365 ದಿನಗಳ ಮಾನ್ಯತೆ ನೀಡುವ ಅತ್ಯುತ್ತಮ ಪ್ರಿಪೇಯ್ಡ್ ಪ್ಲಾನ್‌ಗಳು!
ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳು ಮುಂಚೂಣಿಯಲ್ಲಿ ಗುರುತಿಸಿಕೊಂಡಿವೆ. ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ, ಅನಿಯಮಿತ ಕರೆ ಪ್ರಯೋಜನ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ. ಇದರ ನಡುವೆ ಟೆಲಿಕಾಂ ಕಂಪೆನಿಗಳು ಪರಿಚಯಿಸಿರುವ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್‌ಗಳು ಕೂಡ ಇಂದಿನ ದಿನಗಳಲ್ಲಿ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಇನ್ನು ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂ ಕಂಪೆನಿಗಳು ಪರಿಚಯಿಸಿರುವ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್‌ಗಳು 1000ರೂ. ಮತ್ತು 3000ರೂ.ಗಳ ನಡುವಿನ ಬೆಲೆಯನ್ನು ಪಡೆದುಕೊಂಡಿದೆ. ಅದರಲ್ಲೂ 3000ರೂ. ಕ್ಕಿಂತ ಹೆಚ್ಚು ಬೆಲೆಯ ಯೋಜನೆಗಳು ದುಬಾರಿ ವಾರ್ಷಿಕ ಯೋಜನೆಗಳಾಗಿದ್ದು, 365 ದಿನಗಳ ಮಾನ್ಯತೆಯನ್ನು ನೀಡಲಿವೆ.

ಹೌದು, ಖಾಸಗಿ ಟೆಲಿಕಾಂಗಳು ಪರಿಚಯಿಸಿರುವ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್‌ಗಳು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿವೆ. ತಿಂಗಳಿಗೆ, ಮೂರು ತಿಂಗಳಿಗೊಮ್ಮೆ ರೀಚಾರ್ಜ್ ಮಾಡುವ ಬದಲು ವಾರ್ಷಿಕ ಪ್ಲಾನ್‌ಗಳು ಒಂದು ವರ್ಷದವರೆಗಿನ ಮಾನ್ಯತೆಯನ್ನು ನೀಡಲಿವೆ. ಇದರಿಂದ ಬಳಕೆದಾರರಿಗೆ ಒಂದು ವರ್ಷದವರೆಗೆ ರೀಚಾರ್ಜ್ ಮಾಡುವ ಅವಶ್ಯಕತೆ ಬರುವುದಿಲ್ಲ. ಇದಲ್ಲದೆ ಈ ಯೋಜನೆಗಳಲ್ಲಿ ಡೇಟಾ ಮತ್ತು ಸ್ಟ್ರೀಮಿಂಗ್ ಪ್ರಯೋಜನಗಳನ್ನು ಸಹ ಒಂದು ವರ್ಷದವರೆಗೆ ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ 3000ರೂ.ಗಿಂತ ಹೆಚ್ಚಿನ ಬೆಲೆ ಪಡೆದುಕೊಂಡಿರುವ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏರ್‌ಟೆಲ್ 3,359ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂನ 3,359ರೂ. ಬೆಲೆಯ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್ 365 ದಿನಗಳ ಮಾನ್ಯತೆಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಅನಿಯಮಿತ ಕರೆಗಳು, ದಿನಕ್ಕೆ 100 SMS ಜೊತೆಗೆ ದೈನಂದಿನ 2GB ಡೇಟಾವನ್ನು ನೀಡುತ್ತದೆ. ಇದಲ್ಲದೆ ಈ ಯೋಜನೆಯಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಪ್ರಯೋಜನ, ಅಮೆಜಾನ್ ಪ್ರೈಮ್ ವೀಡಿಯೊ ಮೊಬೈಲ್ ಪ್ರಯೋಜನ, ಅಪೊಲೊ 24X7 ವಲಯ, ಉಚಿತ ಆನ್‌ಲೈನ್ ಕೋರ್ಸ್, ಫಾಸ್ಟ್ಯಾಗ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್, ಉಚಿತ ಹೆಲೋಟ್ಯೂನ್‌ಗಳು ಮತ್ತು ಉಚಿತ ವಿಂಕ್‌ಮ್ಯೂಸಿಕ್ ಪ್ರಯೋಜನ ದೊರೆಯಲಿದೆ.

ಜಿಯೋ 3,119ರೂ. ಪ್ರಿಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂ 3,119ರೂ. ಪ್ರಿಪೇಯ್ಡ್ ಪ್ಲಾನ್ ಕೂಡ 365 ದಿನಗಳ ಮಾನ್ಯತೆ ನೀಡಲಿದೆ. ಈ ಅವದಿಯಲ್ಲಿ ಪ್ರತಿನಿತ್ಯ 100 SMS, ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಕರೆ ಪ್ರಯೋಜನ ನೀಡಲಿದೆ. ಜೊತೆಗೆ ದೈನಂದಿನ 2GB ಡೇಟಾಗೆ ಪ್ರವೇಶವನ್ನು ನೀಡುತ್ತದೆ. ಈ ಯೋಜನೆಯಲ್ಲಿ 10GB ಹೆಚ್ಚುವರಿ ಡೇಟಾವನ್ನು ಕೂಡ ಲಭ್ಯವಿದೆ. ಇನ್ನು ಈ ಪ್ಲಾನ್ ನಿಮಗೆ ಒಂದು ವರ್ಷದ ಡಿಸ್ನಿ + ಹಾಟ್‌ಸ್ಟಾರ್‌ಗೆ ಪ್ರವೇಶವನ್ನು ನೀಡುತ್ತದೆ. ಅಲ್ಲದೆ ಜಿಯೋ ಅಪ್ಲಿಕೇಶನ್‌ಗಳಿಗೆ ಪೂರಕ ಪ್ರವೇಶವನ್ನು ನೀಡುತ್ತದೆ.

ವಿ ಟೆಲಿಕಾಂ 3,099ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂ 3,099ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್ 365 ದಿನಗಳ ಮಾನ್ಯತೆ ಪಡೆದಿದೆ. ಈ ಸಮಯದಲ್ಲಿ ಪ್ರತಿನಿತ್ಯ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಕರೆಗಳು ಮತ್ತು ದಿನಕ್ಕೆ 100SMS ಪ್ರಯೋಜನ ನೀಡಲಿದೆ. ಜೊತೆಗೆ ದೈನಂದಿನ 1.5GB ಡೇಟಾ ಪ್ರಯೋಜನ ಕೂಡ ಸಿಗಲಿದೆ. ಇದಲ್ಲದೆ ಈ ಪ್ಲಾನ್ ರಾತ್ರಿಯಿಡೀ ಬಿಂಜ್‌ಗೆ ಪ್ರವೇಶವನ್ನು ನೀಡುತ್ತದೆ. ಇದರಲ್ಲಿ ವಾರಾಂತ್ಯದ ಡೇಟಾ ರೋಲ್‌ಓವರ್ ಪ್ರಯೋಜನ, ವಿ ಚಲನಚಿತ್ರಗಳು ಮತ್ತು ಟಿವಿಗೆ ಪ್ರವೇಶ ಕೂಡ ಸಿಗಲಿದೆ. ಇದರೊಂದಿಗೆ ಡೇಟಾ ಡಿಲೈಟ್‌ಗಳೊಂದಿಗೆ ಪ್ರತಿ ತಿಂಗಳು 2GB ವರೆಗಿನ ಬ್ಯಾಕಪ್ ಡೇಟಾವನ್ನು ನೀಡುತ್ತದೆ. ಇದಲ್ಲದೆ ಖಾಸಗಿನ ಟೆಲಿಕಾಂಗಳು ಪರಿಚಯಿಸಿರುವ ಇತರೆ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್‌ಗಳ ಬಗ್ಗೆ ಕೆಳಗಿನ ಹಂತಗಳಲ್ಲಿ ತಿಳಿಯಿರಿ.

ಜಿಯೋದ 2879ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂ 2899ರೂ. ಪ್ರೀಪೇಯ್ಡ್ ಪ್ಲಾನ್
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.
ವಿ ಟೆಲಿಕಾಂ 1799ರೂ. ಪ್ರೀಪೇಯ್ಡ್ ಪ್ಲಾನ್
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಈ ಪ್ಲಾನ್ ಒಟ್ಟು 24 GB ಡೇಟಾ ಪ್ರಯೋಜನ ನೀಡಲಿದೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್
ವಿ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.
ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.


Click it and Unblock the Notifications








