Airtel vs Jio vs Vi: ದೀರ್ಘಾವಧಿ ವ್ಯಾಲಿಡಿಟಿ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳು!

|

ದೇಶದ ಟೆಲಿಕಾಂ ವಲಯದಲ್ಲಿ ಪ್ರಮುಖ ಮೂರು ಖಾಸಗಿ ಟೆಲಿಕಾಂಗಳು ಕೂಡ ತಮ್ಮ ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳವನ್ನು ಮಾಡಿವೆ. ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳದ ನಂತರ ಬಳಕೆದಾರರಿ ಜೀಬಿಗೆ ಕತ್ತರಿ ಬಿದ್ದಿದೆ. ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳವಾಗಿದೆ ಆದರೆ ಪ್ಲಾನ್‌ಗಳ ಪ್ರಯೋಜನಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಇದೇ ಕಾರಣಕ್ಕೆ ಪ್ರಿಪೇಯ್ಡ್ ಯೋಜನೆಗಳೊಂದಿಗೆ ಬಂದ ಸ್ಟ್ರೀಮಿಂಗ್ ಪ್ರಯೋಜನಗಳನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಜೊತೆಗೆ ದೈನಂದಿನ 3GB ಡೇಟಾ ನೀಡುವ ವಾರ್ಷಿಕ ಪ್ಲಾನ್‌ಗಳನ್ನು ಸಹ ಹೆಚ್ಚಿಸಲಾಗಿದೆ.

ಟೆಲಿಕಾಂ

ಹೌದು, ಟೆಲಿಕಾಂ ಕಂಪೆನಿಗಳು ಪ್ರಿಪೆಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳ ಮಾಡಿದ ನಂತರ ಪ್ಲಾನ್‌ಗಳ ಆಯ್ಕೆಯಲ್ಲಿಸಾಕಷ್ಟು ಬದಲಾವಣೆ ಆಗಿದೆ. ಅದರಲ್ಲೂ ಮೂರು ಖಾಸಗಿ ಟೆಲಿಕಾಂ ಆಪರೇಟರ್‌ಗಳಲ್ಲಿ ಜಿಯೋ ಅತ್ಯಂತ ದುಬಾರಿ ವಾರ್ಷಿಕ ಪ್ರಿಪೇಯ್ಡ್ ಯೋಜನೆಯನ್ನು ಹೊಂದಿದೆ. ಇದರ ಬೆಲೆ 4199ರೂ. ಆಗಿದ್ದು, ದೈನಂದಿನ 3GB ಡೇಟಾ ಪ್ರಯೋಜನ ನೀಡಲಿದೆ. ಹಾಗಾದ್ರೆ ದೀರ್ಘಾವಧಿ ಮಾನ್ಯತೆ ಹೊಂದಿರುವ ಪ್ಲಾನ್‌ಗಳಲ್ಲಿ ನಿಮಗೆ ಯಾವುದು ಸೂಕ್ತ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋದ 3119ರೂ. ಪ್ರಿಪೇಯ್ಡ್ ಪ್ಲಾನ್‌

ಜಿಯೋದ 3119ರೂ. ಪ್ರಿಪೇಯ್ಡ್ ಪ್ಲಾನ್‌

ಜಿಯೋದ ಈ ಪ್ಲಾನ್‌ ವಾರ್ಷಿಕ ಯೋಜನೆಯಾಗಿದ್ದು, 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಪ್ಲಾನ್‌ನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗಲಿದೆ. ಜಿಯೋ ಸೇರಿದಂತೆ ಇತರೆ ನೆಟ್‌ವರ್ಕ್‌ಗಳಿಗೆ ಅನಿಯಮಿತ ಫ್ರೀ ವಾಯಿಸ್‌ ಕಾಲ್‌ ಪ್ರಯೋಜನ ದೊರೆಯಲಿದೆ. ಪ್ರತಿದಿನ 100 SMS ಮತ್ತು Jio ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ನೀಡುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್
ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 1.5GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಅಲ್ಲದೆ ಈ ಯೋಜನೆಯು JioTV, JioCinema, Jio ಭದ್ರತೆ ಮತ್ತು Jio ಕ್ಲೌಡ್ ಅನ್ನು ಒಳಗೊಂಡಿರುವ Jio ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ಒಳಗೊಂಡಿವೆ.

ಏರ್‌ಟೆಲ್ 1799ರೂ. ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್ 1799ರೂ. ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್‌ ಟೆಲಿಕಾಂನ ಈ ಪ್ಲಾನ್‌ ದೈನಂದಿನ 24GB ಡೇಟಾ ಪ್ರಯೋಜನವನ್ನು ಹೊಂದಿದೆ. ಇದು ಅನಿಯಮಿತ ಕರೆ ಪ್ರಯೋಜನ ಮತ್ತು ಪ್ರತಿದಿನ 100 SMS ಪ್ರಯೋಜನ ನೀಡಲಿದೆ. ಪ್ರೈಮ್‌ ವೀಡಿಯೊ ಮೊಬೈಲ್ ಆವೃತ್ತಿ, ಅಪೊಲೊ 24/7 ಗೆ ಪ್ರವೇಶವನ್ನು ನೀಡುತ್ತವೆ. ಉಚಿತ ಆನ್‌ಲೈನ್ ಕೋರ್ಸ್‌ಗಳು, ಫಾಸ್ಟ್ಯಾಗ್‌ನಲ್ಲಿ ಕ್ಯಾಶ್‌ಬ್ಯಾಕ್, ಉಚಿತ ಹೆಲೋಟ್ಯೂನ್ಸ್, ವಿಂಕ್‌ಮ್ಯೂಸಿಕ್ ಯೋಜನೆಗಳು ಹಾಗೂ ಅಮೆಜಾನ್ ಪ್ರೈಮ್ ವೀಡಿಯೊ ಮೊಬೈಲ್ ಆವೃತ್ತಿಗೆ ಪ್ರವೇಶವನ್ನು ನೀಡಲಿವೆ.

ಏರ್‌ಟೆಲ್‌ 2999ರೂ ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್‌ 2999ರೂ ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್‌ ಈ ಪ್ಲಾನ್‌ ದೈನಂದಿನ 2GB ಡೇಟಾವನ್ನು ನೀಡಲಿದೆ. ಈ ಯೋಜನೆ ಅನಿಯಮಿತ ಕರೆ ಪ್ರಯೋಜನ ನೀಡಲಿದೆ. ಜೊತೆಗೆ ಪ್ರಧಾನ ವೀಡಿಯೊ ಮೊಬೈಲ್ ಆವೃತ್ತಿ, ಅಪೊಲೊ 24 | 7 ಪ್ರವೇಶ ನೀಡಲಿದೆ. ಉಚಿತ ಆನ್‌ಲೈನ್ ಕೋರ್ಸ್‌ಗಳು, ಫಾಸ್ಟ್ಯಾಗ್‌ನಲ್ಲಿ ಕ್ಯಾಶ್‌ಬ್ಯಾಕ್, ಉಚಿತ ಹೆಲೋಟ್ಯೂನ್ಸ್, ವಿಂಕ್‌ಮ್ಯೂಸಿಕ್. ಯೋಜನೆಗಳು ಅಮೆಜಾನ್ ಪ್ರೈಮ್ ವೀಡಿಯೊ ಮೊಬೈಲ್ ಆವೃತ್ತಿಗೆ ಪ್ರವೇಶದೊಂದಿಗೆ ಬರುತ್ತವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲ್ಯಾನ್‌

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂ 1799ರೂ.ಪ್ರೀಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 1799ರೂ.ಪ್ರೀಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೂ ಒಟ್ಟು 3600 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗುತ್ತದೆ. ಇನ್ನು ಹೆಚ್ಚುವರಿಯಾಗಿ ವಿ ಟೆಲಿಕಾಂ ಆಪ್‌ ಸೇವೆ ಲಭ್ಯ. ಹೆಚ್ಚಿನ ಡೇಟಾ ಅಗತ್ಯ ಇರದ ಆದರೆ ವಾರ್ಷಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆ ಸೂಕ್ತ ಎನಿಸಲಿದೆ.

ಏರ್‌ಟೆಲ್‌

ವಾರ್ಷಿಕ ಯೋಜನೆಗಳು ಮಾತ್ರವಲ್ಲದೆ ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳ ಇನ್ನು ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳು ಸಾಕಷ್ಟು ಗಮನ ಸೆಳೆದಿವೆ. ಇದರಲ್ಲಿ ಏರ್‌ಟೆಲ್ ಟೆಲಿಕಾಂನ 479ರೂ. ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಕೂಡ ಲಭ್ಯವಾಗಲಿದೆ.

ವಿ ಟೆಲಿಕಾಂ

ಇನ್ನು ವಿ ಟೆಲಿಕಾಂ 479ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಪ್ರತಿದಿನ 1.5GB ಡೇಟಾ ಪ್ರಯೋಜನ ನೀಡಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ಜಿಯೋ

ಇದಲ್ಲದೆ ಜಿಯೋದ 479ರೂ. ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ಮಾನ್ಯತೆಯನ್ನು ಪಡೆದಿದೆ. ಈ ಪ್ಲಾನ್‌ನಲ್ಲಿ ದೈನಂದಿನ 1.5GB ಡೇಟಾ, ಅನಿಯಮಿತ ಕರ, ಪ್ರಯೋಜನ ಸಿಗಲಿದೆ. ಜೊತೆಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

Best Mobiles in India

Read more about:
English summary
Airtel vs Jio vs Vi new annual prepaid plans with 365 days validity.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X