Home
ಸುದ್ದಿಜಾಲ

ಈ ಒಂದು ಪ್ಲ್ಯಾನ್‌ ಸಾಕು!..ಮೂರು ತಿಂಗಳು ಮತ್ತೆ ರೀಚಾರ್ಜ್‌ ಅಗತ್ಯ ಇಲ್ಲ!

ಭಾರತೀಯ ಟೆಲಿಕಾಂ ವಲಯದಲ್ಲಿ ಏರ್‌ಟೆಲ್‌, ಜಿಯೋ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಆಕರ್ಷಿಸಿದೆ. ಈ ಮೂರು ಟೆಲಿಕಾಂ ಸಂಸ್ಥೆಗಳು ಅಧಿಕ ದೈನಂದಿನ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳ ಆಯ್ಕೆ ಕೂಡಾ ಪರಿಚಯಿಸಿವೆ. ಆ ಪೈಕಿ ಒಮ್ಮೆ ರೀಚಾರ್ಜ್ ಮಾಡಿದ್ರೆ, ಹೆಚ್ಚು ಕಡಿಮೆ ಮೂರು ತಿಂಗಳು ವ್ಯಾಲಿಡಿಟಿ ಬರುವ ಪ್ಲ್ಯಾನ್ ಇವೆ.

ಹೌದು, ಏರ್‌ಟೆಲ್‌, ಜಿಯೋ ಹಾಗೂ ವಿ ಟೆಲಿಕಾಂ ಕಂಪನಿಗಳು ಭಿನ್ನ ಪ್ರೈಸ್‌ಟ್ಯಾಗ್‌ನ ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆ ಒಳಗೊಂಡಿವೆ. ಅವುಗಳಲ್ಲಿ ಸುಮಾರು 90 ದಿನಗಳ ವರೆಗೆ ಮಾನ್ಯವಾಗಿರುವ ಕೆಲವು ಪ್ಲ್ಯಾನ್‌ಗಳು ಇದ್ದು, ಅವಿಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್‌, ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಪಡೆದುಕೊಂಡಿವೆ. ಹಾಗಾದರೆ ಸುಮಾರು ಮೂರು ತಿಂಗಳು ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಒಂದು ಪ್ಲ್ಯಾನ್‌ ಸಾಕು!..ಮೂರು ತಿಂಗಳು ಮತ್ತೆ ರೀಚಾರ್ಜ್‌ ಅಗತ್ಯ ಇಲ್ಲ!

ಜಿಯೋ ಟೆಲಿಕಾಂನ 749ರೂ. ಪ್ಲಾನ್ ಮಾಹಿತಿ

ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಪಡೆದುಕೊಂಡಿದ್ದು, ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಒದಗಿಸುತ್ತದೆ. ಅಲ್ಲದೇ ಇದು ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ನೀಡಲಿದ್ದು, ಇದರೊಂದಿಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ನೀಡುತ್ತದೆ. ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 180 GB ಡೇಟಾ ಲಭ್ಯ ಮಾಡುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಕೂಡಾ ದೊರೆಯುತ್ತದೆ.

ಏರ್‌ಟೆಲ್‌ನ 779ರೂ. ಪ್ರೀಪೇಯ್ಡ್‌ ಪ್ಲಾನ್ ಮಾಹಿತಿ

ಏರ್‌ಟೆಲ್‌ ಟೆಲಿಕಾಂನ 779ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಒಳಗೊಂಡಿದ್ದು, ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 135 GB ಡೇಟಾ ಲಭ್ಯ.

ವಿ ಟೆಲಿಕಾಂನ 902ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಮಾಹಿತಿ

ವಿ ಸಂಸ್ಥೆಯ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದ್ದು, ಅದರೊಂದಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಹೆಚ್ಚುವರಿಯಾಗಿ ಮೂರು ತಿಂಗಳ ಸನ್‌ನೆಕ್ಸ್ಟ್‌ ಓಟಿಟಿ ಚಂದಾದಾರಿಕೆ ಪ್ರಯೋಜನ ನೀಡುತ್ತದೆ ಹಾಗೂ ವಿ ಆಪ್ಸ್‌ಗಳ ಸೇವೆ ಪಡೆದಿದೆ.

ವಿ ಟೆಲಿಕಾಂನ 903ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಮಾಹಿತಿ

ವಿ ಸಂಸ್ಥೆಯ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಪ್ರಯೋಜನ ಹೊಂದಿದ್ದು, ಅದರೊಂದಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಹೆಚ್ಚುವರಿಯಾಗಿ ಸೋನಿ ಲೈವ್‌ ಚಂದಾದಾರಿಕೆ ಪ್ರಯೋಜನ ದೊರೆಯುತ್ತದೆ ಹಾಗೂ ವಿ ಆಪ್ಸ್‌ಗಳ ಸೇವೆ ಪಡೆದಿದೆ.

Best Mobiles in India

English summary
Airtel vs Jio vs Vi prepaid plans with 90 days validity under rs 1000. details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+