Home
ಸುದ್ದಿಜಾಲ

ಪದೇ ಪದೇ ಮೊಬೈಲ್‌ ರೀಚಾರ್ಜ್‌ ಮಾಡುವ ಅಗತ್ಯ ಇಲ್ಲ; ಈ ಒಂದು ಪ್ಲ್ಯಾನ್‌ ಸಾಕು!

ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋಗೆ ನೇರ ಟಾಂಗ್‌ ನೀಡುತ್ತಾ ಮುನ್ನಡೆದಿವ ಭಾರ್ತಿ ಏರ್‌ಟೆಲ್‌ (Airtel) ಹಲವು ಆಕರ್ಷಕ ರೀಚಾರ್ಜ್‌ ಯೋಜನೆಗಳ ಮೂಲಕ ಈಗಾಗಲೇ ಗ್ರಾಹಕರನ್ನು ತನ್ನತ್ತ ಸೆಳೆದಿದೆ. ಮುಂಚೂಣಿಯ ಟೆಲಿಕಾಂ ಸಂಸ್ಥೆಯಾಗಿ ಮುಂದೆ ಸಾಗಿರುವ ಏರ್‌ಟೆಲ್‌ ತನ್ನ ಚಂದಾದಾರರಿಗಾಗಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್‌ಗಳು ಡೇಟಾ ಪ್ರಯೋಜನ ಪಡೆದಿರುವುದು ಪ್ರಮುಖ ಆಕರ್ಷಣೆ ಎನಿಸಿದೆ. ಅದಾಗ್ಯೂ, ಏರ್‌ಟೆಲ್‌ ಈ ಒಂದು ರೀಚಾರ್ಜ್‌ ಯೋಜನೆ ಬಹಳ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿದೆ.

ಹೌದು, ಏರ್‌ಟೆಲ್‌ ಸಂಸ್ಥೆಯ ಹಲವು ಭಿನ್ನ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆ ಪಡೆದಿದ್ದು, ಆ ಪೈಕಿ 3359ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಹೆಚ್ಚು ಗಮನ ಸೆಳೆದಿದೆ. ಈ ಪ್ಲ್ಯಾನ್‌ ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ಆಕರ್ಷಕ ದೈನಂದಿನ ಡೇಟಾ ಪ್ರಯೋಜನ ಪಡೆದಿದೆ. ಇನ್ನು ಗ್ರಾಹಕರು ಈ ಯೋಜನೆ ರೀಚಾರ್ಜ್‌ ಮಾಡಿದ್ರೆ, ಒಂದು ವರ್ಷದ ಅವಧಿಗೆ ಪದೇ ಪದೇ ರೀಚಾರ್ಜ್ ಮಾಡುವ ಅಗತ್ಯ ಇರಲ್ಲ. ಹಾಗಾದರೇ ಏರ್‌ಟೆಲ್‌ ಟೆಲಿಕಾಂನ 3359ರೂ. ಪ್ರೀಪೇಯ್ಡ್‌ ಪ್ಲ್ಯಾನಿನ ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಮುಂದೆ ಓದಿರಿ.

ಪದೇ ಪದೇ ಮೊಬೈಲ್‌ ರೀಚಾರ್ಜ್‌ ಮಾಡುವ ಅಗತ್ಯ ಇಲ್ಲ; ಈ ಒಂದು ಪ್ಲ್ಯಾನ್‌ ಸಾಕು!

ಏರ್‌ಟೆಲ್‌ 3359ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂ 3599ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ವಾರ್ಷಿಕ ಅವಧಿಯ ಪ್ಲ್ಯಾನಿನಲ್ಲಿ ನಿತ್ಯ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಹೆಚ್ಚುವರಿಯಾಗಿ ಉಚಿತ ಹೆಲ್ಲೋ ಟ್ಯೂನ್‌ ಸೇವೆ ಸಿಗಲಿದೆ.

ಏರ್‌ಟೆಲ್‌ 3999ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಏರ್‌ಟೆಲ್‌ ಟೆಲಿಕಾಂ 3999 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಕೂಡಾ 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ವಾರ್ಷಿಕ ಅವಧಿಯ ಪ್ಲ್ಯಾನಿನಲ್ಲಿ ಪ್ರತಿದಿನ 2.5GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಹಾಗೆಯೇ ಏರ್‌ಟೆಲ್‌ನ ಈ ಪ್ಲ್ಯಾನಿನಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಸೇವೆ ಪಡೆಯಬಹುದು.

ಜಿಯೋ 3599ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಜಿಯೋ ಸಂಸ್ಥೆಯ 3599 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯ ಸೌಲಭ್ಯ ಪಡೆದುಕೊಂಡಿದೆ. ಈ ರೀಚಾರ್ಜ್‌ ಯೋಜನೆಯಲ್ಲಿ ಬಳಕೆದಾರರಿಗೆ ನಿತ್ಯ 2.5 GB ಡೇಟಾ ಪ್ರಯೋಜನಗಳು ಲಭ್ಯ ಆಗಲಿವೆ. ಅಲ್ಲದೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಕೂಡಾ ದೊರೆಯುತ್ತದೆ.

ಜಿಯೋ 3999ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ಜಿಯೋ ಸಂಸ್ಥೆಯ 3999 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಇದು 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಲಭ್ಯ ಇದ್ದು, ಇದರ ಜೊತೆಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗಲಿದೆ. ಹಾಗೆಯೇ ಈ ರೀಚಾರ್ಜ್‌ ಯೋಜನೆಯಲ್ಲಿ ಹೆಚ್ಚುವರಿ ಯಾಗಿ ಫ್ಯಾನ್‌ಕೋಡ್‌ ಚಂದಾದಾರಿಕೆ, ಜಿಯೋ ಟಿವಿ, ಜಿಯೋ ಸಿನಿಮಾ ಸೇವೆಗಳು ಪಡೆಯಬಹುದು.

Best Mobiles in India

English summary
Airtel’s Rs 3599 Prepaid Plan Gives You a Year of Validity and Daily Data. Check best annual plans and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+