ಏರ್‌ಟೆಲ್‌, ಜಿಯೋ, ವಿ ಟೆಲಿಕಾಂ 719ರೂ. ಪ್ಲ್ಯಾನ್:..ರೀಚಾರ್ಜ್‌ಗೆ ಯಾವುದು ಬೆಸ್ಟ್‌?

|

ದೇಶದಲ್ಲಿ ಟೆಲಿಕಾಂ ವಲಯದಲ್ಲಿ ಜಿಯೋ, ವಿ ಟೆಲಿಕಾಂ ಹಾಗೂ ಏರ್‌ಟೆಲ್ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆದಿವೆ. ಅವುಗಳಲ್ಲಿ ಪ್ರೀಪೇಯ್ಡ್‌ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳು ಸೇರಿವೆ. ಆದರೆ ಬಜೆಟ್‌ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಅನೇಕ ಬಳಕೆದಾರರು 719ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಏರ್‌ಟೆಲ್‌, ಜಿಯೋ, ವಿ ಟೆಲಿಕಾಂ 719ರೂ. ಪ್ಲ್ಯಾನ್:.ರೀಚಾರ್ಜ್‌ಗೆ ಯಾವುದು ಬೆಸ್ಟ್

ಹೌದು, ಏರ್‌ಟೆಲ್‌, ವಿ ಹಾಗೂ ಜಿಯೋ ಟೆಲಿಕಾಂ ಸಂಸ್ಥೆಗಳು 719ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಹೊಂದಿವೆ. ಈ ಮೂರು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್‌ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ, ಅನಿಯಮಿತ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ವಿ ಟೆಲಿಕಾಂ, ಜಿಯೋ ಮತ್ತು ಏರ್‌ಟೆಲ್ 719ರೂ. ಪ್ರಿಪೇಯ್ಡ್‌ ಪ್ಲ್ಯಾನಿನಲ್ಲಿ ಯಾವುದು ಬೆಸ್ಟ್‌? ಈ ಯೋಜನೆಗಳ ಒಟ್ಟಾರೇ ಪ್ರಯೋಜನಗಳೆನು ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌, ಜಿಯೋ, ವಿ ಟೆಲಿಕಾಂ 719ರೂ. ಪ್ಲ್ಯಾನ್:.ರೀಚಾರ್ಜ್‌ಗೆ ಯಾವುದು ಬೆಸ್ಟ್

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಏರ್‌ಟೆಲ್‌, ಜಿಯೋ, ವಿ ಟೆಲಿಕಾಂ 719ರೂ. ಪ್ಲ್ಯಾನ್:.ರೀಚಾರ್ಜ್‌ಗೆ ಯಾವುದು ಬೆಸ್ಟ್

ಏರ್‌ಟೆಲ್‌ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ರೀಚಾರ್ಜ್‌ಗೆ ಯಾವುದು ಉತ್ತಮ?
ವಿ ಟೆಲಿಕಾಂ, ಜಿಯೋ ಮತ್ತು ಏರ್‌ಟೆಲ್ ಈ ಮೂರು ಕಂಪನಿಗಳು 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ನಲ್ಲಿ ಆಕರ್ಷಕ ಸೌಲಭ್ಯಗಳನ್ನು ನೀಡಿವೆ. ಮೂರು ಟೆಲಿಕಾಂಗಳು ಬಹುತೇಕ ಸಾಮ್ಯತೆಯ ಪ್ರಯೋಜನ ಹೊಂದಿದ್ದರೂ, ಭಿನ್ನತೆ ಇದೆ. ಮೂರು ಪ್ಲ್ಯಾನ್‌ ಗಳು 84 ದಿನಗಳ ವ್ಯಾಲಿಡಿಟಿ ಒದಗಿಸಿವೆ. ಆದರೆ ಡೇಟಾ ವಿಷಯಕ್ಕೆ ಬಂದಾಗ ಭಿನ್ನತೆ ಕಾಣಬಹುದು.

Best Mobiles in India

English summary
airtel vs jio vs vi rs 719 plan: which one is better to recharge.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X