Home
ಸುದ್ದಿಜಾಲ

ಪ್ರತಿದಿನ ಡೇಟಾ ಜೊತೆಗೆ ಒಂದು ವರ್ಷದ ವ್ಯಾಲಿಡಿಟಿ ಬೇಕಿದ್ರೆ ಯಾವ ಪ್ಲ್ಯಾನ್‌ ಬೆಸ್ಟ್‌?

ಮುಂಚೂಣಿ ಜಿಯೋ ಟೆಲಿಕಾಂ ಸೇರಿದಂತೆ ಭಾರ್ತಿ ಏರ್‌ಟೆಲ್‌ (Airtel) ಹಾಗೂ ವಿ ಟೆಲಿಕಾಂ ಕಂಪನಿಗಳು ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆಯನ್ನು ಗ್ರಾಹಕರಿಗೆ ನೀಡಿವೆ. ಆ ಪೈಕಿ ದೀರ್ಘಾವಧಿಗಾಗಿ ವಾರ್ಷಿಕ ವ್ಯಾಲಿಡಿಟಿ ಯೋಜನೆಗಳ ಆಯ್ಕೆ ಸಹ ನೀಡಿವೆ. ಈ ಮೂರು ಟೆಲಿಕಾಂಗಳು 365 ದಿನಗಳ ವ್ಯಾಲಿಡಿಟಿ ರೀಚಾರ್ಜ್‌ ಪ್ಲ್ಯಾನ್‌ ಹೊಂದಿದ್ದರೂ, ಪ್ರಯೋಜನಗಳಲ್ಲಿ ಭಿನ್ನತೆ ಕಾಣಬಹುದು. ಹಾಗಾದರೇ ಒಂದು ವರ್ಷದ ವ್ಯಾಲಿಡಿಟಿ ಅಗತ್ಯ ಇದ್ದರೆ, ಯಾವ ಪ್ಲ್ಯಾನ್‌ ಬೆಸ್ಟ್‌?..ಮುಂದೆ ಓದಿರಿ

ಏರ್‌ಟೆಲ್‌ನ ವಾರ್ಷಿಕ ಪ್ಲ್ಯಾನ್‌ಗಳ ಮಾಹಿತಿ

ಏರ್‌ಟೆಲ್‌ ಟೆಲಿಕಾಂ 3599ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ - ಇದು ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ವಾರ್ಷಿಕ ಅವಧಿಯ ಪ್ಲ್ಯಾನಿನಲ್ಲಿ ನಿತ್ಯ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ.

ಪ್ರತಿದಿನ ಡೇಟಾ ಜೊತೆಗೆ ಒಂದು ವರ್ಷದ ವ್ಯಾಲಿಡಿಟಿ ಬೇಕಿದ್ರೆ ಯಾವ ಪ್ಲ್ಯಾನ್‌ ಬೆಸ್

ಏರ್‌ಟೆಲ್‌ ಟೆಲಿಕಾಂ 3999ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ - ಈ ಪ್ಲ್ಯಾನ್‌ 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಹಾಗೆಯೇ ಈ ವಾರ್ಷಿಕ ಅವಧಿಯ ಪ್ಲ್ಯಾನಿನಲ್ಲಿ ಪ್ರತಿದಿನ 2.5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದುಕೊಂಡಿದೆ. ಹಾಗೆಯೇ ಏರ್‌ಟೆಲ್‌ನ ಈ ಪ್ಲ್ಯಾನಿನಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಸೇವೆ ಲಭ್ಯ.

ಜಿಯೋದ ವಾರ್ಷಿಕ ಪ್ಲ್ಯಾನ್‌ಗಳ ಮಾಹಿತಿ

ಜಿಯೋ 3599ರೂ. ರೀಚಾರ್ಜ್‌ ಪ್ಲ್ಯಾನ್‌ - ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯ ಸೌಲಭ್ಯ ಪಡೆದಿದೆ. ನಿತ್ಯ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಈ ಯೋಜನೆಯಲ್ಲಿ 912.5GB ಡೇಟಾ ಸೌಲಭ್ಯ ಸಿಗುತ್ತದೆ.

ಜಿಯೋ 3999ರೂ. ರೀಚಾರ್ಜ್‌ ಪ್ಲ್ಯಾನ್‌ - ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಅವಧಿಯ ಸೌಲಭ್ಯ ಪಡೆದಿದೆ. ನಿತ್ಯ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ ಈ ಯೋಜನೆಯಲ್ಲಿ 912.5GB ಡೇಟಾ ಸೌಲಭ್ಯ ಲಭ್ಯ.

ವಿ ಟೆಲಿಕಾಂನ ವಾರ್ಷಿಕ ಪ್ಲ್ಯಾನ್‌ಗಳ ಮಾಹಿತಿ

ವಿ ಟೆಲಿಕಾಂನ 3499ರೂ. ರೀಚಾರ್ಜ್‌ ಪ್ಲ್ಯಾನ್‌ - ಇದು ಕೂಡಾ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಹೊಂದಿದೆ. ಈ ಯೋಜನೆಯಲ್ಲಿ ನಿತ್ಯ 1.5GB ಡೇಟಾ ಗ್ರಾಹಕರಿಗೆ ಲಭ್ಯವಾಗಲಿದೆ. ಅಲ್ಲದೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ಲಭ್ಯ.

ವಿ ಟೆಲಿಕಾಂನ 3699ರೂ. ರೀಚಾರ್ಜ್‌ ಪ್ಲ್ಯಾನ್‌ - ಈ ಪ್ಲ್ಯಾನ್‌ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಒಳಗೊಂಡಿದೆ. ಈ ಪ್ಲ್ಯಾನಿನಲ್ಲಿ ನಿತ್ಯ 2GB ಡೇಟಾ ಗ್ರಾಹಕರಿಗೆ ದೊರೆಯುತ್ತದೆ. ಅಲ್ಲದೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 3799ರೂ. ರೀಚಾರ್ಜ್‌ ಪ್ಲ್ಯಾನ್‌ - ವಿ ಟೆಲಿಕಾಂನ ಈ ಪ್ಲ್ಯಾನ್‌ ಸಹ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಒಳಗೊಂಡಿದೆ. ಈ ಪ್ಲ್ಯಾನಿನಲ್ಲಿ ನಿತ್ಯ 2GB ಡೇಟಾ ಗ್ರಾಹಕರಿಗೆ ದೊರೆಯುತ್ತದೆ. ಅಲ್ಲದೇ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಅಮೆಜಾನ್‌ ಪ್ರೈಮ್‌ ವಿಡಿಯೋ ಸೌಲಭ್ಯ ಸಹ ಲಭ್ಯ.

Best Mobiles in India

English summary
Airtel vs Jio vs Vi: Which Plans best for annual validity with daily data. check out all benefits and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+