ಏರ್‌ಟೆಲ್‌ನಿಂದ ಹೊಸ ಪ್ಲ್ಯಾನ್!..ಸಿಗುತ್ತೆ ಭರ್ಜರಿ ಡೇಟಾ ಮತ್ತು ಫ್ರಿ ಅಮೆಜಾನ್ ಪ್ರೈಮ್!
ಭಾರತೀಯ ಟೆಲಿಕಾಂ ವಲಯದಲ್ಲಿ ಲೀಡಿಂಗ್ ನಲ್ಲಿರುವ ಜಿಯೋಗೆ ತೀವ್ರ ಪೈಪೋಟಿ ನೀಡುತ್ತಿರುವ ಟೆಲಿಕಾಂ ಅಂದರೇ ಅದು ಭಾರ್ತಿ ಏರ್‌ಟೆಲ್ ಆಗಿದೆ. ಏರ್‌ಟೆಲ್ ಸಂಸ್ಥೆಯು ತನ್ನ ಚಂದಾದಾರರಿಗೆ ಈಗಾಗಲೆ ಹಲವು ಉಚಿತ ಕರೆ ಹಾಗೂ ಅಧಿಕ ಡೇಟಾ ಸೌಲಭ್ಯದ ಯೋಜನೆಗಳನ್ನು ಪರಿಚಯಿಸಿದೆ. ಹಾಗೆಯೇ ಕೆಲವೊಂದು ಪ್ರೀಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿ ಮನರಂಜನೆಯ ಸೌಲಭ್ಯ ಒದಗಿಸಿದೆ. ಅದೇ ರೀತಿ ಇದೀಗ ಹೊಸದೊಂದು ಯೋಜನೆ ಪರಿಚಯಿಸಿದ್ದು, ಭರ್ಜರಿ ಕೊಡುಗೆ ನೀಡಿದೆ.

ಹೌದು, ಏರ್‌ಟೆಲ್ ಟೆಲಿಕಾಂ ನೂತನವಾಗಿ ಏರ್‌ಟೆಲ್ 999ರೂ. ಪ್ರಿಪೇಯ್ಡ್ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯು ಅಮೆಜಾನ್ ಪ್ರೈಮ್ ಚಂದಾದಾರಿಕೆಯನ್ನು ಒಳಗೊಂಡಿದೆ. ಹಾಗೆಯೇ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿದ್ದು, ದೈನಂದಿನ ಡೇಟಾ ಸೌಲಭ್ಯ ಸಹ ಪಡೆದಿದೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಹಾಗೂ ಏರ್‌ಟೆಲ್ ಸಂಸ್ಥೆಯ ಆಪ್‌ಗಳ ಪ್ರಯೋಝನ ಸಹ ಲಭ್ಯ ಆಗಲಿದೆ. ಹಾಗಾದರೆ ಏರ್‌ಟೆಲ್ 999ರೂ. ಪ್ರಿಪೇಯ್ಡ್ ಯೋಜನೆಯ ಇತರೆ ಪ್ರಯೋಜನಗಳ ಹಾಗೂ ಇತರೆ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಏರ್‌ಟೆಲ್ 999ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ನ 349ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಲೋಕಲ್ ಮತ್ತು ನ್ಯಾಶನಲ್ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 2.5 GB ಡೇಟಾ ಹಾಗೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಸಿಗಲಿದೆ. ಹಾಗೆಯೆ ಜನಪ್ರಿಯ ವಿಡಿಯೊ ಸ್ಟ್ರೀಮಿಂಗ್ ಆಪ್ ಅಮೆಜಾನ್ ಪ್ರೈಮ್‌ನ ಒಂದು ತಿಂಗಳ ಚಂದಾದಾರಿಕೆ ಸಿಗಲಿದ್ದು, ಏರ್‌ಟೆಲ್‌ನ Wynk Music ಸೇವೆ ಸಹ ದೊರೆಯುತ್ತದೆ. ಇದರೊಂದಿಗೆ ಹೆಲೊಟೂನ್ಸ್ ಮತ್ತು 100 ರೂ. ಫಾಸ್ಟ್‌ಟ್ಯಾಗ್ ಕ್ಯಾಶ್-ಬ್ಯಾಕ್ ಸಹ ಸಿಗಲಿದೆ.

ಏರ್‌ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಏರ್‌ಟೆಲ್ 265 ರೂ.ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ 265ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್ ಕೂಡ 28 ದಿನಗಳ ಮಾನ್ಯತೆ ಹೊಂದಿದೆ. ಈ ಪ್ಲಾನ್‌ನಲ್ಲಿ ನಿಮಗೆ ಪ್ರತಿದಿನ 1 GB ಡೇಟಾ ಲಭ್ಯವಿದೆ. ಇದಲ್ಲದೆ ಎಲ್ಲಾ ನೆಟ್‌ವರ್ಕ್ ಬೆಂಬಲಿಸುವ ಅನಿಯಮಿತ ಕರೆಗಳು ಹಾಗೂ ದಿನಕ್ಕೆ 100 ಎಸ್‌ಎಂಎಸ್ ಸೇವೆಗಳು ಲಭ್ಯವಾಗಲಿದೆ. ಈ ಯೋಜನೆಯೊಂದಿಗೆ ಅಮೆಜಾನ್ ಪ್ರೈಮ್ ವೀಡಿಯೊಗೆ ಮೊಬೈಲ್ ಚಂದಾದಾರಿಕೆಯು ಒಂದು ತಿಂಗಳವರೆಗೆ ಲಭ್ಯವಿರುತ್ತದೆ.
ಏರ್‌ಟೆಲ್ 299 ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂ 299ರೂ.ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಈ ಯೋಜನೆಯಲ್ಲಿಯೂ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.


Click it and Unblock the Notifications








