ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, ಡೈಲಿ 3GB ಡೇಟಾ!
ಟೆಲಿಕಾಂ ವಲಯದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಏರ್‌ಟೆಲ್ ಟೆಲಿಕಾಂ, ಜಿಯೋ ಟೆಲಿಕಾಂಗೆ ಪೈಪೋಟಿ ನೀಡುತ್ತಾ ಸಾಗಿದೆ. ಏರ್‌ಟೆಲ್ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಏರ್‌ಟೆಲ್ 558ರೂ.ಗಳ ಯೋಜನೆಯು ಹೆಚ್ಚು ಗಮನ ಸೆಳೆದಿದೆ.

ಹೌದು, ಏರ್‌ಟೆಲ್ ಟೆಲಿಕಾಂನ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್, ಏರ್‌ಟೆಲ್ ಎಕ್ಸ್‌ಟ್ರಿಮ್ ಮ್ಯೂಸಿಕ್ ಆಪ್ಸ್‌ಗಳ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ 558ರೂ. ವಾರ್ಷಿಕ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಏರ್‌ಟೆಲ್ 558ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಏರ್‌ಟೆಲ್ 448ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 448ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.


Click it and Unblock the Notifications








