನು ಪಡೆದಿದೆ. ಈ ಯೋಜನೆಯು ರೀಚಾರ್ಜ್‌ ಮಾಡಿಸಿದರೇ 365 ದಿನ ಡೇಟಾ, ವಾಯಿಸ್ ಕರೆ, ಎಸ್‌ಎಮ್‌ಎಸ್‌ ಹಾಗೂ ಓಟಿಟಿ ಪ್ರಯೋಜನ ಲಭ್ಯ.

ಏರ್‌ಟೆಲ್‌ನ ಈ ಪ್ಲ್ಯಾನ್ ರೀಚಾರ್ಜ್‌ ಮಾಡಿದ್ರೆ, 365 ದಿನ ಡೇಟಾ ಮತ್ತು ಓಟಿಟಿ!

ಹೌದು, ಏರ್‌ಟೆಲ್‌ ಟೆಲಿಕಾಂನ 2,999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಡಿಸ್ನಿ ಹಾಟ್‌ಸ್ಟಾರ್ ಪ್ಲಸ್‌ ಓಟಿಟಿ ಪ್ರಯೋಜನ ಹಾಗೂ ಏರ್‌ಟೆಲ್‌ನ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 2,999ರೂ. ವಾರ್ಷಿಕ ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನ ಈ ಪ್ಲ್ಯಾನ್ ರೀಚಾರ್ಜ್‌ ಮಾಡಿದ್ರೆ, 365 ದಿನ ಡೇಟಾ ಮತ್ತು ಓಟಿಟಿ!

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಹಾಗೆಯೇ ಡಿಸ್ನಿ ಹಾಟ್‌ಸ್ಟಾರ್ ಪ್ಲಸ್‌ ಓಟಿಟಿ ಪ್ರಯೋಜನ ದೊರೆಯಲಿದೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್ ಕೊಡುಗೆ ದೊರೆಯಲಿದೆ. ಏರ್‌ಟೆಲ್‌ನ ಇತರೆ ಆಕರ್ಷಕ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನ ಈ ಪ್ಲ್ಯಾನ್ ರೀಚಾರ್ಜ್‌ ಮಾಡಿದ್ರೆ, 365 ದಿನ ಡೇಟಾ ಮತ್ತು ಓಟಿಟಿ!

ಏರ್‌ಟೆಲ್‌ 838ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 838ರೂ. ಪ್ರೀಪೇಡ್‌ ಪ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

Best Mobiles in India

English summary
Airtel Rs 2999 Plan Offers Annual Validity With OTT Benefit.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+