ಏರ್‌ಟೆಲ್‌ನ ಈ ಪ್ಲ್ಯಾನಿನಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಜೊತೆಗೆ 84GB ಡೇಟಾ ಲಭ್ಯ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಭಾರ್ತಿ ಏರ್‌ಟೆಲ್, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಅದೇ ದಾರಿಯಲ್ಲಿ ಮುಂದೆ ಸಾಗಿರುವ ಏರ್‌ಟೆಲ್ ಟೆಲಿಕಾಂ, ಜಿಯೋ ಟೆಲಿಕಾಂಗೆ ಫೈಟ್ ನೀಡುವ ಯೋಜನೆಗಳ ಆಯ್ಕೆ ಹೊಂದಿದೆ. ಏರ್‌ಟೆಲ್ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಬಹುತೇಕ ಪ್ಲ್ಯಾನ್‌ಗಳು ಅಧಿಕ ದೈನಂದಿನ ಡೇಟಾ ಪಡೆದಿವೆ. ಆ ಪೈಕಿ ಏರ್‌ಟೆಲ್ ಟೆಲಿಕಾಂನ ಅಧಿಕ ಡೇಟಾ ಪ್ಲ್ಯಾನ್‌ಗಳು ಭಾರೀ ಗಮನ ಸೆಳೆದಿದೆ.

ಹೌದು, ಏರ್‌ಟೆಲ್ ಟೆಲಿಕಾಂ ಭಿನ್ನ ಶ್ರೇಣಿಯ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ಏರ್‌ಟೆಲ್ 599ರೂ. ಯೋಜನೆಗಳು ಆಕರ್ಷಕ ಎನಿಸಿವೆ. ಈ ಪ್ರೀಪೇಯ್ಡ್ ಯೋಜನೆ ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಪಡೆದಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ 599ರೂ. ಯೋಜನೆ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಏರ್‌ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.


Click it and Unblock the Notifications








