Airtel vs Jio vs Vi: 700ರೂ. ಒಳಗಿನ ಬೆಸ್ಟ್‌ ಪ್ರಿಪೇಯ್ಡ್‌ ಪ್ಲಾನ್‌ಗಳು!

|

ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳು ಮುಂಚೂಣಿಯಲ್ಲಿ ಗುರುತಿಸಿಕೊಂಡಿವೆ. ಸದ್ಯ ಅಗ್ರ ಟೆಲಿಕಾಂ ಆಪರೇಟರ್‌ಗಳಾದ ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳು ಇತ್ತೀಚೆಗೆ ತಮ್ಮ ಪ್ರಿಪೇಯ್ಡ್ ಯೋಜನೆಗಳ ಬೆಲೆಯನ್ನು ಹೆಚ್ಚಳ ಮಾಡಿವೆ. ಇದರಿಂದ ಬಳಕೆದಾರರು ತಮ್ಮ ಆಯ್ಕೆಯ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಬದಲಾಯಿಸಿದ್ದಾರೆ. ಅದರಲ್ಲೂ ಹೆಚ್ಚಿನ ವ್ಯಾಲಿಡಿಟಿಯ ಪ್ಲಾನ್‌ಗಳು ಬೇಕೆಂದರೆ 300ರೂ.ಕ್ಕಿಂತ ಹೆಚ್ಚಿನ ಬೆಲೆಯ ಪ್ಲಾನ್‌ಗಳನ್ನು ಆಯ್ಕೆ ಮಾಡಬೇಕಾಗುತ್ತದೆ.

ಏರ್‌ಟೆಲ್‌

ಹೌದು, ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳು ತಮ್ಮ ಪ್ರಿಪೇಯ್ಡ್‌ ಪ್ಲಾನ್‌ಗಳ ಬೆಲೆ ಹೆಚ್ಚಳ ಮಾಡಿದ ನಂತರ ಅನೆಕ ಬದಲಾವಣೆಗಳು ನಡೆದಿವೆ. ಇದೇ ಕಾರಣಕ್ಕೆ ಹೆಚ್ಚು ವ್ಯಾಲಿಡಿಟಿ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇವುಗಳಲ್ಲಿ ದೈನಂದಿನ 1.5GB ಮತ್ತು 2GB ಡೇಟಾ ಪ್ರಯೋಜನ ನೀಡುವ ಪ್ಲಾನ್‌ಗಳು ಕೂಡ ಸೇರಿವೆ. ಹಾಗಾದ್ರೆ ನಿಮಗೆ ಹೆಚ್ಚಿನ ವ್ಯಾಲಿಡಿಟಿ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏರ್‌ಟೆಲ್‌

ಏರ್‌ಟೆಲ್‌

ಏರ್‌ಟೆಲ್‌ ಟೆಲಿಕಾಂನ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್
ಏರ್‌ಟೆಲ್‌ ಟೆಲಿಕಾಂನ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ದೈನಂದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ 549ರೂ. ಪ್ರಿಪೇಯ್ಡ್‌ ಪ್ಲ್ಯಾನ್
ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ಜಿಯೋ

ಜಿಯೋ 395ರೂ. ಪ್ರಿಪೇಯ್ಡ್ ಪ್ಲಾನ್‌
ಜಿಯೋ ಟೆಲಿಕಾಂನ ಈ ಪ್ರಿಪೇಯ್ಡ್‌ ಪ್ಲ್ಯಾನಿನಲ್ಲಿ ಒಟ್ಟು 6 GB ಡೇಟಾ ಪ್ರಯೋಜನ ಲಭ್ಯವಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಸಹ ಸಂಪೂರ್ಣ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯವನ್ನು ಪಡೆದಿದೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋ 533ರೂ. ಪ್ರಿಪೇಯ್ಡ್ ಪ್ಲ್ಯಾನ್
ಜಿಯೋ ಟೆಲಿಕಾಂನ ಈ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗುತ್ತದೆ. (ಒಟ್ಟು ಡೇಟಾ 112 GB). ಹಾಗೆಯೇ ಜಿಯೋ ದಿಂದ ಜಿಯೋ ನೆಟವರ್ಕ ಕರೆಗಳು ಉಚಿತವಾಗಿರುತ್ತವೆ. ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ.

ವಿ ಟೆಲಿಕಾಂ

ವಿ ಟೆಲಿಕಾಂ

ವಿ ಟೆಲಿಕಾಂ 539ರೂ. ಪ್ರೀಪೇಯ್ಡ್‌ಪ್ಲಾನ್‌
ಈ ಪ್ಲ್ಯಾನ್‌ನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್‌
ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ 16GB ಡೇಟಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ, ವಿ ಆಪ್ಸ್‌, ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಲಭ್ಯ.

Best Mobiles in India

English summary
Users looking for daily 1.5GB and 2GB data can opt for the newly introduced prepaid plans priced at Rs 666.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X