ಏರ್‌ಟೆಲ್‌ನ ಈ ಪ್ಲ್ಯಾನ್ ನಿಜಕ್ಕೂ ದುಬಾರಿ!..ಆದ್ರೆ ಸಿಗುತ್ತೆ ಜಬರ್ದಸ್ತ್ ಡೇಟಾ!

|

ದೇಶದ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಏರ್‌ಟೆಲ್‌ (Airtel), ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅದೇ ಹಾದಿಯಲ್ಲಿ ಮುಂದೆ ಸಾಗಿರುವ ಏರ್‌ಟೆಲ್‌ ಇದೀಗ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಏರ್‌ಟೆಲ್‌ 3,359ರೂ. ಪ್ರೀಪೇಯ್ಡ್ ಪ್ಲ್ಯಾನ್ ದುಬಾರಿ ಪ್ರೈಸ್‌ ಟ್ಯಾಗ್‌ ಅನಿಸಿದರೂ, ಆಕರ್ಷಕ ಪ್ರಯೋಜನಗಳನ್ನು ಪಡೆದಿದೆ.

ಏರ್‌ಟೆಲ್‌

ಹೌದು, ಏರ್‌ಟೆಲ್‌ ಟೆಲಿಕಾಂನ 3,359ರೂ. ಪ್ರೀಪೇಯ್ಡ್‌ ಯೋಜನೆ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಏರ್‌ಟೆಲ್‌ ಆಪ್ಸ್‌ ಸೇವೆಗಳು ಹಾಗೂ ಹೆಚ್ಚುವರಿ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಏರ್‌ಟೆಲ್‌ (Airtel) ಟೆಲಿಕಾಂನ 3,359ರೂ. ವಾರ್ಷಿಕ ಪ್ರೀಪೇಯ್ಡ್‌ ಯೋಜನೆ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಹಾಗೂ ಇತರೆ ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 3359ರೂ

ಇನ್ನು ಏರ್‌ಟೆಲ್‌ನ 3359ರೂ. ಯೋಜನೆಯಲ್ಲಿ ಈ ಹೆಚ್ಚುವರಿ ಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ. ಅಂದಹಾಗೆ ಈ ಯೋಜನೆಯಲ್ಲಿ ಒಟ್ಟಾರೇ 912.5GB ಡೇಟಾ ಪ್ರಯೋಜನ ದೊರೆಯಲಿದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 838ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 838ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 838ರೂ. ಪ್ರೀಪೇಡ್‌ ಪ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ ಜನಪ್ರಿಯ ಪ್ರೀಪೇಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

Best Mobiles in India

English summary
Airtel Telecoms this costly plan offers Big Data and 365 Days Validity.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X