ಏರ್‌ಟೆಲ್‌ನ ಈ ಬಜೆಟ್ ಪ್ಲ್ಯಾನಿನಲ್ಲಿ 90 ದಿನ ವ್ಯಾಲಿಡಿಟಿ ಪಕ್ಕಾ!
ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಭಾರ್ತಿ ಏರ್‌ಟೆಲ್ ಟೆಲಿಕಾಂ ಗ್ರಾಹಕರನ್ನು ಸೆಳೆಯಲು ಅಧಿಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ದಾರಿಯಲ್ಲಿ ಮುಂದೆ ಸಾಗಿರುವ ಏರ್‌ಟೆಲ್ ಟೆಲಿಕಾಂ, ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ರಿಪೇಯ್ಡ್ ಪ್ಲ್ಯಾನ್‌ಗಳನ್ನು ಪಡೆದಿದೆ.
ಹೌದು, ಏರ್‌ಟೆಲ್ ಟೆಲಿಕಾಂ ಭಿನ್ನ ಪ್ರಿಪೇಯ್ಡ್ ಶ್ರೇಣಿಯ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ಏರ್‌ಟೆಲ್ ಟೆಲಿಕಾಂ ಈ ಒಂದು ಪ್ರೀಪೇಯ್ಡ್ ಪ್ಲ್ಯಾನ್ ಭರ್ಜರಿ ಡೇಟಾ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆದಿದೆ. ಅದರ ಜೊತೆಗೆ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿದೆ.

ಅದುವೇ ಏರ್‌ಟೆಲ್ 779ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಗಿದೆ. ಇದರಲ್ಲಿ ಒಟ್ಟು 135 GB ಡೇಟಾ ದೊರೆಯುತ್ತದೆ ಜೊತೆಗೆ ಹೆಚ್ಚುವರಿ ಪ್ರಯೋಜನ ಸಹ ಒಳಗೊಂಡಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನಗಳು ಈ ಯೋಜನೆಯಲ್ಲಿ ದೊರೆಯುತ್ತವೆ. ಹಾಗಾದರೇ ಏರ್‌ಟೆಲ್ 779ರೂ. ಪ್ರೀಪೇಯ್ಡ್ ಪ್ಲ್ಯಾನಿನ ಇತರೆ ಪ್ರಯೋಜನಗಳೆನು? ಈ ಯೋಜನೆ ರೀಚಾರ್ಜ್ ಮಾಡಿಸಬಹುದೇ? ಇತರೆ ಅತ್ಯುತ್ತಮ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನ 779ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು : ಏರ್‌ಟೆಲ್ ಟೆಲಿಕಾಂನ ನೂತನ 779ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ.
ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 135 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್ ಆಪ್‌ಗಳ ಸೌಲಭ್ಯ ದೊರೆಯುತ್ತದೆ. ಹೆಚ್ಚುವರಿಯಾಗಿ ವೆಂಕ್ ಮ್ಯೂಸಿಕ್ ಹಾಗೂ ಉಚಿಯ ಹಲೋ ಟ್ಯೂನ್ ಸೇವೆ ಲಭ್ಯ.

ಏರ್ಟೆಲ್ 499ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ : ಏರ್‌ಟೆಲ್ 499ರೂ. ಫೋಸ್ಟ್‌ಪೇಯ್ಡ್ ಯೋಜನೆಯಲ್ಲಿ ಬಳಕೆದಾರರು 75GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಆಕ್ಸಸ್, ವಿಂಕ್ ಮ್ಯೂಸಿಕ್ ಮತ್ತು ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ.
ಏರ್‌ಟೆಲ್ 599ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ : ಏರ್‌ಟೆಲ್ 599 ರೂ. ಯೋಜನೆಯು ಒಂದು ಫ್ಯಾಮಿಲಿ ಪೋಸ್ಟ್‌ಪೇಯ್ಡ್ ಯೋಜನೆ ಆಗಿದ್ದು, ಇದ್ರಲ್ಲಿ ಬಳಕೆದಾರರು 75GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಆಕ್ಸಸ್, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್ ಮತ್ತು ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ.

ಏರ್‌ಟೆಲ್ 999ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು : ಏರ್‌ಟೆಲ್ ಟೆಲಿಕಾಂನ 999 ರೂ. ಪೋಸ್ಟ್‌ಪೇಯ್ಡ್ ಪ್ಲ್ಯಾನ್ ಒಟ್ಟು 100 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಪ್ರವೇಶ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ವಿಂಕ್ ಮ್ಯೂಸಿಕ್ ಸೌಲಭ್ಯಗಳು ಸೇರಿದಂತೆ ಇತರೆ ಹಲವು ಪ್ರಯೋಜನಗಳು ಲಭ್ಯವಾಗಲಿವೆ.


Click it and Unblock the Notifications








