Home
ಸುದ್ದಿಜಾಲ

ಈ ಪ್ಲ್ಯಾನ್‌ಗಳಲ್ಲಿ ಸಿಗುತ್ತೆ ದೈನಂದಿನ ಡೇಟಾ ಜೊತೆಗೆ ಭರ್ಜರಿ ವ್ಯಾಲಿಡಿಟಿ!

ರಿಲಯನ್ಸ್‌ ಜಿಯೋ, ವೊಡಾಫೋನ್ (ವಿ ಟೆಲಿಕಾಂ) ಮತ್ತು ಏರ್‌ಟೆಲ್‌ ಟೆಲಿಕಾಂಗಳು ಹಲವು ಆಕರ್ಷಕ ಪ್ರಿಪೇಯ್ಡ್‌ ಯೋಜನೆಗಳ ಆಯ್ಕೆ ನೀಡಿವೆ. ಅವುಗಳಲ್ಲಿ ದೀರ್ಘಾವಧಿ ವ್ಯಾಲಿಡಿಟಿಯ ಯೋಜನೆಗಳು ಇವೆ. ಅಧಿಕ ದೈನಂದಿನ ಡೇಟಾ ಪ್ರಯೋಜನದ ಪ್ಲ್ಯಾನ್‌ಗಳು ಇವೆ. ಆದರೆ ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ಆಕರ್ಷಕ ದೈನಂದಿನ ಡೇಟಾ ಸೌಲಭ್ಯವನ್ನು ಒಳಗೊಂಡ ಪ್ರಿಪೇಯ್ಡ್‌ ಯೋಜನಗಳು ಗ್ರಾಹಕರನ್ನು ಹೆಚ್ಚು ಸೆಳೆಯುತ್ತವೆ.

ಬಹುತೇಕ

ಹೌದು, ಜಿಯೋ, ವೊಡಾಫೋನ್ (ವಿ ಟೆಲಿಕಾಂ) ಮತ್ತು ಏರ್‌ಟೆಲ್‌ ಟೆಲಿಕಾಂಗಳು ವಾರ್ಷಿಕ ದೀರ್ಘಾವಧಿಯ ವ್ಯಾಲಿಡಿಟಿ ಕೆಲವು ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆಯನ್ನು ಹೊಂದಿವೆ. ಆ ಪೈಕಿ ಬಹುತೇಕ ಎಲ್ಲ ಯೋಜನೆಗಳು ದೈನಂದಿನ ಡೇಟಾ ಪಡೆದಿವೆ. ಅದಾಗ್ಯೂ, ಕೆಲವು ಪ್ಲ್ಯಾನ್ ಅಧಿಕ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನು ಕೆಲವು ನಿಗದತ ಡೇಟಾ ಸೌಲಭ್ಯ ಪಡೆದಿವೆ. ಹಾಗೆಯೇ ಎಸ್‌ಎಮ್‌ಎಸ್‌, ವಾಯಿಸ್‌ ಕರೆ ಸೇರಿದಂತೆ ಕೆಲವು ಯೋಜನೆಗಳು ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಜಿಯೋ, ವಿ ಟೆಲಿಕಾಂ ಹಾಗೂ ಏರ್‌ಟೆಲ್‌ ಟೆಲಿಕಾಂಗಳ ವಾರ್ಷಿಕ ದೀರ್ಘಾವಧಿಯ ವ್ಯಾಲಿಡಿಟಿ ಜೊತೆಗೆ ಡೈಲಿ 1.5GB ಡೇಟಾ ಪ್ರಯೋಜನದ ಯೋಜನಗಳೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ.

ಏರ್‌ಟೆಲ್‌ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

Best Mobiles in India

English summary
Airtel, Vi and Jio: These Plans Offers Daily Data With Big Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+