ಏರ್‌ಟೆಲ್ 599ರೂ.ಪ್ಲ್ಯಾನ್ ಪ್ರಯೋಜನಗಳೆನು?..ರೀಚಾರ್ಜ್ ಮಾಡಿಸಲು ಯೋಗ್ಯವೇ?
ಟೆಲಿಕಾಂ ಕ್ಷೇತ್ರದಲ್ಲಿ ಪ್ರಮುಖ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್, ಚಂದಾದಾರರ ಸಂಖ್ಯೆ ಹೆಚ್ಚಿಸಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಏರ್‌ಟೆಲ್ ಹಲವು ಡೈಲಿ ಡೇಟಾ, ಬಿಗ್ ವ್ಯಾಲಿಡಿಟಿ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸಿದೆ. ಆ ಪೈಕಿ ಏರ್‌ಟೆಲ್ 599ರೂ. ಯೋಜನೆ ಬಳಕೆದಾರರ ಗಮನ ಸೆಳೆದಿದೆ. ಈ ಯೋಜನೆ ರೀಚಾರ್ಜ್ ಮಾಡಿಸಲು ಉತ್ತಮವೇ?
ಹೌದು, ಏರ್‌ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ ಡೇಟಾ, ಎಸ್‌ಎಮ್‌ಎಸ್ ಪ್ರಯೋಜನ ಸೇರಿದಂತೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಒಳಗೊಂಡಿದೆ. ಈ ಯೋಜನೆಯು ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯವನ್ನು ಹೊಂದಿರುವುದು ಆಕರ್ಷಣಿಯ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್‌ನಂತಹ ಸೌಲಭ್ಯಗಳನ್ನು ಪಡೆದಿದೆ. ಹಾಗಾದರೇ ಏರ್‌ಟೆಲ್‌ನ ಈ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಯೋಗ್ಯವೇ?..ಮುಂದೆ ಓದಿರಿ.

ಏರ್‌ಟೆಲ್-599ರೂ. ಯೋಜನೆ
ಏರ್‌ಟೆಲ್‌ನ 599ರೂ. ಪ್ರೀಪೇಡ್ ಯೋಜನೆಯು ದೀರ್ಘಾವಧಿಯ ಎಂಟ್ರಿ ಲೆವೆಲ್ ಪ್ಲ್ಯಾನ್ ಇದ್ದಂತೆ. ಈ ಪ್ಲ್ಯಾನಿನಲ್ಲಿ ಒಟ್ಟು 56 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ. ಹಾಗೆಯೇ Wynk ಮ್ಯೂಸಿಕ್, ಹೆಲೋ ಟ್ಯೂನ್ ಸೇವೆಗಳ ಸಹ ದೊರೆಯಲಿವೆ.

ಏರ್‌ಟೆಲ್ 289ರೂ. ಪ್ಲ್ಯಾನ್
ಏರ್‌ಟೆಲ್‌ನ ಇತ್ತೀಚಿನ 289ರೂ. ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಪ್ರತಿದಿನ 1.5GB ಡೇಟಾ ಪ್ರಯೋಜನ ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ, ನ್ಯಾಶನಲ್, ಲೋಕಲ್ ಕರೆಗಳ ಸೌಲಭ್ಯ ಲಭ್ಯ. ಹಾಗೂ ಪ್ರತಿದಿನ ಉಚಿತ 100 ಎಸ್‌ಎಮ್‌ಎಸ್ ಪ್ರಯೋಜನ ಲಭ್ಯವಾಗುವುದು. ಇದರೊಂದಿಗೆ zee 5 ಚಂದಾದಾರಿಕೆ ಸೌಲಭ್ಯವು ಸಹ ದೊರೆಯುವುದು.

ಏರ್‌ಟೆಲ್ 449ರೂ.ಪ್ಲ್ಯಾನ್
ಏರ್‌ಟೆಲ್ 449ರೂ.ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಒಳಗೊಂಡಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹೊಂದಿದೆ. ಇದರೊಂದಿಗೆ ಪ್ರತಿದಿನ 2GB ಡೇಟಾವನ್ನು ಪಡೆದಿದೆ. ಇದರೊಂದಿಗೆ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.


Click it and Unblock the Notifications








