Home
ಸುದ್ದಿಜಾಲ

ಏರ್‌ಟೆಲ್‌ನ ಈ ಎರಡು ಪ್ಲ್ಯಾನ್‌ಗಳಿಗೆ ಗ್ರಾಹಕರು ಫಿದಾ!..ಡೇಟಾ ಎಷ್ಟು?

ಭಾರತೀಯ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ಏರ್‌ಟೆಲ್‌, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಏರ್‌ಟೆಲ್‌ ಟೆಲಿಕಾಂ, ಜಿಯೋ ಟೆಲಿಕಾಂಗೆ ಫೈಟ್ ನೀಡುವ ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆ ಹೊಂದಿದೆ. ಏರ್‌ಟೆಲ್‌ ಕಂಪನಿಯು ಅಲ್ಪಾವಧಿಯ ಪ್ಲ್ಯಾನ್‌ಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಯೋಜನೆಗಳನ್ನು ಪಡೆದಿದೆ. ಅವುಗಳಲ್ಲಿ ಏರ್‌ಟೆಲ್‌ ಟೆಲಿಕಾಂನ ಎರಡು ಯೋಜನೆಗಳು ಭಾರೀ ಗಮನ ಸೆಳೆದಿದೆ.

ಪ್ರೀಪೇಯ್ಡ್‌

ಹೌದು, ಏರ್‌ಟೆಲ್‌ ಟೆಲಿಕಾಂ ಭಿನ್ನ ಶ್ರೇಣಿಯ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ಏರ್‌ಟೆಲ್‌ 699ರೂ. ಮತ್ತು ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಆಕರ್ಷಕ ಎನಿಸಿವೆ. ಈ ಎರಡು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಪಡೆದಿವೆ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 699ರೂ. ಮತ್ತು ಏರ್‌ಟೆಲ್‌ 599ರೂ. ಯೋಜನೆಗಳನ್ನು ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್‌ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್‌ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

Best Mobiles in India

English summary
Airtel Rs. 599 and Rs. 699 Plan Offers Daily 3GB Data with Attractive Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+