Home
ಸುದ್ದಿಜಾಲ

ಜಿಯೋ, ಏರ್‌ಟೆಲ್‌, ವೊಡಾಫೋನ್ : 84 ದಿನಗಳ ವ್ಯಾಲಿಡಿಟಿಯಲ್ಲಿ ಯಾವುದು ಬೆಸ್ಟ್‌?

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್ ಹಾಗೂ ವೊಡಾಫೋನ್ ಟೆಲಿಕಾಂ ಸಂಸ್ಥೆಗಳು ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿವೆ. ಅವುಗಳಲ್ಲಿ ಅಧಿಕ ಡೇಟಾ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳು ಮತ್ತು ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿರುವ ಪ್ಲ್ಯಾನ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಪೂರು ಟೆಲಿಕಾಂಗಳ ನಡುವೆ ಪೈಪೋಟಿ ಇದೆ.

ಏರ್‌ಟೆಲ್, ಜಿಯೋ ಮತ್ತು ವೊಡಾಫೋನ್

ಹೌದು, ಏರ್‌ಟೆಲ್, ಜಿಯೋ ಮತ್ತು ವೊಡಾಫೋನ್ ಟೆಲಿಕಾಂಗಳು ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಿಗೆ ಡಿಮ್ಯಾಂಡ್ ಹೆಚ್ಚು ಅಧಿಕ. ಏರ್‌ಟೆಲ್, ಜಿಯೋ ಮತ್ತು ವೊಡಾಫೋನ್‌ಗಳ 84 ದಿನಗಳ ವ್ಯಾಲಿಡಿಟಿಯ ಪ್ಲ್ಯಾನ್‌ಗಳಲ್ಲಿ ಯಾವುದು ಬೆಸ್ಟ್‌?..ಪ್ರಯೋಜನೆಗಳೆನು ಎನ್ನುವುದನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ಏರ್‌ಟೆಲ್‌ನ 698.ರೂ ಪ್ಲ್ಯಾನ್

ಏರ್‌ಟೆಲ್‌ನ 698.ರೂ ಪ್ಲ್ಯಾನ್

ಏರ್‌ಟೆಲ್‌ನ 698.ರೂ ಪ್ರೀಪೇಡ್‌ ಪ್ಲ್ಯಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ಹಾಗೂ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಲಭ್ಯ. ಜೊತೆಗೆ ಈ ಪ್ಲ್ಯಾನ್‌ Wynk ಮ್ಯೂಸಿಕ್, ಏರ್‌ಟೆಲ್‌ ಎಕ್ಸ್‌ಟ್ರಿಮ್ ಪ್ರೀಮಿಯಮ್ ಸೌಲಭ್ಯಗಳು ಸಿಗುತ್ತವೆ.

ವೊಡಾಫೋನ್ 699ರೂ. ಪ್ಲ್ಯಾನ್

ವೊಡಾಫೋನ್ 699ರೂ. ಪ್ಲ್ಯಾನ್

ವೊಡಾಫೋನಿನ 699ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಒಟ್ಟು 168GB ಡೇಟಾ ಲಭ್ಯ.

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಯಾವುದು ಉತ್ತಮ ಆಯ್ಕೆ?

ಯಾವುದು ಉತ್ತಮ ಆಯ್ಕೆ?

ಜಿಯೋ, ಏರ್‌ಟೆಲ್‌ ಹಾಗೂ ವೊಡಾಫೋನ್ ಈ ಮೂರು ಟೆಲಿಕಾಂಗಳು 84 ದಿನಗಳ ವ್ಯಾಲಿಡಿಟಿ ಯೋಜನೆಗಳು ಆಕರ್ಷಕವಾಗಿವೆ. ಆದರೆ ಜಿಯೋದ ಪ್ಲ್ಯಾನ್ ಉಳಿದರಡು ಟೆಲಿಕಾಂಗಳಿಗೆ ಹೋಲಿಸಿದರೇ ಬೆಲೆಯಲ್ಲಿ ಕಡಿಮೆ ಆಗಿದೆ.ಹೀಗಾಗಿ ಬೆಲೆ ಮತ್ತು ವೇಗ ದೃಷ್ಠಿಯಿಂದ ಜಿಯೋ ಉತ್ತಮ ಅನಿಸಲಿದೆ. ಆದರೆ ಏರ್‌ಟೆಲ್‌ ಹಾಗೂ ವೊಡಾಫೋನ್‌ಗಳು ಇತರೆ ಕರೆಗಳಿಗೆ ಉಚಿತ ನಿಮಿಷಗಳ ಮಿತಿ ನೀಡಿಲ್ಲ. ಹೀಗಾಗಿ ಇದು ಹೆಚ್ಚು ವಾಯಿಸ್‌ ಕರೆ ಮಾಡುವ ಗ್ರಾಹಕರನ್ನು ಆಕರ್ಷಿಸಲಿದೆ.

Best Mobiles in India

English summary
Here listed the best prepaid Jio, Airtel and Vodafone-Idea plans with 84 days validity here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+