Home
ಸುದ್ದಿಜಾಲ

ಏರ್‌ಟೆಲ್‌ನ ಈ ಹೊಸ ಪ್ಲ್ಯಾನ್‌ಗಳಲ್ಲಿ ಡೇಟಾ ಜೊತೆಗೆ ಹಾಟ್‌ಸ್ಟಾರ್‌ ಸದಸ್ಯತ್ವ!

ದೇಶದ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗೆ ಅಧಿಕ ಡೇಟಾ, ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ನೀಡಿ ಗ್ರಾಹಕರನ್ನು ಖುಷಿ ಪಡಿಸಿವೆ. ಇದರೊಂದಿಗೆ ಜೊತೆಗೆ ಆಯ್ದ ಪ್ಲ್ಯಾನ್‌ಗಳಿಗೆ ಹೆಚ್ಚುವರಿಯಾಗಿ OTT ಸೇವಗಳ ಪ್ರಯೋಜನ ಘೋಷಿಸಿವೆ. ಈ ಪೈಕಿ ಏರ್‌ಟೆಲ್‌ ಟೆಲಿಕಾಂ ತನ್ನ 401ರೂ. ಪ್ಲ್ಯಾನ್‌ನೊಂದಿಗೆ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ತಿಳಿಸಿದೆ. ಅದರ ಬೆನ್ನಲೇ ಇದೀಗ ಮತ್ತೆ ಎರಡು ಹೊಸ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಿಗೆ ಭರ್ಜರಿ ಕೊಡುಗೆ ಘೋಷಿಸಿದೆ.

ಏರ್‌ಟೆಲ್‌

ಹೌದು, ಏರ್‌ಟೆಲ್‌ ಟೆಲಿಕಾಂ 401ರೂ. ಪ್ಲ್ಯಾನ್‌ನಲ್ಲಿ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಕೊಡುಗೆ ನೀಡಿದೆ. ಈಗ ಈ ಸೇವೆಯನ್ನು ಮತ್ತೆ ಎರಡು ಹೊಸ ಪ್ಲ್ಯಾನ್‌ಗಳಿಗೆ ವಿಸ್ತರಿಸಿದೆ. ಏರ್‌ಟೆಲ್‌ 448ರೂ. ಮತ್ತು ಏರ್‌ಟೆಲ್‌ 599ರೂ. ಹೊಸ ಪ್ರೀಪೇಯ್ಡ್‌ ಯೋಜನೆಗಳಲ್ಲಿ ಈಗ ಹೆಚ್ಚುರಿಯಾಗಿ ಜನಪ್ರಿಯ OTT ತಾಣ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಪ್ರಯೋಜನ ಸೇರ್ಪಡೆ ಆಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿರಿ.

ಏರ್‌ಟೆಲ್‌ 448ರೂ. ಪ್ಲ್ಯಾನ್‌

ಏರ್‌ಟೆಲ್‌ 448ರೂ. ಪ್ಲ್ಯಾನ್‌

ಏರ್‌ಟೆಲ್‌ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್‌ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್‌ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಏರ್‌ಟೆಲ್‌ 599 ರೂ. ಪ್ಲ್ಯಾನ್‌

ಏರ್‌ಟೆಲ್‌ 599 ರೂ. ಪ್ಲ್ಯಾನ್‌

ಏರ್‌ಟೆಲ್‌ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕ್‌ ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಪ್ರತಿದಿನ 100ಎಸ್‌ಎಮ್‌ಎಸ್‌ ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.

ಏರ್‌ಟೆಲ್‌ 401ರೂ. ಪ್ಲ್ಯಾನ್‌

ಏರ್‌ಟೆಲ್‌ 401ರೂ. ಪ್ಲ್ಯಾನ್‌

ಏರ್‌ಟೆಲ್‌ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಯಾವುದೇ ಉಚಿತ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಿರುವುದಿಲ್ಲ.

Best Mobiles in India

English summary
Airtel new prepaid plans- Rs 448 and Rs 599 with bundled Disney+ Hotstar VIP subscription.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+