Home
ಸುದ್ದಿಜಾಲ

ಏರ್‌ಟೆಲ್‌ ಚಂದಾದಾರರೇ, ಮೂರು ತಿಂಗಳು ವ್ಯಾಲಿಡಿಟಿ ಬೇಕಿದ್ರೆ ಈ ಪ್ಲ್ಯಾನ್ ಉತ್ತಮ!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಏರ್‌ಟೆಲ್‌ ಟೆಲಿಕಾಂ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಜಿಯೋ, ವಿ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಯೋಜನೆಗಳನ್ನು ಆಯ್ಕೆಯನ್ನು ಹೊಂದಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ. ಇನ್ನು ಕೆಲವು ಯೋಜನೆಗಳು ನಿಗದಿತ ಡೇಟಾ ಜೊತೆಗೆ ಬಿಗ್ ವ್ಯಾಲಿಡಿಟಿ ಹೊಂದಿದೆ.

ಟೆಲಿಕಾಂ

ಹೌದು, ಏರ್‌ಟೆಲ್ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಟೆಲಿಕಾಂನ ಪ್ರಿಪೇಯ್ಡ್‌ ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಪಡೆದಿದ್ದು, ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಬಹುತೇಕ ಬಳಕೆದಾರರು 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ರೀಚಾರ್ಜ್ ಮಾಡಲು ಹೆಚ್ಚು ಆಸಕ್ತಿ ತೋರುತ್ತಾರೆ. ಹಾಗಾದರೇ ಏರ್‌ಟೆಲ್‌ನ 84 ದಿನಗಳ ವ್ಯಾಲಿಡಿಟಿಯ ಯೋಜನೆಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್‌ನ 698ರೂ. ಪ್ರೀಪೇಡ್‌ ಯೋಜನೆ

ಏರ್‌ಟೆಲ್‌ನ 698ರೂ. ಪ್ರೀಪೇಡ್‌ ಯೋಜನೆ

ಏರ್‌ಟೆಲ್‌ ಟೆಲಿಕಾಂನ 698ರೂ ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್‌ನಲ್ಲಿ ಫ್ರಿ ಹೆಲೊ ಟ್ಯೂನ್‌, Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ. ಫಾಸ್ಟ್‌ಟ್ಯಾಗ್‌ನಲ್ಲಿ 100ರೂ. ಕ್ಯಾಶ್‌ ಬ್ಯಾಕ್‌ ದೊರೆಯಲಿದೆ.

ಏರ್‌ಟೆಲ್‌ 598ರೂ. ಪ್ರೀಪೇಡ್‌ ಯೋಜನೆ

ಏರ್‌ಟೆಲ್‌ 598ರೂ. ಪ್ರೀಪೇಡ್‌ ಯೋಜನೆ

ಏರ್‌ಟೆಲ್‌ ಟೆಲಿಕಾಂನ 598ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ ಹಾಗೂ ರೋಮಿಂಗ್ ಕರೆಗಳ ಸೌಲಭ್ಯ ಸಹ ಸಿಗಲಿದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಿದ್ದು, ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನಗಳು ದೊರೆಯಲಿದೆ. ಜೊತೆಗೆ ಈ ಪ್ಲ್ಯಾನ್‌ನಲ್ಲಿ ಫ್ರಿ ಹೆಲೊ ಟ್ಯೂನ್‌, Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ. ಫಾಸ್ಟ್‌ಟ್ಯಾಗ್‌ನಲ್ಲಿ 100ರೂ. ಕ್ಯಾಶ್‌ ಬ್ಯಾಕ್‌ ದೊರೆಯಲಿದೆ.

ಏರ್‌ಟೆಲ್‌ 379ರೂ. ಪ್ರಿಪೇಯ್ಡ್ ಯೋಜನೆ

ಏರ್‌ಟೆಲ್‌ 379ರೂ. ಪ್ರಿಪೇಯ್ಡ್ ಯೋಜನೆ

ಏರ್‌ಟೆಲ್‌ನ ಟೆಲಿಕಾಂನ ಈ 379ರೂ. ಪ್ರಿಪೇಯ್ಡ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಇದು ಸಹ ಡೇಟಾ ಮತ್ತು ಕರೆ ಪ್ರಯೋಜನಗಳನ್ನು ಪಡೆದಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 6GB ಡೇಟಾ ಸೌಲಭ್ಯವನ್ನು ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ಕರೆಗಳ ಸೌಲಭ್ಯ ಸಹ ಪಡೆದಿದೆ. ಜೊತೆಗೆ ಈ ಪ್ಲ್ಯಾನ್‌ನಲ್ಲಿ ಫ್ರಿ ಹೆಲೊ ಟ್ಯೂನ್‌, Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್ ಹಾಗೂ ಜೀ 5 ಸೌಲಭ್ಯಗಳು ಸಿಗುತ್ತವೆ. ಫಾಸ್ಟ್‌ಟ್ಯಾಗ್‌ನಲ್ಲಿ 100ರೂ. ಕ್ಯಾಶ್‌ ಬ್ಯಾಕ್‌ ದೊರೆಯಲಿದೆ.

Best Mobiles in India

English summary
Airtel Subscribers: These Plans Offers 84 Days Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+