Home
ಸುದ್ದಿಜಾಲ

ಏರ್‌ಟೆಲ್‌ ಮತ್ತು ವಿ ಟೆಲಿಕಾಂ 699ರೂ. ಪ್ಲ್ಯಾನ್‌: ರೀಚಾರ್ಜ್‌ಗೆ ನಿಮ್ಮ ಆಯ್ಕೆ ಯಾವುದು?

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ವಿ ಮತ್ತು ಏರ್‌ಟೆಲ್‌ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗೆ ಪ್ರಿಪೇಯ್ಡ್‌ ಯೋಜನೆಗಳ ಟಾರೀಫ್ ಪಟ್ಟಿಯನ್ನು ಏರಿಕೆ ಮಾಡಿವೆ. ಅದಾಗ್ಯೂ, ಮೂರು ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರರನ್ನು ಉಳಿಸಿಕೊಳ್ಳಲು ಹಾಗೂ ಹೆಚ್ಚಿಸಿಕೊಳ್ಳಲು ಯತ್ನ ನಡೆಸಿವೆ. ಈ ನಿಟ್ಟಿನಲ್ಲಿ ಪೈಕಿ ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳು ನೇರ ಪೈಪೋಟಿ ಯಲ್ಲಿ ಕಾಣಿಸಿಕೊಂಡಿದ್ದು, ಇವು ಬಹುತೇಕ ಯೋಜನೆಗಳ ಬೆಲೆಯಲ್ಲಿ ಸಾಮ್ಯತೆ ಇವೆ. ಆದರೆ ಪ್ರಯೋಜನಗಳಲ್ಲಿ ಭಿನ್ನತೆ ಕಾಣಬಹುದಾಗಿದೆ. ಇನ್ನು ಅತ್ಯುತ್ತಮ ಪ್ರಯೋಜನ ಗಳ ಪ್ರೀಪೇಯ್ಡ್‌ ಯೋಜನೆ ಗಳು ಹೆಚ್ಚಾಗಿ ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ 699 ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಒಂದಾದಾಗಿದೆ.

ಎರಡು

ಹೌದು, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು 699ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಹೊಂದಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್‌ ಯೋಜನೆ ಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನ ಗಳು ಸೇರಿವೆ. ಹಾಗೆಯೇ ಹೆಚ್ಚುವರಿ ಯಾಗಿ ಆಪ್ಸ್‌ಗಳ ಸೌಲಭ್ಯಗಳು ಸಿಗಲಿವೆ. ಅದಾಗ್ಯೂ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಗಳ 699 ರೂ. ಪ್ರಿಪೇಯ್ಡ್‌ ಯೋಜನೆಯಲ್ಲಿ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಏರ್‌ಟೆಲ್‌ ಮತ್ತು ವಿ ಟೆಲಿಕಾಂನ 699 ರೂ. ಪ್ರಿಪೇಯ್ಡ್‌ ಪ್ಲ್ಯಾನಿನಲ್ಲಿ ಯಾವುದು ಉತ್ತಮ? ಯೋಜನೆಗಳ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್‌ ಸಹ ಲಭ್ಯವಾಗಲಿದೆ.

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 699ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್‌ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್‌ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ರೀಚಾರ್ಜ್‌ಗೆ ಯಾವುದು ಉತ್ತಮ?

ರೀಚಾರ್ಜ್‌ಗೆ ಯಾವುದು ಉತ್ತಮ?

ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಈ ಎರಡು ಕಂಪನಿಗಳು ಆಕರ್ಷಕ ಸೌಲಭ್ಯ ಗಳನ್ನು ನೀಡಿವೆ. ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಒಂದೇ ರೀತಿಯ ವ್ಯಾಲಿಡಿಟಿ ಪ್ರಯೋಜನ ನೀಡಿವೆ. ಹಾಗೆಯೇ ಈ ಎರಡು ಟೆಲಿಕಾಂಗಳು ಎಸ್‌ಎಮ್‌ಎಸ್‌ ಪ್ರಯೋಜನ ಸಹ ಪಡೆದಿದ್ದು, ದೈನಂದಿನ ಡೇಟಾ ಸೌಲಭ್ಯ ನೀಡಿವೆ. ಆದರೆ ಹೆಚ್ಚುವರಿ ಪ್ರಯೋಜನದಲ್ಲಿ ಭಿನ್ನತೆ ಕಾಣಬಹುದಾಗಿದೆ. ನೀವು ಹೆಚ್ಚಿನ ಸೌಲಭ್ಯ (ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್) ಬಯಸಿದರೇ, ಏರ್‌ಟೆಲ್‌ ಉತ್ತಮ ಅನಿಸಲಿದೆ. ಡೇಟಾ ರೋಲ್‌ ಓವರ್ ಸೌಲಭ್ಯ ಅಗತ್ಯ ಎನಿಸಿದರೇ, ವಿ ಟೆಲಿಕಾಂನ ಯೋಜನೆಯು ಆಕರ್ಷಕ ಎನಿಸಲಿದೆ.

Best Mobiles in India

English summary
Airtel VS Vi Telecom Rs 699 Plan Benefits Compared: Which One Better.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+