ಏರ್‌ಟೆಲ್ VS ವಿ ಟೆಲಿಕಾಂ VS ಜಿಯೋ 199ರೂ. ಪ್ಲ್ಯಾನ್: ರೀಚಾರ್ಜ್‌ಗೆ ಯಾವುದು ಸೂಕ್ತ?
ಭಾರತೀಯ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಗ್ರಾಹಕರಿಗಾಗಿ ಅತ್ಯುತ್ತಮ ಪ್ರೀಪೇಯ್ಡ್ ಪ್ಲ್ಯಾನ್ ಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಆ ಲಿಸ್ಟ್‌ನಲ್ಲಿ ಪ್ರೀಪೇಯ್ಡ್ ಯೋಜನೆಗಳ ಜೊತೆಗೆ ಪೋಸ್ಟ್‌ಪೇಯ್ಡ್ ಯೋಜನೆಗಳು ಒಳಗೊಂಡಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಲಭ್ಯ ಇರುವ ಕೆಲವು ಪ್ರೀಪೇಯ್ಡ್ ಯೋಜನೆಗಳು ಹೆಚ್ಚಿನ ಸೌಲಭ್ಯಗಳೊಂದಿಗೆ ಗ್ರಾಹಕರ ಗಮನ ಸೆಳೆದಿವೆ. ಅನೇಕ ಬಳಕೆದಾರರು 199ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಹೌದು, ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು 199ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಹೊಂದಿವೆ. ಈ ಮೂರು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಆಪ್ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ (ವಿ ಟೆಲಿಕಾಂ) 199ರೂ. ಪ್ಲ್ಯಾನಿನಲ್ಲಿ ಯಾವುದು ಉತ್ತಮ?..ಯೋಜನೆಗಳ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ 199ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋ ಟೆಲಿಕಾಂನ 199ರೂ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಜಿಯೋ ಟು ಜಿಯೋ ಹಾಗೂ ಜಿಯೋ ದಿಂದ ಇತರೆ ಟೆಲಿಕಾಂ ನೆಟವರ್ಕ ವಾಯಿಸ್ ಕರೆಗಳು ಅನಿಯಮಿತ ಉಚಿತವಾಗಿವೆ. ಜಿಯೋ ಆಪ್ಸ್ ಸೇವೆ ಲಭ್ಯ.
ವೊಡಾಫೋನ್-ಐಡಿಯಾ 199ರೂ. ಪ್ರೀಪೇಯ್ಡ್ ಪ್ಲ್ಯಾನ್
ವೊಡಾಫೋನ್-ಐಡಿಯಾ ಟೆಲಿಕಾಂನ 199ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಇದೀಗ ಒಟ್ಟು 24 ದಿನಗಳ ವ್ಯಾಲಿಡಿಟಿ ಒದಗಿಸಲಾಗಿದೆ. ಹಾಗೆಯೇ ಈ ಯೋಜನೆಯಲ್ಲಿ ಮೊದಲು ಪ್ರತಿದಿನ 1GB ಡೇಟಾ ಸೌಲಭ್ಯ ಲಭ್ಯ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯಗಳು ದೊರೆಯಲಿವೆ. ಹೆಚ್ಚುವರಿಯಾಗಿ ವಿ ಮ್ಯೂವಿಸ್ ಮತ್ತು ಟಿವಿ ಆಪ್ ಲಭ್ಯ.

ಏರ್‌ಟೆಲ್ 199ರೂ. ಪ್ರೀಪೇಯ್ಡ್ ಪ್ಲ್ಯಾನ್
ಏರ್‌ಟೆಲ್‌ನ 199ರೂ. ಪ್ರಿಪೇಯ್ಡ್ ಯೋಜನೆಯು ಸಹ ಒಟ್ಟು 24 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ಇದೆ. ಇದರೊಂದಿಗೆ 100 ಎಸ್‌ಎಂಎಸ್ ಮತ್ತು ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಲಭ್ಯವಾಗಲಿದೆ. ಹಾಗೆಯೇ ಹೆಚ್ಚುವರಿಯಾಗಿ ಉಚಿತ ಹೆಲೋ ಟ್ಯೂನ್ ಸೌಲಭ್ಯ ಸಹ ಇದೆ.


Click it and Unblock the Notifications








